ನಾಗ್ಪುರ ಹಿಂಸಾಚಾರ | ನಿಷೇಧಾಜ್ಞೆ ಜಾರಿ, ಫಡ್ನವೀಸ್ ಸರ್ಕಾರದ ವಿರುದ್ಧ ಆಕ್ರೋಶ

Date:

Advertisements

ನಾಗ್ಪುರ ಹಿಂಸಾಚಾರದ ಬಳಿಕ ನಗರದ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಗುಮ್ಮಟವನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸಂಘ ಪರಿವಾರದ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ.

ಈ ಪ್ರತಿಭಟನೆ ವೇಳೆ ಅನ್ಯಧರ್ಮದ ಪವಿತ್ರ ಗ್ರಂಥವನ್ನು ಸುಟ್ಟು ಹಾಕಲಾಗಿದೆ ಎಂಬ ವದಂತಿಯಿಂದಾಗಿ ಹಿಂಸಾಚಾರ ಸಂಭವಿಸಿದೆ. ಹಲವು ಮನೆಗಳನ್ನು, ವಾಹನಗಳನ್ನು ಈ ಹಿಂಸಾಚಾರದ ವೇಳೆ ಧ್ವಂಸಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ಔರಂಗಜೇಬ್ ಸಮಾಧಿ ವಿವಾದ: ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ

Advertisements

ಈ ವಿಚಾರದಲ್ಲಿ ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇವೆಲ್ಲವುದರ ನಡುವೆ ಇದೀಗ ನಗರದಲ್ಲಿ ಪರಿಸ್ಥಿತಿ ಹತೋಟಿಗೆ ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈವರೆಗೆ 50 ಮಂದಿಯನ್ನು ಬಂಧಿಸಲಾಗಿದೆ, ಹಾಗೆಯೇ ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐದು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ರವಿಂದರ್ ಸಿಂಘಲ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹಿಂಸಾಚಾರದಲ್ಲಿ ಸುಮಾರು 34 ಪೊಲೀಸ್ ಅಧಿಕಾರಿಗಳು ಮತ್ತು ಇತರ ಐವರಿಗೆ ಗಾಯವಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ಭಾವನ್‌ಕುಲೆ ಮಂಗಳವಾರ ಹೇಳಿದ್ದಾರೆ. ಇನ್ನು ಇಬ್ಬರು ಪೊಲೀಸರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಈ ಹಿಂಸಾಚಾರದ ವಿಚಾರದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಮತ್ತು ಶಿವಸೇನೆ (ಯುಬಿಟಿ) ಮುಖಂಡರು ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ನಾಗ್ಪುರ ಬಳಿಯ ಆಯುಧ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, “ಮಹಾರಾಷ್ಟ್ರದಲ್ಲಿ ಯಾರದೇ ಗುಮ್ಮಟ ಅಥವಾ ಗೋರಿಯನ್ನು ಹೊಡೆದುಹಾಕುವುದು ಸರಿಯಲ್ಲ. ಇದು ಸಹೋದರತ್ವ, ಶಾಂತಿ, ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತದೆ” ಎಂದು ಹೇಳಿದ್ದಾರೆ.

“ಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದರೆ ಪರಿಸ್ಥಿತಿ ಇನ್ನಷ್ಟೂ ಬಿಗಡಾಯಿಸುತ್ತದೆ. ಅದು ಸರಿಯಲ್ಲ” ಎಂದು ಹೇಳಿದ್ದಾರೆ.

ಇನ್ನು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಚತುರ್ವೇದಿ ಅವರು, “ಹಿಂಸಾಚಾರಕ್ಕೆ ಉತ್ತೇಜನ ನೀಡಿ ರಾಜ್ಯದಲ್ಲಿ ಅಸ್ಥಿರತೆ ಸೃಷ್ಟಿಸಿ, ಜನರೆಲ್ಲಾ ಆ ಸುದ್ದಿಯಲ್ಲೇ ಮಗ್ನರಾಗುವಂತೆ ಮಾಡಿ, ಇತರೆ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಹರಿಯುವಂತೆ ಮಾಡಲಾಗುತ್ತದೆ. ರಾಜ್ಯದ ಹಣಕಾಸಿ ಬಿಕ್ಕಟ್ಟು, ಸಾಲದ ಹೊರೆ, ನಿರುದ್ಯೋಗ ಹೆಚ್ಚಳ ಮತ್ತು ರೈತರ ಆತ್ಮಹತ್ಯೆಯ ಬಗ್ಗೆ ಜನರು ಮಾತನಾಡದಂತೆ ಮಾಡಲಾಗುತ್ತಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಪ್ರತ್ಯೇಕ ರಾಜ್ಯಕ್ಕೆ ಪಟ್ಟು ಹಿಡಿದ ಕುಕಿ ಸಮುದಾಯ

“ಶಿಂದೆ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಎಲ್ಲಾ ಹೂಡಿಕೆಯನ್ನು ಗುಜರಾತ್ ಕಡೆಗೆ ಕೊಂಡೊಯ್ಯಲಾಗಿದೆ. ಈಗಿನ ಮುಖ್ಯಮಂತ್ರಿ ರಾಜ್ಯಕ್ಕೆ ಯಾವುದೇ ಹೂಡಿಕೆ ಲಭ್ಯವಾಗದಂತಹ ಸ್ಥಿತಿಗೆ ರಾಜ್ಯವನ್ನು ಕೊಂಡೊಯ್ಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ವಿಪಕ್ಷ ನಾಯಕ ಅಂಬಾದಾಸ್ ದಾನ್ವೆ ಈ ಹಿಂಸಾಚಾರಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ. “ಈ ನಾಗ್ಪುರ ಹಿಂಸಾಚಾರದ ಹಿಂದೆ ಮುಖ್ಯಮಂತ್ರಿಯವರೇ ಇದ್ದಾರೆ ಎಂದು ನಾನು ನೇರವಾಗಿ ಹೇಳುತ್ತೇನೆ” ಎಂದು ದಾನ್ವೆ ತಿಳಿಸಿದ್ದಾರೆ.

“ರಾಜ್ಯದಲ್ಲಿ ಹಿಂದೂ- ಮುಸ್ಲಿಮ್ ಗಲಭೆ ಸೃಷ್ಟಿಸಲು ಈ ಸರ್ಕಾರ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ಇಂತಹ ಗಲಭೆಗಳು ಹಿಂದೂ, ಮುಸ್ಲಿಮರ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಇದರಿಂದಾಗಿ ರಾಜಕೀಯ ಲಾಭ ಪಡೆಯಲು ಸರ್ಕಾರ ಬಯಸಿದೆ. ಬಿಜೆಪಿ ಮತ್ತು ಅದರ ಸಂಘಪರಿವಾರಗಳು ರಾಜ್ಯದ ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X