ಹಿಮಾಚಲ ಪ್ರದೇಶ ಸೇರಿ ಉತ್ತರ ಭಾರತದಲ್ಲಿ ಭಾರೀ ಮಳೆ, ಪ್ರವಾಹಕ್ಕೆ 41 ಸಾವು

Date:

  • ಭಾರೀ ಮಳೆ ಪರಿಣಾಮ ಹಿಮಾಚಲದಲ್ಲಿ 31 ಸಾವು
  • ದೆಹಲಿಯಲ್ಲಿ ಯಮುನಾ ನದಿ ಭರ್ತಿಯಾಗಿ ಪ್ರವಾಹ

ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು ಮಳೆ ಸಂಬಂಧಿತ ಅವಘಡಗಳಲ್ಲಿ ವಾರಾಂತ್ಯ ಜುಲೈ 9ರ ಹೊತ್ತಿಗೆ ಕನಿಷ್ಠ 41 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

- Advertisement -

ಮಳೆ ಸಂಬಂಧಿತ ಅವಘಡಗಳಲ್ಲಿ ಹಿಮಾಚಲ ಪ್ರದೇಶವೊಂದರಲ್ಲೇ 31 ಜನರು ಸಾವನ್ನಪ್ಪಿದ್ದಾರೆ. ಪಂಜಾಬ್‌ನಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ಹಿಮಾಚಲ ಪ್ರದೇಶ ಸರ್ಕಾರ ಮಳೆಯಲ್ಲಿ ಸಿಲುಕಿರುವವರ ರಕ್ಷಣೆಗೆ ಆರು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜುಲೈ 9 ರಂದು ಅತ್ಯಂತ ತೇವಯುತ ದಿನ ಎಂದು ಕರೆಯಲಾಗಿದೆ. ಇದು 40 ವರ್ಷಗಳಿಗೂ ಹೆಚ್ಚು ಕಾಲದ ನಂತರ ಸಂಭವಿಸಿದ ದಾಖಲೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಅಣೆಕಟ್ಟೆಯ ತಡೆಗೋಡೆ ಕುಸಿತ

ರಾಜ್ಯದ ಪಂಡೋಹ್‌ ನಗರದ ಮಾರುಕಟ್ಟೆಯಲ್ಲಿ ಬುಧವಾರ (ಜುಲೈ 12) ಹಠಾತ್‌ ಪ್ರವಾಹ ಉಂಟಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಅಪಾರ ಹಾನಿ ಸಂಭವಿಸಿದೆ.

ಭಾರೀ ಮಳೆ ಪರಿಣಾಮ ತುಂಬಿದ ಅಣೆಕಟ್ಟು ಈ ಹಠಾತ್‌ ಪ್ರವಾಹಕ್ಕೆ ಕಾರಣವಾಗಿದೆ. ಮಾರುಕಟ್ಟೆಗೆ ಹೊಂದಿಕೊಂಡಿರುವ ಅಣೆಕಟ್ಟೆಗೆ ಅಡ್ಡಲಾಗಿ ನಿರ್ಮಿಸಿರುವ ಒಂಬತ್ತು ಅಡಿ ಎತ್ತರದ ನೀರಿನ ತಡೆಗೋಡೆಯು ರಭಸವಾಗಿ ನುಗ್ಗಿದ ನೀರಿನ ಹೊಡೆತಕ್ಕೆ ಕುಸಿದು ಬಿದ್ದಿದೆ. ಇದರಿಂದ ಅಪಾರ ಪ್ರಮಾಣದ ನೀರು ಮಾರುಕಟ್ಟೆಗೆ ನುಗ್ಗಿ ಹಾನಿ ಉಂಟು ಮಾಡಿದೆ. ಯಾವುದೇ ಮುನ್ಸೂಚನೆ ನೀಡದೆ ಜಲಾಶಯದ ನೀರನ್ನು ಹೊರಬಿಟ್ಟಿರುವುದು ಅನಾಹುತಕ್ಕೆ ಕಾರಣ ಎನ್ನಲಾಗಿದೆ.

ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಮುಂಗಾರು ಮಳೆಯು ಭಾರೀ ಪ್ರಮಾಣದಲ್ಲಿ ಸುರಿಯುತ್ತಿದೆ. ಇದರಿಂದ ಇಲ್ಲಿ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು ಹೆದ್ದಾರಿಗಳು, ಮನೆಗಳು, ಸೇತುವೆಗಳು ಜಲಾವೃತವಾಗಿವೆ. ಅನೇಕರು ಹೆದ್ದಾರಿಗಳು, ಮನೆಗಳಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

ಪಂಡೋಹ್‌ ಪ್ರದೇಶದಲ್ಲಿ ಶನಿವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ಇಲ್ಲಿನ ಅಣೆಕಟ್ಟಿನಲ್ಲಿ ಪ್ರಮಾಣ ಹೆಚ್ಚಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳು ಮಂಡಿ ಜಿಲ್ಲೆಯ ಬೀಸ್‌ ನದಿಗೆ ಹೆಚ್ಚುವರಿ ನೀರು ಬಿಡಲು ಅಣೆಕಟ್ಟಿನ ದ್ವಾರಗಳನ್ನು ತೆರೆದರು. ಬಿಯಾಸ್‌ ನದಿ ಉಕ್ಕಿ ಹರಿದು ಔಟ್‌, ಪಂಡೋಹ್‌ ಗ್ರಾಮಗಳನ್ನು ಬಂಜಾರ್‌ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಗಳು ಕೊಚ್ಚಿ ಹೋಗಿವೆ.

ದೆಹಲಿಯಲ್ಲಿ ಯಮುನಾ ನದಿ ಮಟ್ಟ ಹೆಚ್ಚಳ

ಭಾರೀ ಮಳೆ ಪರಿಣಾಮ ದೆಹಲಿಯಲ್ಲಿ ಯಮುನಾ ನದಿ ಮಟ್ಟದಲ್ಲಿ ಹೆಚ್ಚಳವಾಗಿದೆ. ಇದು ಸಾರ್ವಕಾಲಿಕ ದಾಖಲೆ ಮಟ್ಟ ಎಂದು ವರದಿಯಾಗಿದೆ. ಇದು ಬುಧವಾರದ ಅಂತ್ಯಕ್ಕೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಪರಿಸ್ಥಿತಿ ಅವಲೋಕನಕ್ಕೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತುರ್ತು ಸಭೆ ನಡೆಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸ್‌ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಿದೆ.

ಯಮುನಾ ನದಿಯ ನೀರಿನ ಮಟ್ಟ ಸಾರ್ವಕಾಲಿಕ ದಾಖಲೆ ಮಟ್ಟ (207.55 ಮೀಟರ್) ತಲುಪಿದೆ. ಈ ಮೂಲಕ 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. 1978ರಲ್ಲಿ ನೀರಿನ ಮಟ್ಟ 207.49 ಮೀಟರ್ ತಲುಪಿತ್ತು ಎಂದು ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಹೇಳಿದೆ.

ಯಮುನಾ ನದಿ ನೀರಿನ ಮಟ್ಟ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಅವರು ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ.

ಪ್ರವಾಹ ಸೇರಿದಂತೆ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿದ್ದೇವೆ ಎಂದು ಲೋಕೋಪಯೋಗಿ ಸಚಿವೆ ಅತಿಶಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಭಾರತದಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿದ ಯಮುನಾ, ಹೈಅಲರ್ಟ್ ಘೋಷಣೆ

ಯಮುನಾ ನದಿ ಮಟ್ಟ ಹೆಚ್ಚಳವಾಗಿ ಪ್ರವಾಹ ಉಂಟಾಗಿದ್ದ ನದಿ ನೀರು ದೆಹಲಿ ಮನೆಗಳು ಹಾಗೂ ಮಾರುಕಟ್ಟೆಗಳಿಗೆ ನುಗ್ಗಿದೆ. ಮಳೆಯು ಇಲ್ಲಿನ ಜನರ ಜೀವನವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರೀ ಮಳೆ ಪರಿಣಾಮ ಇನ್ನೂ ಮೂರು ದಿನ ಯಮುನಾ ನದಿ ಮಟ್ಟ ಹೆಚ್ಚಳ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನದಿ ಪ್ರದೇಶದಲ್ಲಿನ ಜನವಸತಿಯನ್ನು ಸ್ಥಳಾಂತರಿಸಲಾಗಿದೆ. ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹಳೆಯ ದೆಹಲಿಗೆ ಭಾರೀ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ದೆಹಲಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....