ಇಂದು ನೀತಿ ಆಯೋಗ ಸಭೆ | 8 ಮುಖ್ಯಮಂತ್ರಿಗಳು ಗೈರು

Date:

  • ವಿಕ್ಷಿತ್‌ ಭಾರತ್‌ @2047: ಟೀ ಇಂಡಿಯಾದ ಪಾತ್ರ ಹೆಸರಲ್ಲಿ ನೀತಿ ಆಯೋಗ ಸಭೆ
  • ಸಭೆಗೆ ಹಾಜರಾಗದಿರುವುದಕ್ಕೆ ಆರೋಗ್ಯ ಕಾರಣ ನೀಡಿರುವ ಅಶೋಕ್‌ ಗೆಹ್ಲೋಟ್

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ (ಮೇ 27) ನೀತಿ ಆಯೋಗ ಸಮಿತಿ ಸಭೆಯು ದೆಹಲಿಯಲ್ಲಿ ನಡೆಯುತ್ತಿದ್ದು ಸಭೆಗೆ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಭೆಗೆ ಹಾಜರಾಗದಿರುವ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಆರೋಗ್ಯ ಕಾರಣ ನೀಡಿದ್ದಾರೆ. ಆದರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ಅವರು ಸಭೆಗೆ ಗೈರು ಹಾಜರಾಗುವ ಬಗ್ಗೆ ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ.

ನೀತಿ ಆಯೋಗ ಸಭೆಗೆ ಇವರನ್ನು ಹೊರತುಪಡಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್‌, ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್‌, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಹಾಜರಾಗದಿರಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಜಪಾನ್‌ಗೆ ಅಧಿಕೃತ ಭೇಟಿ ನೀಡಿರುವ ಹಿನ್ನೆಲೆ ನೀತಿ ಆಯೋಗದ ಸಭೆಯಲ್ಲಿ ಪಾಲಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದಾರೆ.

ದೆಹಲಿ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್‌ ಸೆಂಟರ್‌ನಲ್ಲಿ ‘ವಿಕ್ಷಿತ್‌ ಭಾರತ್‌ @2047: ಟೀ ಇಂಡಿಯಾದ ಪಾತ್ರ’ ವಿಷಯದ ಕುರಿತು ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ನಡೆಯಲಿದ್ದು ಪ್ರಧಾನಿ ಮೋದಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಹೊಸ ಸಂಸತ್ ಭವನ ಉದ್ಘಾಟನೆ | ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ಸಭೆಯಲ್ಲಿ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ, ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ನೀತಿ ಆಯೋಗ ಸಭೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್‌ ಗೌರ್ನರ್‌ಗಳು, ನೀತಿ ಆಯೋಗದ ಉಪಾಧ್ಯಕ್ಷರು ಹಾಗೂ ಸದಸ್ಯರು, ಕೇಂದ್ರ ಸಚಿವರು ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಯಾಕೆ? ಸಿದ್ದರಾಮಯ್ಯ

"ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ....

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ...