ಮೈಸೂರು | ಯತೀಂದ್ರಗೆ ಲೋಕಸಭಾ ಟಿಕೆಟ್‌ ನೀಡುವಂತೆ ಒತ್ತಾಯಿಸಿ ಅಂಚೆ ಅಭಿಯಾನ

Date:

2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರು ಅಂಚೆ ಅಭಿಯಾನ ನಡೆಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯರು ಮತ್ತು ಕಾರ್ಯಕರ್ತರು ಮೈಸೂರಿನಲ್ಲಿ ಅಂಜೆ ಅಭಿಯಾನ ನಡೆಸಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯತೀಂದ್ರ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂಚೆ ಪತ್ರಗಳನ್ನು ಅಂಚೆ ಪಟ್ಟಿಗೆಗೆ ಹಾಕಿ ಮಾತನಾಡಿದ ಕಾಂಗ್ರೆಸ್‌ ಮುಖಂಡ ಲೋಕೇಶ್ ಪಿಯಾ, “ಪ್ರತಾಪ್ ಸಿಂಹ ಸೋಲಿಸಲು ಯತೀಂದ್ರ ಸಿದ್ದರಾಮಯ್ಯ ಸೂಕ್ತ ಅಭ್ಯರ್ಥಿ. ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು. ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಅಂಚೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇವೆ” ಎಂದು ಹೇಳಿದ್ದಾರೆ.

“ಯತೀಂದ್ರ ಅವರನ್ನು ಎಲ್ಲ ಸಮುದಾಯದ ಜನರು ಇಷ್ಟಪಡುತ್ತಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬೇರೆ ಯಾರಿಗೆ ಕಾಂಗ್ರೆಸ್‌ ಟಿಕೆಟ್ ಕೊಟ್ಟರು, ಅವರು ಗೆಲ್ಲುವುದಿಲ್ಲ. ಯತೀಂದ್ರಗೆ ಟಿಕೆಟ್‌ ಕೊಟ್ಟರೆ, ಖಂಡಿತ ಅವರು ಗೆಲುವು ಸಾಧಿಸುತ್ತಾರೆ. ಅವರಿಗೆ ಟಿಕೆಟ್ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’...

ಮುಂಗಾರು ಅಂತ್ಯ; 236 ತಾಲೂಕುಗಳ ಪೈಕಿ 4 ತಾಲೂಕುಗಳಲ್ಲಷ್ಟೇ ಅತ್ಯಧಿಕ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್...

ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ 4 ಗ್ರಾಮ...

ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ...