ಸ್ವಂತ ಕ್ಷೇತ್ರ ಅಭಿವೃದ್ಧಿ ಪಡಿಸಲಾಗದ ಎನ್‌. ಎ. ಹ್ಯಾರಿಸ್‌ ಬೆಂಗಳೂರನ್ನು ಅಭಿವೃದ್ಧಿ ಪಡಿಸುತ್ತಾರೆಯೇ? ಎಎಪಿ ವಿರೋಧ

Date:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್‌ ಅವರನ್ನು ನೇಮಕ ಮಾಡಿದ್ದಕ್ಕೆ ಆಮ್‌ ಆದ್ಮಿ ಪಾರ್ಟಿ ವಿರೋಧ ವ್ಯಕ್ತಪಡಿಸಿದೆ.

- Advertisement -

“ಹಲವು ವರ್ಷಗಳಿಂದ ಪ್ರತಿನಿಧಿಸುತ್ತ ಬಂದಿರುವ ಸ್ವಂತ ಕ್ಷೇತ್ರ ಶಾಂತಿ ನಗರವನ್ನೇ ಅಭಿವೃದ್ಧಿ ಪಡಿಸಲಾಗದ ಎನ್‌.ಎ. ಹ್ಯಾರಿಸ್‌ ಅವರ ಕೈಗೆ ಇಡೀ ಬೆಂಗಳೂರು ಅಭಿವೃದ್ಧಿ ಪಡಿಸುವ ಜವಾಬ್ದಾರಿಯನ್ನು ವಹಿಸಿರುವುದು ಪ್ರಶ್ನಾರ್ಹವಾಗಿದೆ. ಬಿಡಿಎ ಅಧ್ಯಕ್ಷರಾಗಲು ಹ್ಯಾರಿಸ್‌ ಅವರಿಗಿರುವ ಅರ್ಹತೆಯೇನು?” ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್‌ ದಾಸರಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಡಿಎ ಅಧ್ಯಕ್ಷರಾಗಿ ಹ್ಯಾರಿಸ್‌ ನೇಮಕ ವಿಚಾರವಾಗಿ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮೋಹನ್‌ ದಾಸರಿ, “ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಜನಪ್ರತಿನಿಧಿಗಳಿಗೆ ಮಣೆ ಹಾಕುವ ಪದ್ಧತಿ ಬಿಟ್ಟು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‍‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದಾಗ ಬೆಂಗಳೂರು ಅಭಿವೃದ್ಧಿಯತ್ತ ಸಾಗಬಹುದು ಎಂಬ ಭರವಸೆ ವ್ಯಕ್ತವಾಗಿತ್ತು. ಆದರೆ 7 ತಿಂಗಳ ಅವಧಿಯಲ್ಲೇ ಅವರಿಂದ ಅಧಿಕಾರವನ್ನು ಕಸಿದು ಪುನಃ ರಾಜಕಾರಣಿಗಳ ಹೆಗಲಿಗೆ ಏರಿಸಲಾಗುತ್ತಿದೆ. ಇಂತಹ ಬದಲಾವಣೆಗೆ ಎದುರಾದ ಒತ್ತಡವೇನು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದರು.

“ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿನ ಈಜಿಪುರ ಸ್ಲಂ ಪ್ರದೇಶವನ್ನು ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಮಾಲಿಕತ್ವದ ಮೆಹರಿಕ್ ಹೋಲ್ಡಿಂಗ್ಸ್ ಸಂಸ್ಥೆಯ ಜೊತೆಗೂಡಿ ಮಾಡಿಕೊಂಡ ಒಪ್ಪಂದ ಸಂಪೂರ್ಣ ಹಳ್ಳ ಹಿಡಿದಿದೆ. ಅಭಿವೃದ್ಧಿಪಡಿಸಿ ನೂತನ ಮನೆಗಳನ್ನು ಕಟ್ಟಿಕೊಡುತ್ತೇವೆಂಬ ನೆಪವಡ್ಡಿ ತೆರವುಗೊಳಿಸಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಆಗಿದೆ. ಇದುವರೆಗೂ ಅಲ್ಲಿನ ಸಾವಿರಾರು ಕುಟುಂಬಗಳು ಬೀದಿಬದಿಯಲ್ಲಿಯೇ ವಾಸಿಸುತ್ತಿವೆ. ಇಂತಹ ಕರಾಳ ಮುಖವನ್ನು ಹೊತ್ತಿರುವ ಶಾಸಕ ಹ್ಯಾರಿಸ್, ಹೇಗೆ ಬೆಂಗಳೂರಿನ ಅಭಿವೃದ್ಧಿ  ಪಡಿಸುತ್ತಾರೆ ಎಂಬುದೇ ಯಕ್ಷಪ್ರಶ್ನೆಯಾಗಿದೆ” ಎಂದರು.

“ನಗರದ ಅತಿದೊಡ್ಡ ಕೊಳಚೆ ಪ್ರದೇಶವೆಂದರೆ ಅದು ಶಾಂತಿನಗರ ವಿಧಾನಸಭಾ ಕ್ಷೇತ್ರವಾಗಿದೆ. ಮಿತಿಯೇ ಇಲ್ಲದ ರಾಜಕಾಲುವೆ ಒತ್ತುವರಿ, ಲೆಕ್ಕವಿಲ್ಲದಷ್ಟು ಹೊಂಡ-ಗುಂಡಿಗಳು, ಮ್ಯಾನ್‌ಹೋಲ್‌ ಹಾಗೂ ಚರಂಡಿಗಳ ತ್ಯಾಜ್ಯ ನೀರೆಲ್ಲ ಮೇಲೆ ಬಂದು ಗಬ್ಬೆದ್ದ ರಸ್ತೆಗಳೇ ತುಂಬಿವೆ. ದಿನಕ್ಕೊಂದು ಬಾರ್‌, ಪಬ್‌, ಹುಕ್ಕಾಬಾರ್‌ಗಳು ಹುಟ್ಟಿಕೊಳ್ಳುವ ಈ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅವ್ಯವಸ್ಥೆಗಳ ಕೂಪವಾಗಿವೆ. ಲೆಕ್ಕವಿಲ್ಲದಷ್ಟು ಅನಧಿಕೃತ ಕಟ್ಟಡಗಳು, ಪಬ್‌, ಹುಕ್ಕಾಬಾರ್‌ಗಳು ತಾಂಡವವಾಡುತ್ತಿವೆ. ಡ್ರಗ್‌ ಮಾಫಿಯಾಗೆ ಕಡಿವಾಣವೇ ಇಲ್ಲವಾಗಿದೆ. ಒಂದೇ ಒಂದು ಸ್ಲಮ್‌ ಅಭಿವೃದ್ಧಿ ಪಡಿಸಿರುವ ಉದಾಹರಣೆ ಇದ್ದರೆ ಹೇಳಿ?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ವಿಜಯಪುರ ಮಾರ್ಗದಲ್ಲಿ ‘ಕಲ್ಯಾಣ ರಥ’ ಐಷಾರಾಮಿ ಸ್ಲೀಪರ್ ಬಸ್ ಸೇವೆ ಆರಂಭ

“ಅನಧಿಕೃತ ಕಟ್ಟಡ, ಬಾರ್‌, ಪಬ್‌, ಹುಕ್ಕಾಬಾರ್‌ಗಳಿಗೆ ಹ್ಯಾರಿಸ್‌ ಕುಟುಂಬದವರೇ ಪಾಲುದಾರರು ಎಂಬ ಆರೋಪಗಳಿವೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತಪ್ಪಾದ ಆಸ್ತಿ ವಿವರಗಳನ್ನು ಸಲ್ಲಿಸಿದ್ದಾರೆ ಎಂಬ ಆರೋಪವೂ ಇದೆ. ಅವರ ಮಗ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ನಡೆಸಿರುವ ರೌಡಿಸಂ, ಪುಂಡಾಟಗಳಿಗೆ ಲೆಕ್ಕವಿದೆಯೇ? ಸ್ವಂತ ಮಗನನ್ನು, ಸ್ವಂತ ಕ್ಷೇತ್ರವನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಲಾಗದ ಹ್ಯಾರಿಸ್‌ ಅವರಿಂದ ಬೆಂಗಳೂರು ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ?” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...