ಮೈಸೂರಿನಲ್ಲಿ ಏ.30ರಂದು ನರೇಂದ್ರ ಮೋದಿ ಪ್ರಚಾರ: ಶಾಸಕ ಎಸ್‌ ಎ ರಾಮದಾಸ್‌

Date:

  • ಅರಮನೆ ನಗರಿಯಲ್ಲಿ ಮೋದಿ ಚುನಾವಣಾ ಪ್ರಚಾರ
  • ಮಹಾರಾಜ ಕಾಲೇಜು ಮೈದಾನದಿಂದ ಕಾರ್ಯಕ್ರಮ

ಮೈಸೂರಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 30 ರಂದು ಪ್ರಚಾರ ನಡೆಸಲಿರುವುದಾಗಿ ಮಾಜಿ ಸಚಿವ ಎಸ್‌ ಎ ರಾಮದಾಸ್‌ ಹೇಳಿದರು.

ಶುಕ್ರವಾರ ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರಾಮದಾಸ್‌, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೃಹತ್ ಚುನಾವಣಾ ಪ್ರಚಾರ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಅಂದು  ದೆಹಲಿಯಿಂದ  ಹೊರಡುವ ನರೇಂದ್ರ ಮೋದಿ ನೇರವಾಗಿ ಮೈಸೂರಿನ ಮಹಾರಾಜ ಕಾಲೇಜ್ ಮೈದಾನಕ್ಕೆ ಆಗಮಿಸಲಿದ್ದಾರೆ. ಅವರನ್ನು ಮೈಸೂರಿನ ಪಾರಂಪರಿಕ ವಸ್ತುಗಳಾದ ವೀಳ್ಯದೆಲೆ, ಶ್ರೀ ಗಂಧದ ಕಡ್ಡಿ, ಮೈಸೂರು ಸಿಲ್ಕ್ ಬಟ್ಟೆ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುವುದು ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ ಮೋದಿಯವರು ಮುಡಾ ಕಚೇರಿ, ರಾಮಸ್ವಾಮಿ ಸರ್ಕಲ್, ಚಾಮರಾಜ ನೂರಡಿ ರಸ್ತೆ ಮಾರ್ಗವಾಗಿ ಗನ್ ಹೌಸ್ ಗೆ ಆಗಮಿಸಲಿದ್ದಾರೆ. ಸಂಜೆ 5.30 ಕ್ಕೆ ತೆರೆದ ವಾಹನದಲ್ಲಿ ರೋಡ್ ಶೋ ರ‍್ಯಾಲಿ ಪ್ರಾರಂಭಿಸಲಿದ್ದಾರೆ ಎಂದು ರಾಮದಾಸ್‌ ಹೇಳಿದರು.

ಈ ಸ್ಟೋರಿ ಓದಿದ್ದೀರಾ? :ಹಾಸನ | ಏ.29ರಂದು ಸಕಲೇಶಪುರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

ರ‍್ಯಾಲಿ ಸಂಸ್ಕೃತ ಪಾಠಶಾಲೆ, ನಗರಪಾಲಿಕೆ, ಸಿಟಿ ಬಸ್ ಸ್ಟ್ಯಾಂಡ್, ಕೆ ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್ ಎಂ ಸಿ, ಮಿಲಿಯನ್ ಸರ್ಕಲ್ ತನಕ ಸಾಗಲಿದ್ದು, ಇದರಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹಿರಿಯ ನಾಗರಿಕರು ನೋಡಲು ಅನುಕೂಲವಾಗುವಂತೆ ಐದು ಸ್ಥಳಗಳಲ್ಲಿ ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸುಮಾರು ನಾಲ್ಕು ಕಿಲೋಮೀಟರ್ ರ‍್ಯಾಲಿ ನಡೆಸಲಿರುವ ಮೋದಿಯವರು, ಮಿಲೇನಿಯಮ್ ಸರ್ಕಲ್‌ನಲ್ಲಿ ರ‍್ಯಾಲಿಯನ್ನು ಮುಕ್ತಾಯಗೊಳಿಸಲಿದ್ದಾರೆ.

ಅಲ್ಲಿಂದ ನೇರವಾಗಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿರುವ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀಟ್ ಪ್ರಕರಣ | ಶಿಕ್ಷಣ ಸಚಿವರು ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ: ರಾಹುಲ್ ಗಾಂಧಿ

ನೀಟ್ ಪ್ರಕರಣದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮನ್ನು ಹೊರತುಪಡಿಸಿ...

ಅಧಿವೇಶನ | ಕುಮ್ಕಿ ಜಮೀನು ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕೃಷ್ಣ ಬೈರೇಗೌಡ

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ...

ಮನೆ ಕಳೆದುಕೊಂಡವರಿಗೆ ಕಾಂಗ್ರೆಸ್ ಸರಕಾರ ಹೆಚ್ಚಿನ ಪರಿಹಾರ ಕೊಡಲಿ: ವಿಜಯೇಂದ್ರ ಆಗ್ರಹ

ನೆರೆಪೀಡಿತರು ಮತ್ತು ಮನೆ ಕಳೆದುಕೊಂಡವರಿಗೆ ಹಿಂದಿನ ಬಿಜೆಪಿ ಸರಕಾರ ಸ್ಪಂದಿಸಿದ ಮಾದರಿಯಲ್ಲಿ...