ಹನಿಟ್ರ್ಯಾಪ್‌ ಮಾಡಲೆಂದೇ ಮುನಿರತ್ನ ಸ್ಟುಡಿಯೋ ಇಟ್ಟಿದ್ದಾರೆ: ವೇಲು ನಾಯ್ಕರ್‌ ಆರೋಪ

Date:

  • ‘ಮುನಿರತ್ನ ಸಚಿವರಾದ ಮೇಲೆ ಬರೀ ಆಂಟಿಗಳೇ ಇರುತ್ತಿದ್ದರು’
  • ಹನಿಟ್ರ್ಯಾಪ್ ಮೂಲಕ ನಮ್ಮನ್ನು ಹೆದರಿಸುತ್ತಾರೆ: ಆರೋಪ

ಮುನಿರತ್ನ ಅವರು ನಿರ್ಮಾಪಕರಾಗಿ ಮಾಡಿದ ಮೊದಲ ಚಿತ್ರ ‘ಆಂಟಿ ಪ್ರೀತ್ಸೆ’. ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್‌ ಮಾಡಿಸುತ್ತಿದ್ದರು. ಹೀಗಾಗಿ ಮುನಿರತ್ನ ಸಚಿವರಾದ ಮೇಲೆ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್‌ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಬಿಬಿಎಂಪಿಯ ಮಾಜಿ ಕಾರ್ಪೊರೇಟರ್‌ ವೇಲು ನಾಯ್ಕರ್‌ ಆರೋಪ ಮಾಡಿದ್ದಾರೆ.

- Advertisement -

ಶಾಸಕ ಮುನಿರತ್ನ ಅವರ ಬೆಂಬಲಿಗರಾಗಿದ್ದ ವೇಲು ನಾಯ್ಕರ್‌ ಭಾನುವಾರ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, “ಹನಿಟ್ರ್ಯಾಪ್‌ ಮಾಡಲೆಂದೇ ಮುನಿರತ್ನ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಮುನಿರತ್ನ ಅವರು ಹನಿಟ್ರ್ಯಾಪ್ ಮಾಡಲು ಹೆದರಿಸಲು, ಜೆಪಿ ಪಾರ್ಕ್‌, ಡಾಲರ್ಸ್‌ ಕಾಲೋನಿಯಲ್ಲಿ ಸ್ಟುಡಿಯೋ ಇಟ್ಟಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮುನಿರತ್ನ ಅವರಿಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದ್ದೆವು. ನಿಮ್ಮದು ಈಸ್ಟ್‌ಮನ್ ಕಲರ್ ಪಿಕ್ಚರ್‌ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ ಎಂದು ನಮ್ಮನ್ನು ಹೆದರಿಸುತ್ತಿದ್ದರು” ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಣಿಪುರ ಗಲಭೆ; ಸರ್ಕಾರಗಳು ಮತ್ತು ಕೋರ್ಟುಗಳು ವಿವೇಚನೆ ಕಳೆದುಕೊಂಡವೇ?

ಮುನಿರತ್ನ ತಿರುಗೇಟು

ವೇಲು ನಾಯ್ಕರ್‌ ಮಾಡಿರುವ ಹನಿಟ್ರ್ಯಾಪ್‌ ಆರೋಪಕ್ಕೆ ಮುನಿರತ್ನ ತಿರುಗೇಟು ನೀಡಿದ್ದು, “ವೇಲು ನಾಯ್ಕರ್ ನನ್ನ ಆಪ್ತವಲಯದಲ್ಲಿಯೇ ಗುರುತಿಸಿಕೊಂಡಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ, ಸಹಜವಾಗಿಯೇ ಒಂದಿಷ್ಟು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಸೇರಿದ್ದಾರೆ. ಈ ಹಿಂದೆ ವೇಲು ನಾಯ್ಕರ್ ನನ್ನ ಮುಂದೆ ಸಂಸದ ಡಿಕೆ ಸುರೇಶ್ ಮತ್ತು ಕಾಂಗ್ರೆಸ್ ಮುಖಂಡೆ ಕುಸುಮಾ ಹನುಮಂತರಾಯಪ್ಪ ಬಗ್ಗೆ ತುಂಬಾ ಮಾತನಾಡಿದ್ದಾರೆ. ಕಾಂಗ್ರೆಸ್ ಸೇರಿರುವ ಅವರು ಇನ್ಮುಂದೆ ಡಿಕೆ ಸುರೇಶ್, ಕುಸುಮಾ ಬಗ್ಗೆ ಮಾತಾಡದಿದ್ರೆ ಸಾಕು. ಏನು ಮಾತನಾಡಿದ್ದಾರೆ ಎಂದು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...