ನಾಗ್ಪುರ ಹಿಂಸಾಚಾರ ಪೂರ್ವಯೋಜಿತ, ‘ಛಾವಾ’ ಚಿತ್ರದಿಂದಾಗಿ ಔರಂಗಜೇಬ್‌ ಮೇಲೆ ಆಕ್ರೋಶ: ಫಡ್ನವೀಸ್

Date:

ನಾಗ್ಪುರದಲ್ಲಿ ನಡೆದ ಹಿಂಸಾಚಾರ ಪೂರ್ವಯೋಜಿತ ಪಿತೂರಿಯಂತೆ ಕಾಣುತ್ತದೆ. ಗುಂಪು ನಿರ್ದಿಷ್ಟ ಮನೆಗಳು ಮತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ. ಹಾಗೆಯೇ ‘ಛಾವಾ’ ಸಿನಿಮಾದಿಂದಾಗಿ ಔರಂಗಜೇಬ್‌ ಮೇಲೆ ಆಕ್ರೋಶ ಉಂಟಾಗಿದೆ ಎಂದು ಹೇಳಿಕೊಂಡಿದ್ದಾರೆ.

- Advertisement -

ಸೋಮವಾರ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಸಮಾಧಿಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಸಂಘ ಪರಿವಾರದ ಸಂಘಟನೆಗಳು ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ. ಪ್ರತಿಭಟನೆ ವೇಳೆ ಕುರಾನ್ ಪ್ರತಿಯನ್ನು ಸುಡಲಾಗಿದೆ ಎಂಬ ವದಂತಿಯಿಂದಾಗಿ ಹಿಂಸಾಚಾರ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ನಾಗ್ಪುರ ಹಿಂಸಾಚಾರ | ನಿಷೇಧಾಜ್ಞೆ ಜಾರಿ, ಫಡ್ನವೀಸ್ ಸರ್ಕಾರದ ವಿರುದ್ಧ ಆಕ್ರೋಶ

ಇದಾದ ಬೆನ್ನಲ್ಲೇ ಹಲವು ಮಂದಿಯನ್ನು ಬಂಧಿಸಲಾಗಿದೆ. ಐದು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹಾಗೆಯೇ ನಾಗ್ಪುರ ನಗರದ ಹಲವು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಿಂಸಾಚಾರದ ವೇಳೆ ಹಲವು ಮನೆಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಲಾಗಿದೆ.

ಈ ಬಗ್ಗೆ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿಎಂ ಫಡ್ನವೀಸ್, “ಹಿಂಸಾಚಾರದಲ್ಲಿ ಮೂವರು ಪೊಲೀಸ್ ಉಪ ಆಯುಕ್ತರು ಸೇರಿದಂತೆ 33 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಿರಿಯ ಅಧಿಕಾರಿಗಳಲ್ಲಿ ಒಬ್ಬರ ಮೇಲೆ ಕೊಡಲಿಯಿಂದ ಹಲ್ಲೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಮಧ್ಯ ನಾಗ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಮೂವರು ಡಿಸಿಪಿಗಳು (ಪೊಲೀಸ್ ಉಪ ಆಯುಕ್ತರು) ಸೇರಿದಂತೆ ಕನಿಷ್ಠ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಿದವರನ್ನು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಔರಂಗಜೇಬ್ ಸಮಾಧಿ ವಿವಾದ: ನಾಗ್ಪುರದಲ್ಲಿ ಹಿಂಸಾಚಾರ; ಹಲವರ ಬಂಧನ

“ಛಾವಾ ಸಿನಿಮಾದಿಂದಾಗಿ ಔರಂಗಜೇಬ್ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಆದರೆ ಜನರು ಕಾನೂನು ಮತ್ತು ಸುವ್ಯವಸ್ಥೆ, ಶಾಂತಿ ಕಾಪಾಡಿಕೊಳ್ಳಬೇಕು. ಗಲಭೆ ಮಾಡಿದರೆ, ಜಾತಿ, ಧರ್ಮ ನೋಡದೆ ಕ್ರಮಕೈಗೊಳ್ಳಲಾಗುವುದು” ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

“ಗುಂಪು ನಿರ್ದಿಷ್ಟ ಮನೆಗಳು ಮತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ದಾಳಿ ಪೂರ್ವಯೋಜಿತ ಪಿತೂರಿಯಂತೆ ಕಾಣುತ್ತದೆ” ಎಂದು ಫಡ್ನವೀಸ್ ಹೇಳಿದ್ದಾರೆ. ಇನ್ನು “ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವ ಪಿತೂರಿ ನಡೆದಿದೆ” ಎಂದು ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...