ಇದ್ರೀಸ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣ: ರಾಜಸ್ಥಾನದಲ್ಲಿ ಆರೋಪಿ ಪುನೀತ್ ‌ಕೆರೆಹಳ್ಳಿ ಬಂಧನ

Date:

  • ಮೂರ್ನಾಲ್ಕು ದಿನಗಳಿಂದ ತಲೆಮರೆಸಿಕೊಂಡಿದ್ದ ಪುನೀತ್
  • ರಾಜಸ್ಥಾನದಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಕನಕಪುರದ ಸಾತನೂರು ಬಳಿ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ವ್ಯಾಪಾರಿ ಇದ್ರೀಸ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣದ ಆರೋಪಿ ಪುನೀತ್‌ ಕೆರೆಹಳ್ಳಿ ಅವರನ್ನು ರಾಜಸ್ಥಾನದಲ್ಲಿ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

- Advertisement -

ಏ.1 ರಂದು ರಾಮನಗರ ಜಿಲ್ಲೆಯ ಸಾತನೂರಿ ಬಳಿ ಜಾನುವಾರಗಳ ವ್ಯಾಪಾರಿ ಇದ್ರೀಸ್ ಪಾಷಾ ಅವರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೇ ಸ್ಥಳದಲ್ಲಿ ಈ ವ್ಯಕ್ತಿ ಸಾಯುವ ಕೆಲವೆ ಗಂಟೆಗಳ ಹಿಂದೆ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ಜಾನುವಾರುಗಳ ರಕ್ಷಣೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಾನುವಾರುಗಳನ್ನು ರಕ್ಷಣೆ ಮಾಡುವ ನೆಪದಲ್ಲಿ ಇದ್ರೀಸ್ ಪಾಶಾ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ, ಪುನೀತ್‌ ಮತ್ತು ಸಹಚರರ ವಿರುದ್ಧ ಮೃತರ ಕುಟುಂಬಸ್ಥರು ಸಾತನೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು ಮತ್ತು ಠಾಣೆ ಬಳಿ ಪ್ರತಿಭಟನೆ ನಡೆಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಸಾತನೂರು ಪೊಲೀಸರು, ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರ ವಿರುದ್ಧ ಭಾರತೀಯ ದಂಡ ಸಂಹಿತೆ 41, 504, 506, 324, 302, 34 ರ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ?: ಎನ್‌ಸಿಇಆರ್‌ಟಿ ಯಡವಟ್ಟು | 12ನೇ ತರಗತಿಯ ಪಠ್ಯದಿಂದ ಗಾಂಧಿ ಕುರಿತ ಕೆಲ ಉಲ್ಲೇಖಗಳೇ ಮಾಯ!

ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಪುನೀತ್, “ನನ್ನ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ ವಿಚಾರಣೆ ಎದುರಿಸಿ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ. ಸದ್ಯ ನಾನು ದೇವಸ್ಥಾನ ಸುತ್ತುತ್ತಿದ್ದೇನೆ” ಎಂದು ಹೇಳಿಕೆ ನೀಡಿರುವ ವಿಡಿಯೋ ಹರಿಬಿಟ್ಟಿದ್ದನು.

ಆದರೆ, ಆರೊಪಿಯನ್ನು ಬಂಧಿಸುವಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಪುನೀತ್‌ ಮತ್ತು ತಂಡವನ್ನು ಬಂಧಿಸಲು ವಿಶೇಷ ತಂಡ ರಚನೆ ಮಾಡಿದ್ದ ಪೊಲೀಸರು, ಇಂದು ರಾಜಸ್ಥಾನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...