ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್‌; ಐಸಿಯುನಲ್ಲಿ ಚಿಕಿತ್ಸೆ

Date:

  • ಅನಾರೋಗ್ಯದ ಕಾರಣ ಸಫ್ಜರ್‌ಜಂಗ್‌ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯೇಂದ್ರ ಜೈನ್
  • ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈನ್‌ ಅವರನ್ನು ಬಂಧಿಸಿರುವ ಇಡಿ

ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್‌ ಅವರು ದೆಹಲಿಯ ತಿಹಾರ್‌ ಜೈಲಿನ ಸ್ನಾನಗೃಹದಲ್ಲಿ ಗುರುವಾರ (ಮೇ 25) ಕುಸಿದು ಬಿದ್ದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ದೆಹಲಿಯ ಮಾಜಿ ಸಚಿವರೂ ಆಗಿರುವ ಜೈನ್‌ ಅವರು ಬೆಳಿಗ್ಗೆ ಜೈಲಿನ ಸ್ನಾನಗೃಹದಲ್ಲಿ ತಲೆ ತಿರುಗಿ ಬಿದ್ದಿದ್ದರು.

ಕೂಡಲೇ ಸತ್ಯೇಂದ್ರ ಜೈನ್‌ ಅವರನ್ನು ದೀನ್‌ ದಯಾಳ್‌ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ನಂತರ ಅವರನ್ನು ಲೋಕ ನಾಯಕ ಜೈಪ್ರಕಾಶ್‌ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಎಎಪಿ ಟ್ವೀಟ್‌ ಮೂಲಕ ತಿಳಿಸಿದೆ.

ಜೈನ್‌ ಅವರನ್ನು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.

ಜೈನ್‌ ಅವರು ಹಿಂದೆಯೂ ಸ್ನಾನಗೃಹದಲ್ಲಿ ಬಿದ್ದಿದ್ದರು. ಪರಿಣಾಮ ಅವರ ಬೆನ್ನಿನ ಮೂಳೆಗೆ ಗಂಭೀರವಾದ ಗಾಯವಾಗಿತ್ತು ಎಂದು ಎಎಪಿ ಹೇಳಿದೆ.

ವಿಚಾರಣಾಧೀನ ಕೈದಿಯಾಗಿರುವ ಸತ್ಯೇಂದ್ರ ಜೈನ್‌ ಅವರು ಬೆಳಿಗ್ಗೆ ಸುಮಾರು 6 ಗಂಟೆ ವೇಳೆ ಕೇಂದ್ರ ಕಾರಾಗೃಹದ ವೈದ್ಯಕೀಯ ತಪಾಸಣೆ ಕೊಠಡಿ ಸ್ನಾನಗೃಹದಲ್ಲಿ ಜಾರಿ ಬಿದ್ದಿದ್ದಾರೆ. ನಿಶ್ಯಕ್ತಿಯ ಕಾರಣದಿಂದ ಅವರನ್ನು ಕಾರಾಗೃಹದ ಆಸ್ಪತ್ರೆಯಲ್ಲಿ ಇರಿಸಿ ನಿಗಾ ಇಡಲಾಗಿತ್ತು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇರಳದಲ್ಲಿ ಮೊದಲ ಬಾರಿಗೆ ಮನೆಕೆಲಸಗಾರರ ಹಕ್ಕುಗಳ ರಕ್ಷಣೆಗಾಗಿ ಮಸೂದೆ

ಜೈನ್‌ ಅವರಿಗೆ ಎಲ್ಲ ಅಗತ್ಯ ಪರೀಕ್ಷೆಗಳನ್ನು ಮಾಡಿಸಲಾಯಿತು. ಜೈನ್‌ ಅವರು ಈಗಾಗಲೇ ಬೆನ್ನುಮೂಳೆ ನೋವಿನಿಂದ ಬಳಲುತ್ತಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಜೈನ್‌ ಅವರು ಜಾರಿ ಬಿದ್ದಿದ್ದರಿಂದ ಅವರಿಗೆ ತೀವ್ರ ಸ್ವರೂಪದಲ್ಲಿ ನೋವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಜೈನ್‌ ಅವರು ಶೀಘ್ರ ಚೇತರಿಸಿಕೊಳ್ಳಲಿ. ಈ ಪ್ರತಿಕೂಲ ಸನ್ನಿವೇಶದ ವಿರುದ್ದ ಹೋರಾಡಲು ದೇವರು ಅವರಿಗೆ ಶಕ್ತಿ ನೀಡಲಿ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ತಿಳಿಸಿದ್ದಾರೆ.

ಸತ್ಯೇಂದ್ರ ಜೈನ್‌ ಅವರು ಸೋಮವಾರ ಅನಾರೋಗ್ಯದ ಕಾರಣ ದೆಹಲಿಯ ಸಫ್ಜರ್‌ಜಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ...