ಉಗ್ರರ ಸಂಪರ್ಕ ಆರೋಪ: ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಚಿಂತನೆ; ಕಾಂಗ್ರೆಸ್ ಮುಖಂಡ ಸಲೀಂ ಅಹ್ಮದ್

Date:

“ವಿಜಯಪುರದ ಮುಸ್ಲಿಂ ಧಾರ್ಮಿಕ ಮುಖಂಡ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿಯವರನ್ನು ಭಯೋತ್ಪಾದಕರ ಬೆಂಬಲಿಗ, ಸಂಪರ್ಕವಿದೆ ಎಂದು ಆರೋಪಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲು ಮುಸ್ಲಿಂ ಸಮುದಾಯದ ಧರ್ಮ ಗುರುಗಳು ಚರ್ಚೆ ನಡೆಸಿದ್ದಾರೆ” ಎಂದು ಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾಹಿತಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿರುವ ಅವರು, “ಶಾಸಕ ಯತ್ನಾಳ್ಮೇ ಲೆ ಮಾನನಷ್ಟ ಮೊಕದ್ದಮೆ ಹಾಕಲು ಮುಸ್ಲಿಂ ಸಮುದಾಯದ ಧರ್ಮ ಗುರುಗಳು ಚರ್ಚೆ ನಡೆಸಿದ್ದಾರೆ. ಚರ್ಚೆಯ ಬಳಿಕ ನಿರ್ಧಾರ ಹೇಳುತ್ತೇವೆ” ಎಂದು ಸಲೀಂ ಅಹ್ಮದ್ ತಿಳಿಸಿದ್ದಾರೆ.

“ಯತ್ನಾಳ್ ಅವರು ಪ್ರಚಾರಕ್ಕಾಗಿ ಗಾಳಿಯಲ್ಲಿ ಗುಂಡು ಹೊಡೆಯಬಾರದು. ಧರ್ಮಗುರುಗಳ ಮೇಲಿನ ಆಪಾದನೆ ಸಾಬೀತು ಮಾಡಲಿ. ಈ ಬಗ್ಗೆ ತನ್ವೀರ್ ಹಾಶ್ಮಿಯವರು ಕೂಡ ಯತ್ನಾಳ್ ಅವರಿಗೆ ಸವಾಲೆಸೆದಿದ್ದಾರೆ. ಸಿಎಂ ಅವರೊಂದಿಗೆ ವೇದಿಕೆಯಲ್ಲಿ ಯಾರೊಬ್ಬರೂ ಕೂಡ ಉಗ್ರರ ಸಂಪರ್ಕವಿರುವವರಲ್ಲ. ಯತ್ನಾಳ್ ಅವರು ಕೇವಲ ರಾಜಕೀಯಕ್ಕಾಗಿ, ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮುಸ್ಲಿಂ ಧರ್ಮಗುರುಗಳ ಬಗ್ಗೆ ಯತ್ನಾಳ ಹಗುರವಾಗಿ ಮಾತನಾಡಿದ್ದಾರೆ. ಐಸಿಸ್ ನಂಟಿದ್ದವರು ವೇದಿಕೆಯಲ್ಲಿದ್ದರು ಎಂದು ಯತ್ನಾಳ್ ಯಾವ ಸಭೆಯ ಬಗ್ಗೆ ಹೇಳಿದ್ದಾರೋ ಅದರಲ್ಲಿ ನಾನೂ ಇದ್ದೆ. ಅಂತಹ ಯಾವುದೇ ಘಟನೆ ನಡೆದಿಲ್ಲ. ಆ ವೇದಿಕೆಯಲ್ಲಿ ಅಂಥವರು ಯಾರೂ ಕುಳಿತಿರಲಿಲ್ಲ. ಕೀಳುಮಟ್ಟದ ಹೇಳಿಕೆ ಕೊಡುವುದನ್ನು ಯತ್ನಾಳ್ ಮೊದಲು ಬಿಡಬೇಕು” ಎಂದರು.

ಇದೇ ವಿಚಾರದ ಬಗ್ಗೆ ಮಾತನಾಡಿರುವ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್, “ಯತ್ನಾಳ್ ಮೌಲ್ವಿ ಅವರ ಮೇಲೆ ಸಾಕ್ಷಿ ಸಮೇತ ಆರೋಪ ಮಾಡಬೇಕು. ಸಾಕ್ಷಿ ಇದ್ದರೆ ಮಾತ್ರ ಆರೋಪಕ್ಕೆ ಅರ್ಥ ಬರುತ್ತದೆ. ಕೇಂದ್ರ ಗೃಹ ಸಚಿವರು ಈ ವಿಚಾರದಲ್ಲಿ ಏನು ಕ್ರಮ ಕೈಗೊಳ್ಳುತ್ತಾರೋ ನೋಡೋಣ” ಎಂದರು.

ಹತಾಶೆಯಿಂದ ಯತ್ನಾಳ್‌ರಿಂದ ಸುಳ್ಳು ವಿವಾದ ಸೃಷ್ಟಿ: ಅಂಜುಮನ್‌ ಸಂಸ್ಥೆ

ಮೌಲವಿ ತನ್ವೀರ್‌ ಹಾಶ್ಮಿ ಅವರ ಮೇಲೆ ಯತ್ನಾಳ್ ಅವರ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಅಂಜುಮನ್‌ ಸಂಸ್ಥೆ ಮಾಜಿ ಅಧ್ಯಕ್ಷ ಮಹಮ್ಮದ್‌ ಇಸ್ಮಾಯಿಲ್‌ ತಮಟಗಾರ, ಹತಾಶೆಯಿಂದ ಯತ್ನಾಳ್ ಅವರು ಈ ವಿವಾದ ಸೃಷ್ಟಿ ಮಾಡಿದ್ದಾರೆ. ಅವರ ವರ್ತನೆ ಖಂಡನೀಯ” ಎಂದು ತಿಳಿಸಿದ್ದಾರೆ.

“ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಪ್ರಚಾರ ಮಾಡುವುದು, ಧಾರ್ಮಿಕ ವಿವಾದ ಸೃಷ್ಟಿಸುವುದು ಬಿಟ್ಟು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಮಾತನಾಡಬೇಕು. ಅವರು ಜನತಾ ದಳದಲ್ಲಿ ಇದ್ದಾಗ ಮುಸ್ಲಿಮರ ಜತೆ ಓಡಾಡಿಲ್ಲವೇ? ವಿಜಯಪುರದಲ್ಲಿ ನಿಮ್ಮ ಜೊತೆ ಯಾವ ಪೀರಾ ಇದ್ದಾರೆ ಎಲ್ಲವೂ ನಮಗೆ ಗೊತ್ತಿದೆ. ಅವರು ಹತಾಶರಾಗಿದ್ದು, ಧಾರವಾಡದ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಒಳ್ಳೆಯದು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...