ದಸರಾ ಸಂದರ್ಭದಲ್ಲಿ ತೀವ್ರ ಚರ್ಚೆಗೊಳಗಾಗುತ್ತಿರುವ ಮಹಿಷ ದಸರಾ ಹಾಗೂ ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ತಿಳಿಸಿದ್ದಾರೆ.
ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
“ಮಹಿಷ ದಸರಾ ಮತ್ತು ಚಲೋ-ಚಾಮುಂಡಿ ಬೆಟ್ಟ” ಕಾರ್ಯಕ್ರಮಗಳನ್ನು ನಡೆಸಲು ಪೊಲೀಸ್ ಅನುಮತಿಯನ್ನು ನಿರಾಕರಿಸಿರುವ ಬಗ್ಗೆ. pic.twitter.com/qrawEaMF3G
— Commissioner of Police Mysuru (@CPMysuru) October 10, 2023
ಅ.13ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಅನುಮತಿ ಕೋರಿತ್ತು. ಮತ್ತೊಂದು ಕಡೆ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಬಿಜೆಪಿ ನಗರ ಸಮಿತಿ ಅನುಮತಿ ಕೋರಿತ್ತು.
“ಮೇಲ್ಕಂಡ ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಎರಡು ಕಾರ್ಯಕ್ರಮಗಳಿಗೆ ಪೊಲೀಸ್ ಅನುಮತಿಯನ್ನು ನಿರಾಕರಣೆ ಮಾಡಲಾಗಿದೆ’ ಎಂದು ಮೈಸೂರು ನಗರ ಪೊಲೀಸ್ ಅಯುಕ್ತ ಬಿ.ರಮೇಶ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.