ಸೋಲು ಖಚಿತ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಬದಾಮಿ ಕ್ಷೇತ್ರ ಬಿಟ್ಟಿದ್ದಾರೆ: ಸಚಿವ ನಿರಾಣಿ

Date:

  • ಮುಂದೆಯೂ ಬಿಜೆಪಿ ಪಕ್ಷವೇ ಅಧಿಕಾರಕ್ಕೆ ಬರಲಿದೆ
  • ಕಾಂಗ್ರೆಸ್‌ನವರೇ ಸಿದ್ದರಾಮಯ್ಯರನ್ನು ಸೋಲಿಸುತ್ತಾರೆ

ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಬದಾಮಿಯಲ್ಲಿ ಸೋಲಿನ ಭೀತಿ ಖಚಿತವಾಗಿರುವ ಕಾರಣ ಅವರು ಕ್ಷೇತ್ರ ಬಿಟ್ಟು ತೆರಳಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬದಾಮಿಯಲ್ಲಿ ನಡೆಸಿರುವ ಆಂತರಿಕ ಸರ್ವೆಯಲ್ಲಿ ಸಿದ್ದರಾಮಯ್ಯನವರಿಗೆ ಸೋಲು ಎಂಬ ಮಾಹಿತಿ ಇದೆ. ಈ ಹಿನ್ನೆಲೆ ಅವರು ಬದಾಮಿ ಬಿಟ್ಟು ಹೋಗಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯನವರ ಬಗ್ಗೆ ನನಗೆ ವೈಯಕ್ತಿಕವಾಗಿ ಗೌರವ ಇದೆ. ಆದರೆ ಕಾಂಗ್ರೆಸ್ ಪಕ್ಷದವರೇ ಅವರು ಎಲ್ಲೇ ನಿಂತರೂ ಸೋಲುವಂತೆ ಮಾಡುತ್ತಾರೆ ಎಂದು ನಿರಾಣಿ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಸರ್ಕಾರ ಎಲ್ಲ ಸಮಾಜದವರಿಗೆ ಅನುಕೂಲ ಮಾಡಿದೆ ಎಂದರು.

ಸರ್ವರ ಅಭಿವೃದ್ಧಿ ಬಿಜೆಪಿ ಮೂಲಮಂತ್ರ. ಅದಕ್ಕೆ ಪಕ್ಷ ಹೆಚ್ಚು ಒತ್ತು ನೀಡುತ್ತಿದೆ. ವಿರೋಧ ಮಾಡುವ ಕಾಂಗ್ರೆಸ್ ಪಕ್ಷದವರು, ಮೀಸಲಾತಿ ವಿಚಾರವಾಗಿ ಸಮಗ್ರ ಮಾಹಿತಿ ತಿಳಿದುಕೊಂಡು ಮಾತನಾಡಬೇಕು ಎಂದು ಮುರುಗೇಶ್ ನಿರಾಣಿ ಹೇಳಿದರು.

ಮುಂದೆ ನಮ್ಮ ಸರ್ಕಾರ ಬಂದಾಗ ಈಗ ಜಾರಿಗೆ ತಂದಿರುವ ಎಲ್ಲಾ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಹೇಳಿಕೆಗೂ ನಿರಾಣಿ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್‌ನವರು, ಅಧಿಕಾರಕ್ಕೆ ಬರುವುದಿಲ್ಲ ಎಂದಾದ ಮೇಲೆ ಅವರೇನು ಬದಲಾವಣೆ ಮಾಡುತ್ತಾರೆ ಎಂದ ನಿರಾಣಿ, ಮುಂದೆಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ, ನಾವೇ ಸರ್ಕಾರ ಮಾಡುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? :ಕಾಕಂಬಿ ಹಗರಣದ ತನಿಖೆಯಾದರೆ ಮಾಡಾಳ್‌ರಂತೆ ಸಿಎಂ ಬೊಮ್ಮಾಯಿ ಜೈಲುಪಾಲು: ಕಾಂಗ್ರೆಸ್‌

ಮರಳಿ ಮುಖ್ಯಮಂತ್ರಿಯಾಗುವೆ ಎಂದಿದ್ದ ಬೊಮ್ಮಾಯಿ ಅವರ ಹೇಳಿಕೆ ವಿಚಾರದಲ್ಲಿ ಮಾತನಾಡಿದ ನಿರಾಣಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮರಳಿ ಸಿಎಂ ಆದರೂ ತಪ್ಪೇನಿದೆ.

ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಕಾರ್ಯ ಮಾಡುತ್ತಿದ್ದಾರೆ. ಅವರೇ ಮುಖ್ಯಮಂತ್ರಿ ಆದಲ್ಲಿ ಏನೂ ತಪ್ಪಿಲ್ಲ ಎಂದು ಹೇಳಿದರು.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದ ಮೇಲೆ ಕಾರ್ಪೊರೇಟ್ ನಿಯಂತ್ರಣವಿದೆ; ಬಿಜೆಪಿ ಪ್ರಣಾಳಿಕೆಯನ್ನ ರೈತರು ನಂಬುವುದಿಲ್ಲ: ರಾಕೇಶ್ ಟಿಕಾಯತ್

2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ರೈತರು ನಂಬುವುದಿಲ್ಲ....

ಬೀದರ್‌ | ಬೃಹತ್‌ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ

ಬೀದರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಈಶ್ವರ ಖಂಡ್ರೆ ಮಗ...

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...