11 ಬುಡಕಟ್ಟು ಮಹಿಳೆಯರ ಅತ್ಯಾಚಾರ ಪ್ರಕರಣ; 21 ಆಂಧ್ರ ಪೊಲೀಸರ ಖುಲಾಸೆ

Date:

ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಹಳ್ಳಿಯೊಂದರಲ್ಲಿ 16 ವರ್ಷಗಳ ಹಿಂದೆ 11 ಬುಡಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 21 ಪೊಲೀಸರನ್ನು ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ.

ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳ ತಪ್ಪನ್ನು ಸಾಬೀತು ಮಾಡುವಲ್ಲಿ ಇಬ್ಬರು ತನಿಖಾಧಿಕಾರಿಗಳು ವಿಫಲರಾದ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಆಗಸ್ಟ್ 2007 ರಲ್ಲಿ ಗ್ರೇಹೌಂಡ್ಸ್ ವಿಶೇಷ ತಂಡಕ್ಕೆ ಸೇರಿದ 21 ಪೊಲೀಸ್ ಸಿಬ್ಬಂದಿ, ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿತ್ತು.

2018 ರಲ್ಲಿ ವಿಶಾಖಪಟ್ಟಣಂನಲ್ಲಿ ವಿಚಾರಣೆ ಪ್ರಾರಂಭವಾಯಿತು ಮತ್ತು ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆಯಡಿ ಹನ್ನೊಂದನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶರು, ಅಸಮರ್ಪಕ ತನಿಖೆಯ ಕಾರಣ ಪೊಲೀಸರನ್ನು ಖುಲಾಸೆಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

ಏತನ್ಮಧ್ಯೆ, ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ಅತ್ಯಾಚಾರ ಪ್ರಕರಣದಲ್ಲಿ ಬದುಕುಳಿದವರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಡಿಎಲ್‌ಎಸ್‌ಎ)ದ ಮೂಲಕ ಪರಿಹಾರ ಪಾವತಿಸಲು ಆದೇಶಿಸಿದರು.

ಮಾನವ ಹಕ್ಕುಗಳ ವೇದಿಕೆ ಸದಸ್ಯರ ಪ್ರಕಾರ, ಆರೋಪಿತ ಪೊಲೀಸರಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ಅವರಲ್ಲಿ ಕೆಲವರು ನಿವೃತ್ತಿ ಹೊಂದಿದ್ದಾರೆ ಮತ್ತು ಕೆಲವರು ಮೃತಪಟ್ಟಿದ್ದಾರೆ.

“2007ರ ಆಗಸ್ಟ್‌ನಲ್ಲಿ ಗ್ರೇಹೌಂಡ್ಸ್ ಪೊಲೀಸ್ ಪಡೆ 11 ಬುಡಕಟ್ಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದೆ ಮತ್ತು ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಲಾಯಿತು. ಆದರೆ ಇವರಲ್ಲಿ ಒಬ್ಬ ಆರೋಪಿಯನ್ನು ಸಹ ಬಂಧಿಸಲಾಗಿಲ್ಲ” ಎಂದು ಮಾನವ ಹಕ್ಕುಗಳ ವೇದಿಕೆಯ ಆಂಧ್ರಪ್ರದೇಶ ರಾಜ್ಯ ಸಮಿತಿಯ ಉಪಾಧ್ಯಕ್ಷ ಎಂ ಶರತ್ ಆರೋಪಿಸಿದ್ದರು.

21 ಸದಸ್ಯರ ವಿಶೇಷ ಪೊಲೀಸ್ ತಂಡವು 2007ರ ಆಗಸ್ಟ್ 20ರಂದು ವಾಕಪಲ್ಲಿ ಗ್ರಾಮಕ್ಕೆ ಕೂಂಬಿಂಗ್ ಕಾರ್ಯಾಚರಣೆಗೆ ತೆರಳಿತ್ತು ಮತ್ತು ವಿಶೇಷವಾಗಿ ಬುಡಕಟ್ಟು ಗುಂಪಿಗೆ ಸೇರಿದ 11 ಬುಡಕಟ್ಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದೆ ಎಂದು ವೇದಿಕೆ ಆರೋಪಿಸಿದೆ.

ಆರೋಪಿ ಪೊಲೀಸರ ವಿರುದ್ಧದ ತನಿಖೆಯು ಪ್ರಾರಂಭದಲ್ಲಿಯೇ ಅವರನ್ನು ರಕ್ಷಿಸುವ ಉದ್ದೇಶದಿಂದ ರಾಜಿ ಮಾಡಿಕೊಳ್ಳಲಾಯಿತು. ಅಪರಾಧ ಪ್ರಕರಣಗಳ ಕಡ್ಡಾಯ ನ್ಯಾಯವಿಧಾನಗಳನ್ನು ನಿರ್ಲಕ್ಷಿಸಲಾಯಿತು ಹಾಗೂ ವಿಧಿವಿಜ್ಞಾನ ವೈದ್ಯಕೀಯ ಪರೀಕ್ಷೆಗಳನ್ನು ಉಲ್ಲಂಘಿಸಲಾಗಿದೆ ಎಂದು ವೇದಿಕೆ ಆರೋಪಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಮಗುವಿನ ಡಿಎನ್‌ಎ ಪರೀಕ್ಷೆಗೆ ಅನುಮತಿ: ರಾಜಸ್ಥಾನ ಹೈಕೋರ್ಟ್

ಮಗುವಿನ ಪಿತೃತ್ವ ಪರೀಕ್ಷೆಯ ಫಲಿತಾಂಶಗಳನ್ನು ದಾಖಲಿಸುವ ಅರ್ಜಿಯನ್ನು ತಿರಸ್ಕರಿಸಿದ ರಾಜಸ್ಥಾನ ಹೈಕೋರ್ಟ್,...

ಕುಸ್ತಿಪಟುಗಳನ್ನು ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್

ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಮತ್ತೊಮ್ಮೆ ಕುಸ್ತಿಪಟುಗಳನ್ನು...

ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದು ‘ದೊಡ್ಡ ಪ್ರಮಾದ’: ವೀರಪ್ಪ ಮೊಯ್ಲಿ

ʻ2017ರಲ್ಲಿ ಕೇಂದ್ರ ಬಜೆಟ್‌ನೊಂದಿಗೆ ರೈಲ್ವೆ ಬಜೆಟ್ ಅನ್ನು ವಿಲೀನ ಮಾಡಿದ್ದು ಎನ್‌ಡಿಎ...

ಒಡಿಶಾ ರೈಲು ದುರಂತ | 60 ಕೋಟಿ ದಾನ ಮಾಡಿದ ಧೋನಿ! ವಾಸ್ತವವೇನು?

ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಹಲವರು ನೆರವಿನ...