ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

Date:

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ ದೇವಸ್ಥಾನಗಳಲ್ಲಿ ಈಗಲೂ ಪ್ರವೇಶವಿಲ್ಲ. ಬಿಜೆಪಿ ಸರ್ಕಾರವು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಹಿಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ‘ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು’ ಎಂಬ ಕಾರಣಕ್ಕೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

- Advertisement -

ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜಕೀಯದ ಕಾರಣದಿಂದಾಗಿ ಕಾಂಗ್ರೆಸ್ ರಾಮಮಂದಿರದ ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿಲ್ಲ ಎಂಬ ಮೋದಿ ಅವರ ಆರೋಪಕ್ಕೆ ಅವರು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇನ್ನೂ ಅನೇಕ ದೇವಾಲಯಗಳಲ್ಲಿ ಪರಿಶಿಷ್ಟ ಜಾತಿಗಳ ಜನರಿಗೆ ಪ್ರವೇಶ ನೀಡಲಾಗುತ್ತಿಲ್ಲ. ನಾನು (ಅಯೋಧ್ಯೆಗೆ) ಹೋಗಿದ್ದರೆ ಮೋದಿ ಸಹಿಸಿಕೊಳ್ಳುತ್ತಿದ್ದರೇ” ಎಂದು ಪ್ರಶ್ನಿಸಿದರು.

“ಅಯೋಧ್ಯೆಯಲ್ಲಿನ ರಾಮ ಮಂದಿರದ ಶಂಕುಸ್ಥಾಪನೆ ಮತ್ತು ಹೊಸ ಸಂಸತ್ ಭವನದ ಉದ್ಘಾಟನೆಗೆ ಮುರ್ಮು ಅವರನ್ನು ಮೋದಿ ಆಹ್ವಾನಿಸಲಿಲ್ಲ. ಈ ಹಿಂದೆ, ಕೋವಿಂದ್ ಅವರಿಗೆ ಹೊಸ ಸಂಸತ್ ಭವನದ ಶಂಕುಸ್ಥಾಪನೆ ಮಾಡಲು ಅವಕಾಶ ನೀಡಲಿಲ್ಲ” ಎಂದು ಹೇಳಿದರು.

“ನನ್ನ ಜನರಿಗೆ ಇಂದಿಗೂ ಎಲ್ಲ ದೇವಾಲಯಗಳಲ್ಲಿ ಪ್ರವೇಶವಿಲ್ಲ. ರಾಮಮಂದಿರವನ್ನು ಬಿಡಿ, ನೀವು ಎಲ್ಲಿಗೆ ಹೋದರೂ, ಪ್ರವೇಶಕ್ಕಾಗಿ ಹೋರಾಟ ಮಾಡಬೇಕು. ಹಳ್ಳಿಯಲ್ಲಿ ಸಣ್ಣ ದೇವಾಲಯಗಳಿಗೂ ಅಲ್ಲಿನ ಪ್ರಬಲ ಜಾತಿಯವರು ಅನುಮತಿಸುವುದಿಲ್ಲ. ಕುಡಿಯುವ ನೀರಿಗೆ ಅವಕಾಶ ನೀಡುವುದಿಲ್ಲ. ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡುವುದಿಲ್ಲ. ಕುದುರೆ ಮೇಲೆ ಮೆರವಣಿಗೆ ಹೋಗುವ ಮದುಮಗನನ್ನು ಸಹ ನೀವು (ಬಿಜೆಪಿ-ಆರ್‌ಎಸ್‌ಎಸ್‌) ಸಹಿಸುವುದಿಲ್ಲ. ಜನರು ಅವರನ್ನು ಎಳೆದುಕೊಂಡು ಹೊಡೆಯುತ್ತಾರೆ. ದಲಿತರು ಮೀಸೆ ಬಿಟ್ಟರೆ ಸಹಿಸುವುದಿಲ್ಲ. ನಾನು ರಾಮಮಂದಿರಕ್ಕೆ ಹೋಗಿದ್ದರೆ, ಅವರು (ಮೋದಿ-ಬಿಜೆಪಿ) ಸಹಿಸಿಕೊಳ್ಳುತ್ತಿದ್ದರೇ” ಎಂದು ಖರ್ಗೆ ಹೇಳಿದರು.

“ರಾಮಮಂದಿರದ ಕಾಮಗಾರಿ ಪೂರ್ಣಗೊಂಡಿಲ್ಲ. ಅಗಲೇ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ದಾರೆ. ಮೋದಿ ಅವರು ರಾಮಮಂದಿರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ರಾಜಕೀಯದೊಂದಿಗೆ ಧರ್ಮವನ್ನು ಏಕೆ ಬೆರೆಸುತ್ತಿದ್ದಾರೆ” ಎಂದರು ಕಿಡಿಕಾರಿದರು.

ಮೋದಿ ಅವರ ‘ಚಾರ್‌ಸೋ (400) ಪಾರ್’ ಪ್ರಚಾರವನ್ನು ತಳ್ಳಿ ಹಾಕಿದ ಖರ್ಗೆ, “ಜನರು ಬದಲಾವಣೆಗಾಗಿ ಹಾತೊರೆಯುತ್ತಿದ್ದಾರೆ. ಮೋದಿ ಅವರ ಮೂರನೇ ಅವಧಿಯ ಕನಸು ಈಡೇರುವುದಿಲ್ಲ” ಎಂದರು.

“ಮೋದಿ ಏನು ಹೇಳಿದರೂ ನಂಬುವುದು ಕಷ್ಟ. ಅವರ ಹಿಂದಿನ ಪ್ರಧಾನಿಗಳು ಎಂದಿಗೂ ಸುಳ್ಳು ಹೇಳುತ್ತಿರಲಿಲ್ಲ. 400 ಸ್ಥಾನವೆಂಬ ಉತ್ಪ್ರೇಕ್ಷಿತ ಅಂಕಿಅಂಶಗಳನ್ನು ನೀಡುತ್ತಿರಲಿಲ್ಲ. ಆದರೆ, ಮೋದಿ ‘ಚಾರ್‌ಸೋ ಪಾರ್’ ಎನ್ನುತ್ತಿದ್ದಾರೆ. ನಮ್ಮ ಲೋಕಸಭೆಯ ಸಂಖ್ಯಾಬಲ 543 ಆಗಿರುವುದರಿಂದ ಅವರು ‘ಚೇಸೋ (600) ಪಾರ್’ ಎಂದು ಹೇಳದಿದ್ದರೆ ಒಳ್ಳೆಯದು. ಇಲ್ಲದಿದ್ದರೆ, ಅವರು ‘600 ಪಾರ್’ ಎಂದೂ ಹೇಳುತ್ತಾರೆ” ಎಂದು ಲೇವಡಿ ಮಾಡಿದರು.

ಮೋದಿ ಮೂರನೇ ಅವಧಿಗೆ ಆಯ್ಕೆಯಾದರೆ ದೇಶಕ್ಕೆ ಅಪಾಯವಿದೆ ಎಂದ ಖರ್ಗೆ, “ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿಗರು ‘ನಮಗೆ ಮೂರನೇ ಎರಡರಷ್ಟು ಬಹುಮತ ಕೊಡಿ. ಹಾಗಾಗಿ ಸಂವಿಧಾನ ಬದಲಿಸುತ್ತೇವೆ’ ಎನ್ನುತ್ತಿದ್ದಾರೆ. ಅಂತಹ ಹೇಳಿಕೆಯ ವಿರುದ್ಧ ಮೋದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಕ್ಷದಿಂದ ಹೊರಹಾಕಿಲ್ಲ. ಟಿಕೆಟ್ ನಿರಾಕರಿಸಿಲ್ಲ. ಮೋದಿ ಅವರು ಮೌನವಾಗಿದ್ದಾರೆ.  ಯಾರಾದರೂ ಸಂವಿಧಾನದ ವಿರುದ್ಧ ಮಾತನಾಡಿದರೆ ಅವರನ್ನು ದೇಶವಿರೋಧಿಗಳೆಂದು ಪರಿಗಣಿಸುವಾಗ, ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರ ವಿರುದ್ಧ ಮೋದಿ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...