ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದ್ದೆ ಎಂದಿದ್ದ ಮೋದಿಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲಾಗುತ್ತಿಲ್ಲ: ರಾಹುಲ್ ಗಾಂಧಿ

Date:

ದೇಶದಲ್ಲಿ ಭಾರೀ ವಿವಾದ ಎಬ್ಬಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದವು ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ.

ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರ ಮೌನವನ್ನು ಪ್ರಶ್ನಿಸಿ, ಹರಿಹಾಯ್ದಿದ್ದಾರೆ.

“ನರೇಂದ್ರ ಮೋದಿಯವರು ರಷ್ಯಾ-ಉಕ್ರೇನ್ ಯುದ್ಧ ಹಾಗೂ ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ನಡೆಯುತ್ತಿದ್ದ ಯುದ್ಧವನ್ನು ನಿಲ್ಲಿಸಿದ್ದೆ ಎಂದು ಬೊಗಳೆ ಬಿಡುತ್ತಿದ್ದರು. ಆದರೆ, ಅವರಿಗೆ ಭಾರತದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂಬುದು ನಿಜಕ್ಕೂ ಅಚ್ಚರಿಯ ಸಂಗತಿ” ಎಂದು ವ್ಯಂಗ್ಯವಾಡುವ ಮೂಲಕ ರಾಹುಲ್ ಗಾಂಧಿ, ಪ್ರಧಾನಿಗೆ ಟಾಂಗ್ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ನೀಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಸಂಬಂಧಿಸಿದಂತೆ ಮೋದಿ ಹಾಗೂ ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ರಾಯ್ ಬರೇಲಿಯ ಸಂಸದ, “ದೇಶದ ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃಸಂಸ್ಥೆ ವಶಪಡಿಸಿಕೊಂಡಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ” ಎಂದು ಆರೋಪಿಸಿದ್ದಾರೆ‌.

“ನಮ್ಮ ದೇಶದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿಲ್ಲ. ಅದರ ಬದಲಾಗಿ “ನಿರ್ದಿಷ್ಟ ಸಂಸ್ಥೆ”ಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಆರ್‌ಎಸ್‌ಎಸ್‌ ಅನ್ನು ಪರೋಕ್ಷವಾಗಿ ಉಲ್ಲೇಖಿಸುತ್ತಾ ಮಾತನಾಡಿದ ರಾಹುಲ್ ಗಾಂಧಿ, “ವಿಶ್ವವಿದ್ಯಾನಿಲಯದ ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿಲ್ಲ. ಬದಲಾಗಿ, ನಿರ್ದಿಷ್ಟ ಸಂಸ್ಥೆಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಈ ಸಂಘಟನೆ ಮತ್ತು ಬಿಜೆಪಿ ಸೇರಿ ನಮ್ಮ ಶಿಕ್ಷಣ ವ್ಯವಸ್ಥೆಗೆ ನುಗ್ಗಿ ನಾಶ ಮಾಡುತ್ತಿದೆ. ನೋಟು ಅಮಾನ್ಯೀಕರಣದ ಮೂಲಕ ಆರ್ಥಿಕತೆ ನಾಶ ನರೇಂದ್ರ ಮೋದಿ ಈಗ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ” ಎಂದರು.

“ವಿಶ್ವವಿದ್ಯಾನಿಲಯಗಳು ಬಿಜೆಪಿ ನಿಯಂತ್ರಣದಲ್ಲಿ ಇರುವವರೆಗೂ ದೇಶದಲ್ಲಿ ಪತ್ರಿಕೆ ಸೋರಿಕೆ ಮುಂದುವರಿಯುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆಯು ದೇಶವಿರೋಧಿ ಚಟುವಟಿಕೆ. ಏಕೆಂದರೆ ಇದು ದೇಶದ ಭವಿಷ್ಯದ ಯುವಜನರನ್ನು ತೀವ್ರವಾಗಿ ನೋಯಿಸುತ್ತಿದೆ” ಎಂದು ರಾಹುಲ್ ಗಾಂಧಿ ತಿಳಿಸಿದರು.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ವ್ಯಾಪಂ ಹಗರಣವನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ವ್ಯಾಪಂ ಹಗರಣವನ್ನು ಈಗ ದೇಶಾದ್ಯಂತ ಕೊಂಡೊಯ್ಯಲಾಗುತ್ತಿದೆ. ವ್ಯಾಪಂ ಮಧ್ಯಪ್ರದೇಶದಲ್ಲಿ ನಡೆದಿತ್ತು. ಈಗ ಮೋದಿ ಸರ್ಕಾರವು ಅದನ್ನು ರಾಷ್ಟ್ರದಾದ್ಯಂತ ಹರಡುತ್ತಿದೆ. ನೀಟ್ ಹಗರಣದ ಬಗ್ಗೆ ಪ್ರತಿಪಕ್ಷಗಳು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಲ್ಲಲಿದೆ. ಸಂಸತ್‌ನಲ್ಲಿ ನಾವು ಪ್ರಬಲವಾಗಿ ಹೋರಾಟ ನಡೆಸುತ್ತೇವೆ. ಪತ್ರಿಕೆ ಸೋರಿಕೆ ತಡೆಯಲು ಸರಕಾರ ಆಸಕ್ತಿ ತೋರದ ಕಾರಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿಯವರ ಸಂಪೂರ್ಣ ಪತ್ರಿಕಾಗೋಷ್ಠಿಯನ್ನು ಈ ಲಿಂಕ್ ಕ್ಲಿಕ್ ಮಾಡಿ, ವೀಕ್ಷಿಸಬಹುದು

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿಗಣತಿ ಪ್ರಶ್ನಿಸುವ ಪೇಜಾವರ ಸ್ವಾಮಿ, ಶೇ.10ರ ಮೇಲ್ಜಾತಿ ಮೀಸಲಾತಿ ನಿರಾಕರಿಸುತ್ತಾರ?

ಪೇಜಾವರ ಸ್ವಾಮಿಗಳು ಮಾಧ್ವರು, ಮೇಲ್ಜಾತಿಗೆ ಸೇರಿದವರು. ಅವರು ಜಾತಿ ಗಣತಿ ಏಕೆ...

ಯೋಗೇಶ್ವರ್ ಬಿಜೆಪಿ ಬಿಟ್ಟಿದ್ದು ಆಶ್ಚರ್ಯವಿಲ್ಲ, ಕಾಂಗ್ರೆಸ್‌ಗೆ ಕುಮಾರಣ್ಣನೇ ಟಾರ್ಗೆಟ್: ನಿಖಿಲ್ ಕುಮಾರಸ್ವಾಮಿ

ಬಿಜೆಪಿಗೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ...

ಯಾವುದೇ ಷರತ್ತಿಲ್ಲದೆ ರಾಜಕೀಯ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ: ಸಿ ಪಿ ಯೋಗೇಶ್ವರ್

"ಯಾವುದೇ ಷರತ್ತಿಲ್ಲದೆ ರಾಜಕೀಯ ಜೀವನ ಪ್ರಾರಂಭ ಮಾಡಿದ್ದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್...