ಬಿಜೆಪಿಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ: ಸಿ ಎಂ ಸಿದ್ದರಾಮಯ್ಯ

Date:

Advertisements

ಬಿಜೆಪಿಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ. ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಎರಡೂ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, “ಸುರಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಅವರಿಗೆ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ. ಇದು ಅಪ್ಪಟ ಸುಳ್ಳು” ಎಂದರು.

“ಮೋದಿಯಿಂದ ಹಿಡಿದು ಅಮಿತ್ ಶಾ ಮತ್ತು ರಾಜೂಗೌಡನವರೆಗೂ ಸುಳ್ಳುಗಳ ಸರದಾರರು. ಮನುಷ್ಯರು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸುಳ್ಳುಗಳನ್ನು ಇವರು ನೀರು ಕುಡಿದಷ್ಟೆ ಸಲೀಸಾಗಿ ಹೇಳುತ್ತಾರೆ. ಇವರ ಸುಳ್ಳುಗಳನ್ನು ನಂಬಿ ಹತ್ತತ್ತು ವರ್ಷ ಮೋಸ ಹೋಗಿದ್ದು ಸಾಕು” ಎಂದರು.

Advertisements

“ಮೊದಲ ಮತ್ತು ಎರಡನೆ ಹಂತದ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಮೋದಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಬಿಜೆಪಿಯವರೇ ಮಾಡಿಸಿರುವ ಸಮೀಕ್ಷೆಯಲ್ಲೇ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ 200 ಸೀಟು ಗೆದ್ದರೆ ಹೆಚ್ಚು ಎನ್ನುವಂತಹ ಸ್ಥಿತಿ ಇದೆ. ಹೀಗಾಗಿ ಸೋಲಿಗೆ ಹೆದರಿ ಮೋದಿ, ಶಾ, ರಾಜುಗೌಡ ಭರ್ಜರಿ ಸುಳ್ಳುಗಳನ್ನು ಹೇಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ದಿವಂಗತ ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಪತ್ನಿ ಮತ್ತು ಪುತ್ರರು ಸೇರಿ ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X