‘ಮೋದಿʼ ಉಪನಾಮ ಲೇವಡಿ; ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

Date:

  • ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
  • ಸೂರತ್ ಜಿಲ್ಲಾ ನ್ಯಾಯಾಲಯದಿಂದ ರಾಹುಲ್ ಗಾಂಧಿ ದೋಷಿ ಎಂಬ ತೀರ್ಪು

ಪ್ರಧಾನಿ ನರೇಂದ್ರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಜಿಲ್ಲಾ ನ್ಯಾಯಾಲಯವು ರಾಹುಲ್‌ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಆದರೆ ಇದಾದ ಕೆಲವೇ ಕ್ಷಣಗಳಲ್ಲೇ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು, ತನ್ನ ಆದೇಶವನ್ನು 30 ದಿನಗಳ ಅವಧಿಗೆ ತಡೆಹಿಡಿದಿದೆ. ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಅಥವಾ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸಂಸದರಾದ ರಾಹುಲ್‌ ಅವರಿಗೆ ಅವಕಾಶ ನೀಡಲಾಗಿದೆ.

ಏನಿದು ಪ್ರಕರಣ?

ಏಪ್ರಿಲ್‌ 19, 2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ  ಲೋಕಸಭಾ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ರಾಹುಲ್‌ ಗಾಂಧಿ, ʻಮೋದಿʼ ಉಪನಾಮದ ಬಗ್ಗೆ ಟೀಕಿಸಿದ್ದರು. “ಎಲ್ಲಾ ಕಳ್ಳರು, ಅದು ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ ಆಗಿರಲಿ, ಇವರೆಲ್ಲರೂ ಮೋದಿ ಎಂಬ ಸರ್‌ನೇಮ್‌ ಏಕೆ ಹೊಂದಿದ್ದಾರೆ” ಎಂದು ಭಾಷಣದ ನಡುವೆ ರಾಹುಲ್‌ ಪ್ರಸ್ತಾಪಿಸಿದ್ದರು.

ಇದರ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ನೀಡಿದ ದೂರಿನ ಮೇರೆಗೆ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಥಾಣೆ ಹತ್ಯೆ ಪ್ರಕರಣ | ಎಚ್‌ಐವಿ ಸೋಂಕಿತನಾಗಿದ್ದ ಹಂತಕ; ಮಹಿಳೆಯದು ಆತ್ಮಹತ್ಯೆ ಎಂದು ಹೇಳಿಕೆ!

ದೆಹಲಿಯ ಶ್ರದ್ದಾ ವಾಕರ್ ಹತ್ಯೆ ಪ್ರಕರಣದ ರೀತಿಯಲ್ಲಿಯೇ ಮಹಾರಾಷ್ಟ್ರದ ಥಾಣೆಯಲ್ಲಿ ಮಹಿಳೆಯೊಬ್ಬರನ್ನು...

ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ ಸಮನ್ಸ್‌ | ವಿಚಾರಣೆಗೆ ಹಾಜರಾಗುವುದಿಲ್ಲ ಎಂದ ಟಿಎಂಸಿ ನಾಯಕ

ಪ್ರಾಥಮಿಕ ಶಾಲಾ ನೇಮಕಾತಿ ಹಗರಣದಲ್ಲಿ ಅಭಿಷೇಕ್‌ ಬ್ಯಾನರ್ಜಿ ಪ್ರಶ್ನಿಸಿದ್ದ ಸಿಬಿಐ ಪಂಚಾಯತ್‌ ಚುನಾವಣೆಯ...

ಮಣಿಪುರದಲ್ಲಿ ಇಂಟರ್ನೆಟ್ ಸ್ಥಗಿತ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರ ರಾಜ್ಯದಲ್ಲಿ ಪದೇ ಪದೇ ಇಂಟರ್ನೆಟ್ ಸ್ಥಗಿತಗೊಳಿಸುವುದರ...

ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರ ಸ್ವರೂಪ: ಐಎಂಡಿ

ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ...