ಶಿಗ್ಗಾಂವಿ ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

Date:

  • ಮುಂದಿನ ಬಾರಿಯೂ ಬಿಜೆಪಿಯದ್ದೇ ಅಧಿಕಾರ ಎಂದ ಬೊಮ್ಮಾಯಿ
  • ಬಿಜೆಪಿಯಲ್ಲಿ ಒಂದೇ ಕ್ಷೇತ್ರಕ್ಕೆ ಹತ್ತಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆ

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾನು ನನ್ನ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಕ್ಕೆ ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಗಳ ಮೇಲೆ ಭರವಸೆ ಇದೆ. ಹೀಗಾಗಿ ಮುಂದಿನ ಬಾರಿಯೂ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

ಏಪ್ರಿಲ್ 8ರಂದು ಕೇಂದ್ರ ಸಂಸದೀಯ ಮಂಡಳಿ ಸಭೆ ದೆಹಲಿಯಲ್ಲಿ ನಡೆಯಲಿದೆ ಎಂದು ಬೊಮ್ಮಾಯಿ ತಿಳಿಸಿದರು.ಈ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಫೈನಲ್ ಆಗುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಎಲ್ಲ ಕ್ಷೇತ್ರಗಳಲ್ಲೂ ಅಭಿಪ್ರಾಯ ಸಂಗ್ರಹಿಸಿದ್ದೇವೆ. ನಿನ್ನೆ ಮೊನ್ನೆ ಜಿಲ್ಲಾ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

ನಾಳೆ ನಾಡಿದ್ದು ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ಮಾಡುತ್ತೇವೆ ಬಳಿಕ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಇಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿವಾಗಲಿದೆ ಎಂದವರು ಹೇಳಿದರು.

ಸಾಮಾಜಿಕ ನ್ಯಾಯ ಪಾಲನೆ ಮಾಡಿದ್ದು ಬಿಜೆಪಿ. ನಾವು ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅಲ್ಲದೆ ಅದನ್ನು 9ನೇ ಶೆಡ್ಯೂಲ್‌ನಲ್ಲಿ ಸೇರಿಸಲು ಶಿಫಾರಸ್ಸು ಮಾಡಿದ್ದೇವೆ ಇದು ನಮ್ಮ ಬದ್ಧತೆ. ನಮ್ಮ ಸರ್ಕಾರ ಘೋಷಿಸಿರುವ ಮೀಸಲಾತಿಯನ್ನು ಅಧಿಕಾರಕ್ಕೆ ಬಂದ ಮೇಲೆ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಅವರು ಅಧಿಕಾರಕ್ಕೆ ಬರುವ ಪ್ರಶ್ನೆಯೆ ಇಲ್ಲ ಎಂದರು.

ಇದನ್ನ ಹಿಂದೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಜೊತೆಗೆ ವಿಪಕ್ಷಕ್ಕೆ ಆ ಶಕ್ತಿಯೂ ಇಲ್ಲ ಅವಕಾಶವೂ ಇಲ್ಲ. ಇದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ದಲಿತ, ಲಿಂಗಾಯತ, ಒಕ್ಕಲಿಗ ವಿರೋಧಿಯಾಗಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?:ಮೀನುಗಾರ ಸಮುದಾಯಕ್ಕೆ ಟಿಕೆಟ್‌ ನೀಡದಿದ್ದರೆ ಚುನಾವಣೆ ಬಹಿಷ್ಕಾರ; ರಾಮಚಂದ್ರ…

ಉಳಿದಂತೆ ಪಕ್ಷ ಸಂಘಟನೆ ಮತ್ತು ಟಿಕೆಟ್ ಹಂಚಿಕೆ ವಿಚಾರದಲ್ಲಿನ ಗೊಂದಲಗಳ ಬಗ್ಗೆಯೂ ಮಾತನಾಡಿದ ಸಿಎಂ, ಎಲ್ಲ ಪಕ್ಷಗಳಂತೆ ನಮ್ಮಲ್ಲೂ ಗೊಂದಲ ಇರುವುದು ನಿಜ ಎಂದರು.

ನಮ್ಮಲ್ಲಿ ಪ್ರತಿ ಕ್ಷೇತ್ರಕ್ಕೂ ಹತ್ತು ಮಂದಿ ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಪರ ವಿರೋಧ, ಆಕಾಂಕ್ಷೆ-ಅವಕಾಶಗಳ ಬಗ್ಗೆ ಗೊಂದಲ ಮೂಡುವುದು ಸಹಜ ಎಂದು ಅವರು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...