ಮೈಸೂರು | ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು: ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

Date:

Advertisements

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

“ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು. ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು” ಎಂದರು.

Advertisements

“ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು” ಎಂದು ಹೇಳಿದರು.

“ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ‌ ಮಾಡಿಕೊಳ್ಳುವುದು ಸೂಕ್ತ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಕೆಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ” ಎಂದು ಮುಖ್ಯಮಂತ್ರಿಗಳು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಡಳಿತದ ಅಧಿಕಾರಿಗಳು ಸಭೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X