ನನ್ನ ಅಸಮಾಧಾನ ಶಿವಮೊಗ್ಗ, ತುಮಕೂರು ಸೇರಿ ನಾಲ್ಕು ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತೆ: ಮಾಧುಸ್ವಾಮಿ

Date:

ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಹೇಳಿದರು.

- Advertisement -

ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ ಅವರು ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತುಮಕೂರಿನಲ್ಲಿ ನನಗೆ ಅನ್ಯಾಯ ಆಗಿದೆ. ಲಿಂಗಾಯತ ಸಮುದಾಯಕ್ಕೆ ಟಿಕೆಟ್ ಕೊಡಿ ಅಂತಾ ನಾನು ಕೇಳಿಲ್ಲ. ಲಿಂಗಾಯತರಿಗೆ ಟಿಕೆಟ್ ಕೊಟ್ಟರೆ ಸ್ಥಳೀಯರಿಗೆ ಕೊಡಿ, ಅದನ್ನ ತಪ್ಪಿಸಬೇಡಿ ಅಂತಾ ಕೇಳಿದ್ದೇವೆ. ಐದಾರು ಜಿಲ್ಲೆಯಲ್ಲಿ ನಮ್ಮ ಸಮುದಾಯದವರು ವೋಟ್ ಹಾಕಬೇಕಿದೆ. ನಂಗೆ ಎಂಪಿ ನಿಲ್ಲು ಅಂದೋರು ಯಡಿಯೂರಪ್ಪನವರೇ. ಎರಡು ಮೂರು ಸಾರಿ ನಾನು ಬೇಡ ಅಂದಾಗ ನಿಲ್ಲು ಎಂದವರು ಯಡಿಯೂರಪ್ಪ. ಇದು ಬಹಿರಂಗ ಆಗಬೇಕು ಅಷ್ಟೇ” ಎಂದು ಮಾಧುಸ್ವಾಮಿ ಆಗ್ರಹಿಸಿದರು.

“ನಾವು ದುಡ್ಡಲ್ಲಿ ರಾಜಕಾರಣ ಮಾಡಿದವರಲ್ಲ. ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ಅವರ ಬಳಿಯೂ ಎಲ್ಲ ವಿಚಾರ ಮಾತನಾಡುತ್ತೇನೆ. ಅವರು ಏನು ಹೇಳುತ್ತಾರೆ ಅದಕ್ಕೆ ನಾನು ಬದ್ಧನಗಿರುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

ಸೋಮಣ್ಣ ಮೇಲೆ ಅಸಮಾಧಾನವಿಲ್ಲ

ವೈಯಕ್ತಿವಾಗಿ ವಿ ಸೋಮಣ್ಣ ಮೇಲೆ ಅಸಮಾಧಾನವಿಲ್ಲ. ತುಮಕೂರಿನಲ್ಲಿ ಬೆಳೆದವನಾಗಿ ಹೊರಗಿನವರಿಗೆ ಟಿಕೆಟ್ ಕೊಡುವುದಕ್ಕೆ ನನ್ನ ಒಪ್ಪಿಗೆ ಇಲ್ಲ. ನನಗೆ ಕೊಡಬೇಕು ಅಂತಲ್ಲ, ಜಿಲ್ಲೆಯ ಯಾರಿಗೆ ಕೊಟ್ಟರೂ ತೊಂದರೆ ಇರಲಿಲ್ಲ.ಅವರು ರಾಜ್ಯಸಭೆಗೆ ಹೋಗುತ್ತಾರೆ ಎಂದಾಗ ನಾನು ಸಂತೋಷಪಟ್ಟಿದ್ದೆ. ಆದರೆ, ಅವರು ಜಾತಿ ಇದೆ ಎಂಬ ಕಾರಣಕ್ಕೆ ಎಲ್ಲಾ ಕಡೆ ಹೋಗುತ್ತಿದ್ದರೆ ಸ್ಥಳೀಯರ ಸ್ಥಿತಿ ಏನು” ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಸೇರುವ ಬಗ್ಗೆ ಸ್ಪಷ್ಟನೆ

“ನಾನು ಕಾಂಗ್ರೆಸ್ ಸೇರಲಿದ್ದೇನೆ ಎಂದು ಎಲ್ಲೋ ಪತ್ರಿಕೆಯಲ್ಲಿ ವರದಿ ಮಾಡಿದ್ದಾರೆ. ಕಾಂಗ್ರೆಸ್ ನ ಬಿ ಫಾರಂ ಮಾಧುಸ್ವಾಮಿಗೆ ಸಿಗುತ್ತದೆ ಎಂದು ಉಲ್ಲೇಖಿಸಿದ್ದಾರೆ. ಬಿ ಫಾರಂ ಬದಲಾಯಿಸಿ ಕಾಂಗ್ರೆಸ್ ಪಕ್ಷದವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸಲಾರೆ. ಬಿಜೆಪಿಯವರು ಕರೆದರೂ ಚುನಾವಣೆಗೆ ನಿಲ್ಲುವುದಿಲ್ಲ. ಯಾರೋ ನೋಡಿ ಬಂದ ಹೆಣ್ಣನ್ನು ನಾನೇಕೆ ಮದುವೆಯಾಗಲಿ” ಎಂದು ಮಾಧುಸ್ವಾಮಿ ಮಾರ್ಮಿಕವಾಗಿ ಹೇಳಿದರು.

“ನಾನು ಯಾರಿಗೂ ಕಾಂಗ್ರೆಸ್​​ಗೆ ಸೇರುತ್ತೇನೆ, ಬಂದೇ ಬರುತ್ತೇನೆ ಎಂದು ಹೇಳಿಲ್ಲ. ಮನೆಗೆ ಬಂದವರ ಬಳಿ ಸೌಜನ್ಯವಾಗಿ ಮಾತನಾಡಿದ್ದೇನೆ. ಹಾಗಂತ ಬರಲ್ಲ ಎಂದೂ ಎಲ್ಲೂ ಹೇಳಲ್ಲ. ಬಿಜೆಪಿಯಿಂದ ಅಶೋಕ್ ಬಂದಿದ್ದು ನಿಜ. ಜಯರಾಮ್​​ರನ್ನು ಕರೆದುಕೊಂಡು ಗೋಪಾಲಯ್ಯ ಅವರೆಲ್ಲ ಬಂದು ಹೋದರು. ನನಗೆ ಅಸಮಾಧಾನ ಇರುವುದು ಯಡಿಯೂರಪ್ಪನವರ ಮೇಲೆ. ಯಡಿಯೂರಪ್ಪನವರೇ ಉತ್ತರ ಕೊಡಬೇಕು ಎಂದು ಹೇಳಿ ಕಳಿಸಿರುವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...