ಕನ್ನಡ ನಾಮಫಲಕ | ಅಧಿಸೂಚನೆ ಹೊರಡಿಸಿ, ಶೀಘ್ರದಲ್ಲೇ ನಿಯಮ ರೂಪಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

Date:

Advertisements

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡದಲ್ಲಿ ನಾಮಫಲಕ ಹಾಕುವ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡಪರ ಸಂಘಟನೆಗಳು ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಇಂದು(ಡಿ.28) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು.

ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಿದ್ದರಾಮಯ್ಯ, “ಕನ್ನಡದಲ್ಲಿ ನಾಮಫಲಕದ ವಿಚಾರವಾಗಿ ಅಧಿಸೂಚನೆ ಹೊರಡಿಸಿ, ಶೀಘ್ರದಲ್ಲೇ ನಿಯಮ ರೂಪಿಸಲು ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದಾರೆ.

Advertisements

“ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಪ್ರಯೋಗಾಲಯ, ಮನೋರಂಜನಾ ಕೇಂದ್ರ ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ” ಎಂದು ಸಿಎಂ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಪತ್ನಿ ತೊರೆದ ಪ್ರಧಾನಿ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ? ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ

“ಈ ಹಿಂದಿನ ಸುತ್ತೋಲೆಯಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು” ಎಂದು ಸಿಎಂ ತಿಳಿಸಿದ್ದಾರೆ.

“ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮದಂತೆ ಇರತಕ್ಕದ್ದು. ಈ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ. ಇದನ್ನು ಕೂಡ ಅನುಷ್ಠಾನಗೊಳಿಸಲಾಗುವುದು. ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ

ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಿನ್ನೆ ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆ ವೇಳೆ ದಾಂಧಲೆಯ ವಿಚಾರದ ಬಗ್ಗೆಯೂ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ” ಎಂದು ತಿಳಿಸಿದರು.

“ಮಾರ್ಚ್ 3, 2022ರಂದು ಕರ್ನಾಟಕ ಉಚ್ಛ ನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು. ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದು ಸಿಎಂ ಎಚ್ಚರಿಕೆ ನೀಡಿದರು.

“ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಎಲ್ಲ ಸಂಘಟನೆಗಳು, ಹೋರಾಟಗಾರರಲ್ಲಿ ಕಾಯ್ದೆ ಜಾರಿ ಮಾಡುತ್ತೇವೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ನ್ನು ಜಾರಿಗೊಳಿಸಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು” ಎಂದು ಮುಖ್ಯಮಂತ್ರಿಗಳಿ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ಪ್ರತಿಭಟನೆ: ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರಿಗೆ 14 ದಿನ ಜೈಲು

“ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಎಲ್ಲ ಖಾಸಗಿ ಸಂಸ್ಥೆಯವರು ತಮ್ಮ ನಾಮಫಲಕವನ್ನು ಶೇ. 60:40ರ ಅನುಪಾತದಲ್ಲಿ ನಿಗದಿತ ಗಡುವಿನೊಳಗೇ ಅಳವಡಿಸಬೇಕು. ಸಾರ್ವಜನಿಕರು ಈ ಬಗ್ಗೆ ಆತಂಕ ಪಡಬೇಕಾಗಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಸ್ಪಷ್ಟಪಡಿಸಿದರು.

ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ಬುಧವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ದಾಂಧಲೆ ನಡೆಸಿದ ಆರೋಪದ ಮೇರೆಗೆ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X