ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟ ನಿಲ್ಲಲ್ಲ: ಬಸನಗೌಡ ಪಾಟೀಲ್‌ ಯತ್ನಾಳ ಸ್ಪಷ್ಟನೆ

Date:

ಕುಟುಂಬ ರಾಜಕಾರಣದ ವಿರುದ್ಧದ ನನ್ನ ಹೋರಾಟ, ನನ್ನ ಬದ್ಧತೆ ಅಚಲವಾಗಿ ಇರಲಿದೆ. ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಹೇಳಿದ್ದಾರೆ.

- Advertisement -

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಕುಟುಂಬದ ವಿರುದ್ಧ ನಿರಂತರವಾಗಿ ಹೇಳಿಕೆ ನೀಡುತ್ತಿರುವ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರಿಗೆ ಬಿಜೆಪಿ ಶೋಕಾಸ್‌ ನೋಟಿಸ್‌ ನೀಡಿದ ಬೆನ್ನಲ್ಲೇ ಅವರು ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ನಾನು ಉತ್ತರಿಸುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ತೆರದಿಡುವೆ. ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಹಾಗೂ ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಯಕತ್ವದ ಬಗ್ಗೆ ಬಹಿರಂಗ ಟೀಕೆ; ಶಾಸಕ ಯತ್ನಾಳ್‌ಗೆ ಶೋಕಾಸ್ ನೋಟಿಸ್

ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ಸೋಮವಾರ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್​ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...