ಗುಜರಾತ್ | ಕ್ರಿಕೆಟ್‌ ಚೆಂಡು ಮುಟ್ಟಿದ ವಿಚಾರವಾಗಿ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ ಹಲ್ಲೆ : ಇಬ್ಬರ ಬಂಧನ

Date:

  • ಗುಜರಾತ್‌ ದಲಿತ ವ್ಯಕ್ತಿ ಮೇಲಿನ ಹಲ್ಲೆ ಸಂಬಂಧ ಏಳು ಮಂದಿ ವಿರುದ್ಧ ಪ್ರಕರಣ
  • ಸಿಧ್‌ಪುರ ತಾಲೂಕಿನ ಕಾಕೋಶಿ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು

ಗುಜರಾತ್‌ ರಾಜ್ಯದ ಪಟಾನ್‌ ಜಿಲ್ಲೆಯ ಕಾಕೋಶಿ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ದಲಿತ ಬಾಲಕನೊಬ್ಬ ಚೆಂಡು ಮುಟ್ಟಿದನೆಂಬ ಕಾರಣಕ್ಕೆ ಆತನ ಚಿಕ್ಕಪ್ಪನ ಹೆಬ್ಬೆರಳು ಕತ್ತರಿಸಿ ಹಲ್ಲೆ ನಡೆಸಿರುವ ಘಟನೆ ಭಾನುವಾರ (ಜೂನ್ 4) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲ್ವರ್ಗದ ಏಳು ಮಂದಿ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಏಳು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಧ್‌ಪುರ ತಾಲೂಕಿನ ಕಾಕೋಶಿ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು ಗುಜರಾತ್‌ ರಾಜ್ಯದ ಹಲವೆಡೆ ಆರೋಪಿಗಳಿಗೆ ಶೋಧ ನಡೆಸಲಾಗಿದೆ.

ದೂರು ಆಧರಿಸಿ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಭಾನುವಾರ ಶಾಲೆಯ ಆಟದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆದಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕ್ರಿಕೆಟ್ ನೋಡಲು ಬಂದ ದಲಿತ ಬಾಲಕ ಪಂದ್ಯದ ವೇಳೆ ಚೆಂಡನ್ನು ಹಿಡಿದುಕೊಂಡಿದ್ದನು. ಈ ಕಾರಣಕ್ಕೆ ಕೋಪಗೊಂಡ ಆರೋಪಿಗಳು ಬಾಲಕನಿಗೆ ಬೆದರಿಕೆ ಹಾಕಿದರು. ಅಲ್ಲದೆ ಜಾತಿ ನಿಂದನೆಯನ್ನೂ ಮಾಡಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವೇಳೆ ಬಾಲಕನ ಚಿಕ್ಕಪ್ಪ ಧೀರಜ್ ಪರ್ಮಾರ್ ಬಾಲಕನ ಸಹಾಯಕ್ಕೆ ಮುಂದಾಗಿ, ವಿಷಯವನ್ನು ಇತ್ಯರ್ಥ ಪಡಿಸಿದ್ದರು. ಆದರೆ ಕುಲದೀಪ್‌ ಮತ್ತು ಇತರ ಆರು ಆರೋಪಿಗಳು ಅದೇ ದಿನ ಬಾಲಕನ ಚಿಕ್ಕಪ್ಪ ಧೀರಜ್ ಪರ್ಮಾರ್ ಹಾಗೂ ಆತನ ಸಹೋದರ ಕೀರ್ತಿ ಮೇಲೆ ಸಂಜೆ 6.30ರ ವೇಳೆ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಈ ವೇಳೆ ಆರೋಪಿಯೊಬ್ಬ ಕೀರ್ತಿ ಅವರ ಹೆಬ್ಬೆರಳನ್ನೇ ಕತ್ತರಿಸಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಗುಜರಾತ್‌ ದಲಿತ ವ್ಯಕ್ತಿಯ ಮೇಲಿನ ಹಲ್ಲೆ ಸಂಬಂಧ ಕುಲದೀಪ್‌ಸಿಂಗ್ ರಜಪೂತ್, ಸಿದ್ಧರಾಜ್‌ಸಿಂಹ, ರಾಜು ಅಲಿಯಾಸ್ ರಾಜ್‌ದೀಪ್ ದರ್ಬಾರ್, ಜಶ್ವಂತ್‌ಸಿಂಹ ರಜಪೂತ್, ಚಕುಬಾ ಲಕ್ಷ್ಮಂಜಿ, ಮಹೇಂದ್ರಸಿಂಹ ಮತ್ತು ಒಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಹಿಳೆಯ ಅರೆನಗ್ನ ದೇಹ ಪ್ರದರ್ಶನ ಅಶ್ಲೀಲವಲ್ಲ; ಕೇರಳ ಹೈಕೋರ್ಟ್‌

ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಗುಜರಾತ್‌ ಪೊಲೀಸರು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...