Breaking News | ಕೊಲೆ ಪ್ರಕರಣ- ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಜಾಮೀನು ಅರ್ಜಿ ವಜಾ; ಬಂಧನ ಸಾಧ್ಯತೆ

Date:

ರೌಡಿಶೀಟರ್‌ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಇದೀಗ, ಬಸವರಾಜ್‌ಗೆ ಮತ್ತೆ ಬಂಧನ ಭೀತಿ ಎದುರಾಗಿದ್ದು, ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಒಂದು ತಿಂಗಳ ಹಿಂದೆಯೇ ಬೈರತಿ ಬಸವರಾಜ್ ಅವರ ಬಂಧನಕ್ಕೆ ಸಿಐಡಿ ಅಧಿಕಾರಿಗಳು ಮುಂದಾಗಿದ್ದರು. ತಲೆ ಮರೆಸಿಕೊಂಡಿದ್ದ ಬಸವರಾಜ್‌ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಕೂಡ ಜಾರಿ ಮಾಡಿದ್ದರು. ಅವರಿಗೆ ಜಾಮೀನು ನೀಡಲು ಸೆಷನ್ಸ್‌ ನ್ಯಾಯಾಲಯ ಕೂಡ ನಿರಾಕರಿಸಿತ್ತು. ಬಳಿಕ ಅವರು ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ, ಹೈಕೋರ್ಟ್‌ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠವು ಬಸವರಾಜ್‌ ಅವರ ಅರ್ಜಿಯನ್ನು ವಜಾಗೊಳಿಸಿದೆ. ಇದೀಗ, ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಸಿದ್ದತೆ ನಡೆಸಿದ್ದಾರೆ. ಆದರೆ, ಬಸವರಾಜ್ ಅವರು ಸೋಮವಾರ ರಾತ್ರಿಯಿಂದಲೇ ತಲೆ ಮರೆಸಿಕೊಂಡಿದ್ದು, ಅವರ ಮೊಬೈಲ್ ಕೂಡ ಸ್ವಿಚ್‌ಆಫ್‌ ಆಗಿದೆ ಎಂದು ತಿಳಿದುಬಂದಿದೆ.

ಸದ್ಯ, ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರು ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಜಾರಿಯಲ್ಲಿದೆ. ರಾಜ್ಯದ ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿದ್ದಾರೆ. ಅವರ ಬಂಧಕ್ಕಾಗಿ ತಂಡಗಳನ್ನು ರಚಿಸಲಾಗಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ.

ಕಳೆದ ವರ್ಷ ಜುಲೈ 15ರಂದು ಹಲಸೂರಿನಲ್ಲಿ ನಡೆದ ರೌಡಿ ಬಿಕ್ಲುಶಿವನ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿ ಜಗದೀಶ್‌ ಅಲಿಯಾಸ್‌ ಜಗ್ಗನೊಂದಿಗೆ ಶಾಸಕ ಬಸವರಾಜ್‌ಗೆ ನೇರ ಸಂಪರ್ಕವಿದೆ. ಬಿಕ್ಲು ಶಿವನ ಹತ್ಯೆಗೂ ಮುನ್ನ ಹತ್ತಾರು ಬಾರಿ ಭೇಟಿ ಮಾಡಿದ್ದಾರೆ. ಶಾಸಕರ ವಿರುದ್ಧ ಕೆಲವು ಪ್ರಮುಖ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದೆ ಎಂದು ಸಿಐಡಿ ಮೂಲಗಳು ಹೇಳಿವೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...