ಕೋಝಿಕ್ಕೋಡ್ | ಫುಟ್‌ಬಾಲ್ ಆಡುತ್ತಿದ್ದ ಇಬ್ಬರು ಬಾಲಕರು ಸಮುದ್ರಪಾಲು

Date:

Advertisements

ಸಮುದ್ರ ತೀರದಲ್ಲಿ ಫುಟ್‌ಬಾಲ್‌ ಆಟವಾಡುತ್ತಿದ್ದ ವೇಳೆ ಇಬ್ಬರು ಯುವಕರು ನೀರುಪಾಲಾದ ಘಟನೆ ಕೇರಳದ ಕೋಝಿಕ್ಕೋಡ್‌ನಲ್ಲಿ ಭಾನುವಾರ ನಡೆದಿದೆ.

ಕೋಝಿಕ್ಕೋಡ್ ಬೀಚ್‌ನ ಲಯನ್ಸ್ ಪಾರ್ಕ್ ಬಳಿ ಭಾನುವಾರ ಬೆಳಗ್ಗೆ ಐವರು ಸ್ನೇಹಿತರು ಫುಟ್‌ಬಾಲ್‌ ಆಡುತ್ತಿದ್ದ ವೇಳೆ ಚೆಂಡು ಸಮುದ್ರಕ್ಕೆ ಬಿದ್ದಿತ್ತು. ಚೆಂಡು ತರಲೆಂದು ನೀರಿಗೆ ಇಳಿದ ಬಾಲಕನಿಗೆ ಈಜು ಬಾರದ ಕಾರಣ ನೀರಲ್ಲಿ ಮುಳುಗಿದ್ದಾನೆ. ಈ ವೇಳೆ ಆತನನ್ನು ರಕ್ಷಿಸಲು ಇಬ್ಬರು ಸ್ನೇಹಿತರು ಸಮುದ್ರಕ್ಕೆ ಜಿಗಿದ್ದಿದ್ದಾರೆ. ಮೂವರೂ ಸಹ ಮರಳಿ ದಡ ಸೇರದೇ ಇದ್ದಾಗ ಬದಿಯಲ್ಲಿದ್ದ ಇಬ್ಬರು ಸಹಾಯಕ್ಕಾಗಿ ಬೊಬ್ಬೆ ಹಾಕಿದ್ದಾರೆ. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ನೆರವಿಗೆ ಧಾವಿಸಿದ್ದು, ಓರ್ವ ಯುವಕನ್ನು ನೀರಿನಿಂದ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಉಳಿದಿಬ್ಬರು ನೀರು ಪಾಲಾಗಿದ್ದಾರೆ.

Kozhikode beach

ನಾಪತ್ತೆಯಾಗಿರುವ ಕೋಝಿಕ್ಕೋಡ್‌ ನಗರದ ವಳವಣ್ಣ ನಿವಾಸಿಗಳಾದ ಮೊಹಮ್ಮದ್ ಆದಿಲ್ (18) ಮತ್ತು ಆದಿಲ್ ಹಸನ್ (16) ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರಾವಳಿ ಪೊಲೀಸ್ ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರು ಹಾಗೂ ಮೀನುಗಾರರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಚೆಂಡನ್ನು ತೆಗೆಯಲು ನೀರಿಗಿಳಿದ ವೇಳೆ ಎತ್ತರದ ಅಲೆಗಳ ಹೊಡೆತಕ್ಕೆ ಸಿಲುಕಿ ಬಾಲಕರು ಕೊಚ್ಚಿಹೋಗಿದ್ದಾರೆ ಎಂದು ಕರಾವಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜೋಸಿ ಟಿ ಕೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು....

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

Download Eedina App Android / iOS

X