ಬಿಹಾರ ಚುನಾವಣೆ | ಕೊಲೆ ಆರೋಪಿ ಜೆಡಿಯು ಅಭ್ಯರ್ಥಿ ‘ಬಾಹುಬಲಿ’ ಅನಂತ್ ಸಿಂಗ್‌ಗೆ ಭರ್ಜರಿ ಗೆಲುವು!

Date:

ಬಿಹಾರ ವಿಧಾನಸಭೆ ಕ್ಷೇತ್ರದ ಮೊಕಾಮಾದಲ್ಲಿ ಜೈಲಿನಲ್ಲಿರುವ ಜೆಡಿಯು ನಾಯಕ, ಕೊಲೆ ಆರೋಪಿ ‘ಬಾಹುಬಲಿ’ ಅನಂತ್ ಕುಮಾರ್ ಸಿಂಗ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅನಂತ್ ಸಿಂಗ್ 91,416 ಮತಗಳನ್ನು ಗಳಿಸಿ, ಆರ್‌ಜೆಡಿಯ ವೀಣಾ ದೇವಿಯನ್ನು(63,210 ಮತಗಳು) 28,206 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

- Advertisement -

ಮೊಕಾಮಾದ ರಾಜಕೀಯ ಕ್ಷೇತ್ರದಲ್ಲಿ ತೀವ್ರ ವಿವಾದಾತ್ಮಕ ಅಭ್ಯರ್ಥಿಯಾದ ಅನಂತ್ ಕುಮಾರ್ ಸಿಂಗ್ ಪ್ರಸ್ತುತ ಕೊಲೆ ಆರೋಪಲ್ಲಿ ಜೈಲಿನಲ್ಲಿದ್ದಾರೆ. ಜನ ಸುರಾಜ್ ಬೆಂಬಲಿಗ ದುಲಾರ್‌ಚಂದ್ ಯಾದವ್ ಅವರ ಹತ್ಯೆಗೆ ಸಂಬಂಧಿಸಿದಂತೆ ಚುನಾವಣೆ ನಡೆಯುವುದಕ್ಕೂ ಮುನ್ನವೇ ಪಟನಾ ಪೊಲೀಸರು ಅನಂತ್ ಸಿಂಗ್‌ ಅನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆಯಲ್ಲಿ ರಕ್ತಪಾತ: JSP ನಾಯಕ ದುಲಾರ್‌ಚಂದ್ ಹತ್ಯೆ; NDA ಅಭ್ಯರ್ಥಿ ಅನಂತ್ ಸಿಂಗ್ ಕೈವಾಡ?

ಮಣಿಕಾಂತ್ ಠಾಕೂರ್ ಮತ್ತು ರಂಜೀತ್ ರಾಮ್ ಎಂಬ ಇಬ್ಬರು ಸಹಚರರನ್ನೂ ಬಂಧಿಸಲಾಗಿದೆ. ಈಗಾಗಲೇ ಆರೋಪಿಗಳನ್ನು ಪಟನಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈ ಬಂಧನವು ಈಗಾಗಲೇ ಮೊಕಾಮಾದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಮೊಕಾಮಾದಲ್ಲಿ ಜೆಡಿಯು ಹಿನ್ನೆಡೆ ಸಾಧ್ಯತೆಯಿದೆ ಎನ್ನಲಾಗಿತ್ತು. ಆದರೆ ಇದೀಗ ಕೊಲೆ ಆರೋಪಿಯೇ ಗೆಲುವು ಸಾಧಿಸಿದ್ದಾರೆ.

ಮೊಕಾಮಾ ಈ ಹಿಂದಿನಿಂದಲೂ ಪ್ರಭಾವಿ ಮತ್ತು ವಿವಾದಾತ್ಮಕ ವ್ಯಕ್ತಿಗಳ ಭದ್ರಕೋಟೆಯಾಗಿಯೇ ಉಳಿದಿದೆ. ಬಿಹಾರದ ರಾಜಕೀಯ ವಲಯಗಳಲ್ಲಿ ‘ಬಾಹುಬಲಿ’ ಎಂದೇ ಕರೆಯಲಾಗುವ ಸಿಂಗ್ ಕೂಡಾ ವಿವಾದದ ಮೂಲಕವೇ ಮೊಕಾಮಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿ, ಯುವತಿಯರ ಮೇಲೆ ಹಲ್ಲೆ; ನಾಲ್ವರು RSS ಗೂಂಡಾಗಳ ಬಂಧನ

ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...