ನರೇಗಾ ಯೋಜನೆ | 150 ಮಾನವ ದಿನಗಳಿಗೆ ಏರಿಕೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಗ್ರಾಮೀಣ ಜನರ ಜೀವನವನ್ನು ನಿರ್ಮಾಣ ಮಾಡುತ್ತಿರುವ ಉದ್ಯೋಗ ಖಾತ್ರಿ ಯೋಜನೆ‌ ನರೇಗಾ ಕಾರ್ಯಕ್ರಮದಲ್ಲಿ 100 ಮಾನವ ದಿನಗಳನ್ನು 150 ಮಾನವ ದಿನಗಳಿಗೆ ಏರಿಸಲು ಎಷ್ಟೇ ಮನವಿ ಮಾಡಿದರೂ ಕೇಂದ್ರ ಸರ್ಕಾರದಿಂದ ಸ್ಪಂದನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಬೇಸರ ವ್ಯಕ್ತಪಡಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಬೆಂಗಳೂರಿನಲ್ಲಿ ಬುಧವಾರ ಏರ್ಪಡಿಸಿದ್ದ ನರೇಗಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಜನೆಯನ್ನು ಅತ್ಯುತ್ತಮವಾಗಿ ಅನುಷ್ಠಾನ ಮಾಡಿದ ಮೂರು ಹಂತದ ಪಂಚಾಯತಿಗಳು ಹಾಗೂ ಅನುಷ್ಠಾನ ಇಲಾಖೆಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು.

“ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ದೂರದೃಷ್ಟಿ ಹಾಗೂ ಸಂಕಲ್ಪವನ್ನಿರಿಸಿಕೊಂಡು 2005ರಲ್ಲಿ ಅಂದಿನ ಪ್ರಧಾನಮಂತ್ರಿಗಳಾಗಿದ್ದ ಮನಮೋಹನ್‌ ಸಿಂಗ್‌ ಅವರು ನರೇಗಾ ಕಾರ್ಯಕ್ರಮವನ್ನು ಜಾರಿಗೆ ತಂದರು. ಈ ಕಾರ್ಯಕ್ರಮ ಇಂದು ಗ್ರಾಮೀಣ ಜನರ ಜೀವನೋಪಾಯವಾಗಿ ಉಳಿಯದೇ ಜೀವನ ನಿರ್ಮಾಣ ಮಾಡುವ ಕಾರ್ಯಕ್ರಮವಾಗಿದೆ. ರಾಜ್ಯದಲ್ಲಿ ಶೇ.54ರಷ್ಟು ಮಹಿಳೆಯರು ಉದ್ಯೋಗ ಖಾತ್ರಿ ಯೋಜನೆಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಯೋಜನೆಯಡಿ ಸರ್ಕಾರ ಮಹಿಳೆಯರು ಹಾಗೂ ಪುರುಷರಿಗೆ ತಾರತಮ್ಯವಿಲ್ಲದೆ ವೇತನ ನೀಡುತ್ತಿವುದರೊಂದಿಗೆ ಬಸವಣ್ಣನವರ ಸರ್ವರಿಗೂ ಸಮಪಾಲು, ಸಮಬಾಳು ತತ್ವವನ್ನು ಪಾಲಿಸುತ್ತಿದೆ. ನರೇಗಾ ಯೋಜನೆ ಗ್ರಾಮೀಣ ಕುಟುಂಬಗಳಲ್ಲಿ ಆರ್ಥಿಕ ಸ್ಥಿರತೆ ತಂದು ಕೊಟ್ಟಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿದ್ರಿಸುವ ಸಚಿವರು, ಪ್ರಶ್ನಿಸದ ಸಂಸದರು- ಕರ್ನಾಟಕದ ಹಿತ ಕಾಪಾಡುವವರು ಯಾರು?

“ಸಂವಿಧಾನ ಪೀಠಿಕೆಯಲ್ಲಿರುವಂತೆ ಗ್ರಾಮಗಳಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆ ಪಾಲನೆಯಾಗುತ್ತಿದೆ. ಗ್ರಾಮ ಪಂಚಾಯತಿಗಳೇ ಸರ್ಕಾರಗಳಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಕೊಂಡಿವೆ. ನರೇಗಾ ಕಾರ್ಯಕ್ರಮಗಳಡಿ ರಾಜ್ಯದಲ್ಲಿ 17 ಲಕ್ಷ ಆಸ್ತಿಗಳನ್ನು ಸೃಷ್ಟಿ ಮಾಡಲಾಗಿದೆ. ಇವು ಗ್ರಾಮೀಣ ಭಾಗಕ್ಕೆ ಶಾಶ್ವತ ಕೊಡುಗೆಗಳಾಗಿವೆ” ಎಂದು ಶ್ಲಾಘನೆ ವ್ಯಕ್ತಪಡಿಸಿದರು.

“ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ನರೇಗಾ ಅನುದಾನವನ್ನು ವರ್ಷ ವರ್ಷವೂ ಕಡಿತಗೊಳಿಸುತ್ತಾ ಹೋಗುತ್ತಿದೆ. ಇದು ಗ್ರಾಮೀಣ ಅಭಿವೃದ್ಧಿಗೆ ಧಕ್ಕೆ ತರಲಿದೆ. ಗ್ರಾಮ ಪಂಚಾಯತಿಗಳು ವೈಜ್ಞಾನಿಕವಾಗಿ ಹಾಗೂ ಪ್ರಜ್ಞಾವಂತಿಕೆಯಿಂದ ಕಾರ್ಯ ನಿರ್ವಹಿಸುದರೊಂದಿಗೆ ಗ್ರಾಮಗಳನ್ನು ಮತ್ತಷ್ಟು ಅಭಿವೃದ್ಧಿ ಮಾಡಲು ಮುಂದಾಗಬೇಕು” ಎಂದು ಸಲಹೆ ಮಾಡಿದರು.

ಪ್ರಿಯಾಂಕ್ ಖರ್ಗೆ 1 5

“ಗ್ರಾಮೀಣಾಬಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಕೂಸಿನ ಮನೆಗಳನ್ನು ಆರಂಭಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ದುಡಿಯುವ ಮಹಿಳೆಯರಿಗೆ ಒತ್ತಾಸೆಯಾಗಿದೆ” ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಶಿವಾಜಿನಗರ ಶಾಸಕ ರಿಜ್ವಾನ್‌ ಅರ್ಷದ್‌ ಅಧ್ಯಕ್ಷತೆ ವಹಿಸಿದ್ದರು. ಕಿಯೊನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹದೇವನ್‌ ಮತ್ತು ಅಂಜುಂ ಪರವೇಜ್‌, ನರೇಗ ಆಯುಕ್ತ ಪವನ್‌ ಕುಮಾರ್‌ ಮಾಲಪಾಟಿ, ಪಂಚಾಯತ್‌ ರಾಜ್‌ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌, ಗ್ರಾಮೀಣ ನೀರು ಸರಬರಾಜು ಇಲಾಖೆ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X