ಶೂರ್ಪನಖಿ ಹೇಳಿಕೆ; ಪ್ರಧಾನಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ರೇಣುಕಾ ಚೌಧರಿ

Date:

ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಗುರುವಾರ ಸೂರತ್ ನ್ಯಾಯಾಲಯ ತೀರ್ಪು ನೀಡಿದ ನಂತರ, ಕಾಂಗ್ರೆಸ್ ನಾಯಕಿ ಮತ್ತು ಕೇಂದ್ರದ ಮಾಜಿ ಸಚಿವೆ ರೇಣುಕಾ ಚೌಧರಿ ಅವರು ಸಂಸತ್ತಿನಲ್ಲಿ ತಮ್ಮನ್ನು ರಾಮಾಯಣದ ‘ಶೂರ್ಪನಖಿ’ ಪಾತ್ರಕ್ಕೆ ಹೋಲಿಸಿ ತಮಾಷೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ.

“ನನ್ನನ್ನು ಶೂರ್ಪನಖಿ ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ, ನಾನು ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ನ್ಯಾಯಾಲಯಗಳು ಎಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡೋಣ” ಎಂದು ರೇಣುಕಾ ಚೌಧರಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

2018ರ ರಾಜ್ಯಸಭಾ ಕಲಾಪದ ಹಳೆ ವಿಡಿಯೋದಲ್ಲಿ ಆಧಾರ್‌ ಕಾರ್ಡ್‌ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹೇಳಿಕೆಗೆ ಸಂಸದೆ ರೇಣುಕಾ ಚೌಧರಿ ಜೋರಾಗಿ ನಗುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅಂದಿನ ಸ್ಪೀಕರ್ ವೆಂಕಯ್ಯ ನಾಯ್ಡು ಅವರು, “ನಿಮ್ಮ ಸಮಸ್ಯೆ ಏನು? ನಿಮಗೇನಾದರೂ ಸಮಸ್ಯೆ ಆಗಿದ್ದರೆ ವೈದ್ಯರ ಬಳಿ ಹೋಗಿ, ದಯವಿಟ್ಟು ಸುಮ್ಮನೇ ಕುಳಿತುಕೊಳ್ಳಿ” ಎಂದು ತರಾಟೆಗೆ ತೆಗೆದುಕೊಳ್ಳುತ್ತಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವೆಂಕಯ್ಯ ನಾಯ್ಡು ಸೂಚನೆಯನ್ನೂ ಧಿಕ್ಕರಿಸಿ ರೇಣುಕಾ ನಗುವುದನ್ನು ಮುಂದುವರಿಸುತ್ತಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಸಭಾಪತಿಯವರೇ ರೇಣುಕಾ ಅವರಿಗೆ ನೀವು ನಗಲು ಬಿಡಿ. ರಾಮಾಯಣ  ಧಾರಾವಾಹಿಯ ನಂತರ ಈ ರೀತಿಯ ನಗುವನ್ನು ಕೇಳುವ ಸೌಭಾಗ್ಯ ಇಂದು ನಮಗೆ ಒದಗಿ ಬಂದಿದೆ” ಎಂದು ವ್ಯಂಗ್ಯವಾಡುತ್ತಾರೆ.

ಪ್ರಧಾನಿ ರಾಮಾಯಣದ ಉದಾಹರಣೆ ನೀಡಿ ರೇಣುಕಾ ಚೌಧರಿ ಅವರ ಕಾಲೆಳೆಯುತ್ತಿದ್ದಂತೆ ಬಿಜೆಪಿ ಸಂಸದರು ಮೇಜನ್ನು ಜೋರಾಗಿ ಕುಟ್ಟಿ ಬಿದ್ದು ಬಿದ್ದು ನಗಲು ಶುರು ಮಾಡುತ್ತಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಈಗ ಕಾಂಗ್ರೆಸ್‌ ನಾಯಕರು ಈ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...

ನಿಜವಾದ ಬದಲಾವಣೆ ಮಾಡುವವರು ನೀವು: ಮೊದಲ ಬಾರಿ ಮತದಾನ ಮಾಡುವವರಿಗೆ ಖರ್ಗೆ ಸಂದೇಶ

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ...

ವಿವಿಪ್ಯಾಟ್ ಪರಿಶೀಲನಾ ಗುರುತಿನ ಚೀಟಿ, ಮತಪತ್ರ ಚುನಾವಣಾ ಪ್ರಕ್ರಿಯೆಗೆ ಸುಪ್ರೀಂ ತಿರಸ್ಕಾರ

ಇವಿಎಂನಲ್ಲಿ ಮತ ಚಲಾಯಿಸಿದ ನಂತರ ಮತದಾರರಿಗೆ ವಿವಿಪ್ಯಾಟ್ ಮೂಲಕ ಪರಿಶೀಲನಾ ಚೀಟಿ...