ಈ ವರ್ಷ ಬರಗಾಲದಿಂದ ರಾಜ್ಯದ ರೈತರು 30,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಸುಮಾರು 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ” ಎಂದರು.
‘‘ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ. ರೈತರಿಗೆ ಈ ವರ್ಷ 30 ಸಾವಿರ ರೂ. ನಷ್ಟವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ನಿಯಮಗಳ ಪ್ರಕಾರ ಕೇಂದ್ರ ಸರ್ಕಾರದ ತಂಡ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ. ಕೇಂದ್ರದಿಂದ 4,860 ಕೋಟಿ ರೂ. ನೆರವು ಕೇಳಲಾಗಿದೆ” ಎಂದು ಅವರು ಹೇಳಿದರು.
“ಈ ಹಿಂದೆ ರಾಜ್ಯ ಸರ್ಕಾರ ರಾಜ್ಯದ 195 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿತ್ತು. ಇದೀಗ, ಸಚಿವ ಸಂಪುಟ ಉಪಸಮಿತಿಯು ಇನ್ನೂ 21 ತಾಲೂಕುಗಳಲ್ಲಿ ಬರಪೀಡಿತವೆಂದು ಘೋಷಣೆ ಮಾಡಿದೆ. ಒಟ್ಟಾರೆ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ” ಎಂದರು.
ರೈತರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ನೀರು, ಉದ್ಯೋಗ ಮತ್ತಿತರ ಪರಿಹಾರ ಕ್ರಮಗಳಿಗೆ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿ ನೀಡಲಿದೆ” ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಮಳೆ ಕೈ ಕೊಟ್ಟಿದೆ. ಬೆಳೆ ನಷ್ಟವಾಗಿದೆ. ಬರಗಾಲದ ಸ್ಥಿತಿ ಇಡಿ ರಾಜ್ಯವನ್ನು ಆವರಿಸಿದೆ. ಆದರೂ ಸರ್ಕಾರ ರೈತರ, ನಾಡಿನ ಜನತೆಯ ಕೈ ಹಿಡಿಯಲಿದೆ ಎಂದು ಭರವಸೆ ನೀಡಿದರು.