ನೂತನ ಸಂಸತ್‌ ಭವನ ಉದ್ಘಾಟನೆ | 25 ಪಕ್ಷಗಳು ಭಾಗವಹಿಸುವ ಸಾಧ್ಯತೆ

Date:

ಕಾಂಗ್ರೆಸ್‌ ಸೇರಿ 19 ಪಕ್ಷಗಳು ಸೇರಿ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿರುವ ನಡುವೆಯೇ ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ಶುಕ್ರವಾರ (ಮೇ 26) ವರದಿ ಮಾಡಿವೆ.

ಭಾನುವಾರ (ಮೇ 28) ನಡೆಯಲಿರುವ ಸಂಸತ್‌ ಭವನದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವುದನ್ನು ಪ್ರತಿಪಕ್ಷಗಳು ವಿರೋಧಿಸಿವೆ.

ಬಿಜೆಪಿ ಸೇರಿ ಕೇಂದ್ರ ಆಡಳಿತ ಒಕ್ಕೂಟವಾದ ನ್ಯಾಷನಲ್‌ ಡೆಮಾಕ್ರಟಿಕ್‌ ಅಲಾಯನ್ಸ್‌ನ (ಎನ್‌ಡಿಎ) 18 ಪಕ್ಷಗಳು ಮತ್ತು ಏಳು ಎನ್‌ಡಿಎಯೇತರ ಪಕ್ಷಗಳು ನೂತನ ಸಂಸತ್‌ ಭವನ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವುದಾಗಿ ಈಗಾಗಲೇ ಪ್ರಕಟಿಸಿವೆ.

ಬಿಎಸ್‌ಪಿ, ಶಿರೋಮಣಿ ಅಕಾಲಿ ದಳ, ಜನತಾ ದಳ (ಜಾತ್ಯತೀತ), ಲೋಕ ಜನಸಕ್ತಿ ಪಕ್ಷ (ರಾಮ್‌ ವಿಲಾಸ್‌), ವೈಎಸ್‌ಆರ್‌ ಕಾಂಗ್ರೆಸ್‌, ಬಿಜೆಡಿ ಮತ್ತು ಟಿಡಿಪಿ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿವೆ.

ಈ ಸುದ್ದಿ ಓದಿದ್ದೀರಾ? ಯೋಗಿ ಸಿಎಂ ಆದ ನಂತರ ರಾಜ್ಯದಲ್ಲಿ 15 ದಿನಕ್ಕೊಂದು ಎನ್‌ಕೌಂಟರ್‌

ಕಾಂಗ್ರೆಸ್‌, ಎಡ, ಟಿಎಂಸಿ, ಎಸ್‌ಪಿ ಮತ್ತು ಎಎಪಿ ಸೇರಿ 19 ಪ್ರತಿಪಕ್ಷಗಳು ಹೊಸ ಸಂಸತ್ತು ಭವನದ ಉದ್ಘಾಟನೆ ಬಹಿಷ್ಕರಿಸಿ ಜಂಟಿ ಹೇಳಿಕೆ ನೀಡಿವೆ.

ನೂತನ ಸಂಸತ್‌ ಭವನ ಕಟ್ಟಡವನ್ನು ಪ್ರಧಾನಿ ಮೋದಿ ಅವರ ಬದಲಿಗೆ ರಾಷ್ಟ್ರಪತಿಗಳು ಉದ್ಘಾಟಿಸಬೇಕು ಎಂದು ಪ್ರತಿಪಕ್ಷಗಳು ಹೇಳಿವೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ...