ನಾಗಮಂಗಲ ಗಲಾಟೆ | ಕರ್ನಾಟಕದಲ್ಲೂ ಬೇಕಿದೆ ‘ಯೋಗಿ ಬುಲ್ಡೋಜರ್ ಕಾರ್ಯಾಚರಣೆ’: ಆರ್‌ ಅಶೋಕ್‌

Date:

Advertisements

ಉತ್ತರ ಪ್ರದೇಶದ ಮಾದರಿಯಲ್ಲಿ ಮುಸ್ಲಿಂ ಮತಾಂಧರ ಮನೆಗಳ ಮೇಲೆ ಯೋಗಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಅವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಆಗ ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಬಹುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ನಾಗಮಂಗಲ ಗಲಾಟೆ ವಿಚಾರವಾಗಿ ಎಕ್ಸ್‌ ತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, “ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂ ಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನ ಕೂಡಲೇ ಪತ್ತೆ ಹಚ್ಚಿ” ಎಂದು ಆಗ್ರಹಿಸಿದ್ದಾರೆ.

“ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟುಗಳು, ಸರಕು-ಸರಂಜಾಮುಗಳು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂ. ಹೆಚ್ಚು ಮೊತ್ತದ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಯಾವುದೇ ಸಮುದಾಯದ ತುಷ್ಟೀಕರಣ ನಮಗೆ ಬೇಕಿಲ್ಲ: ‌ಬಿಜೆಪಿ-ಜೆಡಿಎಸ್‌ಗೆ ಸಚಿವ ಪರಮೇಶ್ವರ್ ತಿರುಗೇಟು

“ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಇಂತಹ ಪೂರ್ವನಿಯೋಜಿತ ಕೋಮುಗಲಭೆಗಳನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ನಿರ್ಲಕ್ಷ್ಯ ಮಾಡಿದರೆ ಜನ ಸಾಮಾನ್ಯರ ರಕ್ಷಣೆ ಮಾಡುವವರು ಯಾರು? ಜನಸಾಮಾನ್ಯರು ನೆಮ್ಮದಿಯಿಂದ ತಮ್ಮ ಉದ್ಯೋಗ, ವ್ಯಾಪಾರ ಮಾಡುವುದಾದರೂ ಹೇಗೆ” ಎಂದು ಪ್ರಶ್ನಿಸಿದ್ದಾರೆ.

“ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಮತಾಂಧರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಎಂಬುದೇ ಆಕಸ್ಮಿಕ, ಅಪರೂಪವಾಗುವ ದಿನ ಬಹಳ ದೂರವಿಲ್ಲ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ವಿರೋಧ ಪಕ್ಷದ ನಾಯಕರಿಗೆ ಬಹುಶಃ ತಲೆಯಲ್ಲಿ ಮೆದುಳು ಹಾವಿನಪುರದ ಐಸಿಯು ನಲ್ಲಿಟ್ಟುವಂತೆ ಕಾಣುತ್ತಿದೆ,, ಚುನಾವಣೆ ಗೆಲ್ಲಲು ನಿಮ್ಮ ಪಕ್ಷದ ಲಾಜಿಕ್ ಕೋಮುಗಲಭೆ,, ನಿಮ್ಮ ಇತಿಹಾಸವನ್ನು ಒಮ್ಮೆ ತಿರುಗಿ ನೋಡಿಕೊಂಡರೆ,, ಇಂಥಾ ಘಟನೆಗಳಿಗೆ ಸಮಾಜಕ್ಕೆ ತಮ್ಮ ಕೊಡುಗೆ ಅಪಾರ,,, ಮತಾಂಧತೆಯ ಜನಕರೇ ನೀವು,,ಹೆಣ ಬಿದ್ದರೆ ಹೊತ್ತಿ ಉರಿದರೆ ನಿಮಗೆ ಮಹಾನವಮಿ ದೀಪಾವಳಿ ಇದ್ದಂತೆ,,,

  2. ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಪ್ರಚೋದನಕಾರಿ ಬುಲ್ಡೋಜರ್ ಹೇಳಿಕೆ ನ್ಯಾಯಾಂಗ ನಿಂದನೆ ಆಗುವುದಿಲ್ಲವೇ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X