ಹೋಳಿಯಂದು ಮುಸ್ಲಿಮರು ಮನೆಯೊಳಗಿರಿ: ಬಿಹಾರ ಬಿಜೆಪಿ ಶಾಸಕರ ಹೇಳಿಕೆಗೆ ತೇಜಸ್ವಿ ತಿರುಗೇಟು

Date:

Advertisements

“ಈ ವರ್ಷ ಪವಿತ್ರ ರಂಜಾನ್ ಮಾಸದ ಶುಕ್ರವಾರವೇ ಹೋಳಿ ಬರುತ್ತದೆ. ಈ ದಿನದಂದು ಮುಸ್ಲಿಮರು ಒಳಗೆಯೇ ಇರಿ. ಹಿಂದೂಗಳು ತಮ್ಮ ಹಬ್ಬವನ್ನು ಯಾವುದೇ ಅಡೆತಡೆಗಳಿಲ್ಲದೆ ಆಚರಿಸಲು ಬಿಡಿ ಎಂದು ಬಿಹಾರದ ಬಿಜೆಪಿ ಶಾಸಕರೊಬ್ಬರು ಸೋಮವಾರ ಮುಸ್ಲಿಮರಿಗೆ ತಿಳಿಸಿದ್ದಾರೆ. ಸದ್ಯ ಬಿಹಾರದ ಶಾಸಕನ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಮಧುಬನಿ ಜಿಲ್ಲೆಯ ಬಿಸ್ಫಿ ವಿಧಾನಸಭಾ ಕ್ಷೇತ್ರದ ಶಾಸಕ ಹರಿಭೂಷಣ್ ಠಾಕೂರ್ ಬಚೌಲ್ ಅವರು ವಿಧಾನ ಸಭಾ ಆವರಣದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದರು. “ಒಂದು ವರ್ಷದಲ್ಲಿ 52 ಜುಮ್ಮಾಗಳು (ಶುಕ್ರವಾರಗಳು) ಇರುತ್ತವೆ. ಅವುಗಳಲ್ಲಿ ಒಂದು ಹೋಳಿಯ ದಿನದಂದೇ ಬಂದಿದೆ. ಆದ್ದರಿಂದ, ಮುಸ್ಲಿಮರು ಶುಕ್ರವಾರದಂದು ಹಿಂದೂಗಳು ಹಬ್ಬವನ್ನು ಆಚರಿಸಲು ಬಿಡಬೇಕು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಹೋಳಿ ಮತ್ತು ರಂಜಾನ್ ಹಬ್ಬ ಶಾಂತಿಯುತವಾಗಿ ಆಚರಿಸಲು ಜಿಲ್ಲಾಧಿಕಾರಿಗಳ ಕರೆ

Advertisements

“ಶುಕ್ರವಾರ ಹಿಂದೂಗಳು ಮುಸ್ಲಿಮರ ಮೇಲೆ ಬಣ್ಣ ಹಾಕಿದರೆ ಮುಸ್ಲಿಮರು ಬೇಸರಪಡಬಾರದು. ಬಣ್ಣ ಹಾಕುವುದರಿಂದ ಅಷ್ಟೊಂದು ಸಮಸ್ಯೆ ಇದ್ದರೆ, ನೀವು ಮನೆಯಲ್ಲಿಯೇ ಇರಿ. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಇದು ಅತ್ಯಗತ್ಯ” ಎಂದಿದ್ದಾರೆ.

ಮುಸ್ಲಿಮರು ಉಪವಾಸ ಆಚರಿಸುತ್ತಿದ್ದಾರೆ. ಶುಕ್ರವಾರ ವಿಶೇಷ ಪ್ರಾರ್ಥನೆ ಇರುತ್ತದೆ ಅಲ್ಲವೇ? ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, “ಮುಸ್ಲಿಮರು ಯಾವಾಗಲೂ ಎರಡು ನೀತಿಗಳನ್ನು ಹೊಂದಿದ್ದಾರೆ. ಅಬಿರ್-ಗುಲಾಲ್ (ಬಣ್ಣದ ಪುಡಿ) ಮಾರಾಟ ಮಾಡಲು ಮುಸ್ಲಿಮರು ಅಂಗಡಿ ತೆರೆಯುತ್ತಾರೆ. ಈ ಮೂಲಕ ಹಣ ಗಳಿಸಿ ಸಂತೋಷಪಡುತ್ತಾರೆ. ಆದರೆ ಅದೇ ಬಣ್ಣ ತಮ್ಮ ಬಟ್ಟೆಗಳಿಗೆ ಬಿದ್ದರೆ ದೋಜಖ್‌ಗೆ (ನರಕ) ಹೋಗುವ ಭಯ ಅವರಲ್ಲಿ ಶುರುವಾಗುತ್ತದೆ” ಎಂದು ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ ಶಾಸಕರ ಹೇಳಿಕೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ತಿರುಗೇಟು ನೀಡಿದ್ದಾರೆ. “ಅಂತಹ ಹೇಳಿಕೆಗಳನ್ನು ನೀಡಲು ಅವರು ಯಾರು? ಅವರು ಅಂತಹ ವಿಷಯಗಳನ್ನು ಹೇಗೆ ನೀಡುತ್ತಾರೆ” ಎಂದು ಪ್ರಶ್ನಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡ ಅವರು, “ಮುಖ್ಯಮಂತ್ರಿ ಎಲ್ಲಿದ್ದಾರೆ? ಅವರಿಗೆ ಬಚೋಲ್ ಅವರನ್ನು ಶಿಕ್ಷಿಸಲು ಧೈರ್ಯವಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ‘ಗೃಹಲಕ್ಷ್ಮಿ’ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

“ಇದು ‘ರಾಮ್ ಮತ್ತು ರಹೀಮ್’ ಅವರನ್ನು ನಂಬುವ ದೇಶ. ಇದು ಬಿಹಾರ – ಇಲ್ಲಿ, ಐದು ಅಥವಾ ಆರು ಹಿಂದೂಗಳು ಒಬ್ಬ ಮುಸ್ಲಿಂ ಸಹೋದರನನ್ನು ರಕ್ಷಿಸಲು ನಿಲ್ಲುತ್ತಾರೆ” ಎಂದು ತೇಜಸ್ವಿ ಹೇಳಿದ್ದಾರೆ. “ಹಬ್ಬಗಳ ವಿಷಯದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಯಾವುದೇ ಸಮಸ್ಯೆ ಇಲ್ಲ” ಎಂದು ಆರ್‌ಜೆಡಿ ಶಾಸಕ ಮತ್ತು ಮಾಜಿ ಸಚಿವ ಇಸ್ರೇಲ್ ಮನ್ಸೂರಿ ಹೇಳಿದ್ದಾರೆ.

ಬಿಜೆಪಿಗರು ನಿರಂತರವಾಗಿ ಹಿಂದೂಗಳ ನಡುವೆ ಮುಸ್ಲಿಮರು ವಿರುದ್ಧ ವಿಷಬೀಜ ಬಿತ್ತಿದ್ದರೆ, ಇತ್ತರೆ ಎಸ್‌ಡಿಪಿಐ ಮುಸ್ಲಿಮರನ್ನು ಹಿಂದೂಗಳ ವಿರುದ್ಧ ಪರೋಕ್ಷವಾಗಿ ಎತ್ತಿಕಟ್ಟುತ್ತಿದೆ. ಇವೆರಡೂ ರಾಜಕೀಯಗಳ ನಡುವೆ ಸಿಲುಕಿರುವುದು ಬಡ ಯುವಕರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X