ನಾಮಫಲಕ ಧ್ವಂಸ ಪ್ರಕರಣ | ಕರವೇ ನಾರಾಯಣಗೌಡಗೆ ಜಾಮೀನು ನಿರಾಕರಣೆ, ವಿಚಾರಣೆ ಜ. 6ಕ್ಕೆ ಮುಂದೂಡಿಕೆ

Date:

ಎಲ್ಲ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ವೇದಿಕೆ ಬೃಹತ್ ರ್‍ಯಾಲಿ ನಡೆಸಿದ್ದ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಬೋರ್ಡ್​ಗಳನ್ನು ಧ್ವಂಸ ಮಾಡಲಾದ ಘಟನೆಗೆ ಸಂಬಂಧಿಸಿ ಬಂಧಿತರಾಗಿರುವ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜ. 6ಕ್ಕೆ ನ್ಯಾಯಾಲಯವು ಮುಂದೂಡಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿ ಡಿ.28ರಂದು ನಾರಾಯಣಗೌಡ ಸೇರಿದಂತೆ ಕರವೇಯ 29 ಜನ ಕಾರ್ಯಕರ್ತರನ್ನು ಬಂಧಿಸಿದ್ದ ಚಿಕ್ಕಜಾಲ ಪೊಲೀಸರು, ದೇವನಹಳ್ಳಿಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಜನವರಿ 10ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ಆದೇಶಿಸಿದ್ದರು. ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಈ ನಡುವೆ ನಾರಾಯಣಗೌಡರವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾಮೀನು ನೀಡಲು ನಿರಾಕರಿಸಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಜ.6ಕ್ಕೆ ಮುಂದೂಡಿರುವುದಾಗಿ ತಿಳಿದುಬಂದಿದೆ.

ರಾಜ್ಯದ ಹಲವೆಡೆ ಪ್ರತಿಭಟನೆ

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಿರುವುದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.

ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ದಿಟ್ಟ ಹೋರಾಟ ಮಾಡಿದ ಕರವೇ ಕಾರ್ಯಕರ್ತರನ್ನು ಬಂಧಿಸಿದ್ದು ಖಂಡನೀಯ. ಸರ್ಕಾರ ಮಧ್ಯಪ್ರವೇಶಿಸಿ ಕೂಡಲೇ ಎಲ್ಲರನ್ನೂ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಘಾತಕಾರಿ ಘಟನೆ: ನರ್ಸಿಂಗ್ ಹೋಮ್ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಹೊರಗೆಸೆದ ಬಾಲಕಿ!

16 ವರ್ಷದ ಬಾಲಕಿಯೊಬ್ಬಳು ನರ್ಸಿಂಗ್ ಹೋಮ್‌ನ ಶೌಚಾಲಯದ ಒಳಗೆ ಮಗುವಿಗೆ ಜನ್ಮ...

ತುರ್ತು ಪರಿಸ್ಥಿತಿ ಒಂದು ದೊಡ್ಡ ತಪ್ಪು; ಇಂದಿರಾ ಗಾಂಧಿಗೂ ಪಶ್ಚಾತ್ತಾಪವಿತ್ತು: ಸೋನಿಯಾ ಗಾಂಧಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು1975ರಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯ...

ಮಹಾಯುತಿಯಲ್ಲಿ ಗುದ್ದಾಟ: ಗೋಕುಲ್ ಡೈರಿ ಅಧಿಕಾರ ಕಬಳಿಕೆಗೆ ಶಿಂಧೆ ಪಡೆ ವಿರೋಧ

ಮಹಾರಾಷ್ಟ್ರದ ಆಡಳಿತಾರೂಢ 'ಮಹಾಯುತಿ' ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡಿವೆ. ಕೊಲ್ಲಾಪುರ ಜಿಲ್ಲಾ ಸಹಕಾರಿ...