ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

Date:

Advertisements

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, “ಇಂದಿರಾಗಾಂಧಿ ಯುದ್ಧದ ಸಮಯದಲ್ಲಿ ತಮ್ಮ ಚಿನ್ನವನ್ನು ದೇಶಕ್ಕೆ ನೀಡಿದರೆ, ನನ್ನ ತಾಯಿಯ ಮಂಗಳಸೂತ್ರ ಈ ದೇಶಕ್ಕಾಗಿ ಬಲಿದಾನವಾಗಿದೆ” ಎಂದಿದ್ದಾರೆ.

ಮಂಗಳವಾರ ಬೆಂಗಳೂರಿನ ಎಚ್.ಎಸ್.ಆರ್ ಬಡಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಬಹಿರಂಗ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

“ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಾಯಿತು. ಕಾಂಗ್ರೆಸ್‌ 55 ವರ್ಷ ಆಡಳಿತ ನಡೆಸಿದೆ. ಯಾರಾದರೂ ನಿಮ್ಮ ಚಿನ್ನವನ್ನು ಕಿತ್ತುಕೊಂಡರೇ? ನಿಮ್ಮ ಮಾಂಗಲ್ಯವನ್ನು ಕಿತ್ತುಕೊಂಡರೇ? ನರೇಂದ್ರ ಮೋದಿಗೆ ಮಂಗಳಸೂತ್ರದ ಮಹತ್ವದ ಬಗ್ಗೆ ಗೊತ್ತಿದ್ದಿದ್ದರೆ, ಈ ರೀತಿಯ ಅನೈತಿಕ ಮಾತುಗಳನ್ನು ಆಡುತ್ತಿರಲಿಲ್ಲ” ಎಂದು ವಾಗ್ದಾಳಿ ನಡೆಸಿದರು.

Advertisements

“ರೈತನ ಮೇಲೆ ಸಾಲ ಹೆಚ್ಚಾದರೆ ಆತನ ಹೆಂಡತಿ ತನ್ನ ಮಂಗಳಸೂತ್ರವನ್ನು ಅಡಮಾನ ಇಡಲು ನೀಡುತ್ತಾಳೆ. ಮನೆಯಲ್ಲಿ ಮದುವೆ ಅಥವಾ ಯಾರಾದರೂ ಅನಾರೋಗ್ಯ ಪೀಡಿತರಾದರೆ ಮಹಿಳೆ ತನ್ನ ಆಭರಣಗಳನ್ನು ಅಡಮಾನ ಇಡಲು ನೀಡುತ್ತಾಳೆ. ನೋಟುಗಳನ್ನು ಅಮಾನ್ಯ ಮಾಡಿದಾಗ ಮಹಿಳೆಯರು ಕಷ್ಟಪಟ್ಟು ಉಳಿತಾಯ ಮಾಡಿದ್ದನ್ನು ಕಸಿದುಕೊಂಡಾಗ ಮೋದಿಗೆ ಆ ಮಹಿಳೆಯರ ಬಗ್ಗೆ ನೆನಪು ಬರಲಿಲ್ಲವೇ?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದರು.

“ದೇಶದಲ್ಲಿ ರಾತ್ರೋರಾತ್ರಿ ಲಾಕ್‌ಡೌನ್ ಮಾಡಿದಾಗ ಕಾರ್ಮಿಕರು ನಡೆದುಕೊಂಡೇ ತಮ್ಮ ತಮ್ಮ ಮನೆಗಳತ್ತ ಹೊರಟಾಗ, ಕುಟುಂಬಗಳ ನಿರ್ವಹಣೆಗಾಗಿ ಮಹಿಳೆಯರು ತಮ್ಮ ಆಭರಣಗಳನ್ನು ಅಡವಿಟ್ಟು ಮನೆಗಳಿಗೆ ಆಸರೆಯಾದಾಗ ಮೋದಿ ಎಲ್ಲಿದ್ದರು? ರೈತರ ಆಂದೋಲನದಲ್ಲಿ 600 ರೈತರು ಸಾವನ್ನಪ್ಪಿದರು. ಅವರ ಪತ್ನಿಯರ ಮಂಗಳಸೂತ್ರದ ಬಗ್ಗೆ ಮೋದಿ ಆಲೋಚನೆ ಮಾಡಿದ್ದಾರೆಯೇ?” ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿಗೆ ಸರಣಿ ಪ್ರಶ್ನೆ ಕೇಳಿದರು.

“ಮಣಿಪುರದಲ್ಲಿ ಯೋಧನ ಪತ್ನಿಯನ್ನು ವಿವಸ್ತ್ರಗೊಳಿಸಿ ಬೀದಿಯಲ್ಲಿ ಮೆರವಣಿಗೆ ಮಾಡಿದಾಗ ಆಕೆಯ ಮಂಗಳಸೂತ್ರದ ಬಗ್ಗೆ ಮೋದಿಗೆ ಆಲೋಚನೆ ಬರಲಿಲ್ಲವೇ? ಈಗ ಚುನಾವಣೆ ಸಂದರ್ಭದಲ್ಲಿ ಮಹಿಳೆಯರನ್ನು ಬೆದರಿಸುತ್ತಿರುವ ನಿಮಗೆ ನಾಚಿಕೆಯಾಗಬೇಕು. ಮಹಿಳೆಯರ ಮಂಗಳಸೂತ್ರದ ಬಗ್ಗೆ ಅಷ್ಟೇ ಕಾಳಜಿಯಿದ್ದಿದ್ದರೆ, ಅವರ ಮಕ್ಕಳಿಗೆ ಉದ್ಯೋಗ, ಬೆಲೆ ಏರಿಕೆಗೆ ಕಡಿವಾಣ, ವಿದ್ಯಾರ್ಥಿಗಳಿಗೆ ಶಿಕ್ಷಣ, ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಶ್ರಮ ಪಡುತ್ತಿದ್ದರು ಎಂದು ಅವರು ಹೇಳಿದರು.

“ಎಷ್ಟು ವರ್ಷಗಳ ಕಾಲ ಚುನಾವಣೆಯನ್ನು ಧರ್ಮದ ಆಧಾರದಲ್ಲಿ ನಡೆಸುತ್ತೀರಾ? ಈ ಚುನಾವಣೆಯನ್ನು ಬೆಲೆ ಏರಿಕೆ, ನಿರುದ್ಯೋಗ, ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳ ಆಧಾರದ ಮೇಲೆ ಎದುರಿಸಿ ನೋಡೋಣ” ಎಂದು ಪ್ರಧಾನಿ ಮೋದಿಯವರಿಗೆ ಪ್ರಿಯಾಂಕಾ ಗಾಂಧಿ ಸವಾಲೆಸೆದಿದ್ದಾರೆ.

“ಈಗ ಸಮಯ ಬಂದಿದೆ. ನೀವು ಎಚ್ಚರಗೊಳ್ಳದಿದ್ದರೆ ದೇಶ ಪಾತಾಳಕ್ಕೆ ಹೋಗುತ್ತದೆ. ಈ ಸರಕಾರ ಎಲ್ಲ ಅನೈತಿಕ ಕೆಲಸಗಳನ್ನು ಮಾಡುತ್ತಿದ್ದರೂ ಮಾಧ್ಯಮಗಳಲ್ಲಿ ಅದನ್ನು ತಪ್ಪು ಎಂದು ಹೇಳಲು ಸಾಧ್ಯವಾಗುತ್ತಿಲ್ಲ. ವಿಪಕ್ಷ, ಮಾಧ್ಯಮ, ನ್ಯಾಯಾಲಯ, ಜನರ ಅಧಿಕಾರ ರಕ್ಷಿಸಲು ಇರುವ ಎಲ್ಲ ಸಂಸ್ಥೆಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ನಾವು ಅದರ ವಿರುದ್ಧ ಹೋರಾಡುತ್ತಿದ್ದೇವೆ. ನೀವು ಯಾವಾಗ ಹೋರಾಡುತ್ತೀರಾ?” ಎಂದು ಅವರು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

“10 ವರ್ಷಗಳ ಆಡಳಿತದಲ್ಲಿ ಜನಸಾಮಾನ್ಯ ಜೀವನದಲ್ಲಿ ಯಾವ ಬದಲಾವಣೆ ತಂದಿದ್ದಾರೆ ಎಂಬುದನ್ನು ಸಾರ್ವಜನಿಕ ವೇದಿಕೆಯಲ್ಲಿ ಬಂದು ಮೋದಿ ಹೇಳಲಿ” ಎಂದು ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಬಹಿರಂಗ ಸವಾಲೆಸೆದಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X