ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

Date:

  • ಒಂದು ದಿನದ ಹಿಂದಷ್ಟೆ ಸತ್ಯೇಂದ್ರ ಜೈನ್‌ ಜೈಲಿನ ಸ್ಥಾನದ ಕೋಣೆಯಲ್ಲಿ ಕುಸಿದು ಬಿದ್ದಿದ್ದರು
  • ಕಳೆದ ವರ್ಷ ಮೇನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ ಇಡಿ

ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ ವೈದ್ಯಕೀಯ ಕಾರಣಗಳಿಂದಾಗಿ ಸುಪ್ರೀಂ ಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.

ಒಂದು ದಿನದ ಹಿಂದಷ್ಟೆ ಸತ್ಯೇಂದ್ರ ಜೈನ್‌ ಅವರು ತಿಹಾರಿ ಜೈಲಿನ ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಅಸ್ವಸ್ಥಗೊಂಡ ಕಾರಣ ನವದೆಹಲಿಯ ಲೋಕನಾಯಕ ಜಯಪ್ರಕಾಶ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಒಂದು ವಾರದಲ್ಲಿ ಎರಡನೇ ಬಾರಿಗೆ ಜೈನ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸೋಮವಾರ, ಜೈಲಿನ ಸ್ನಾನದ ಕೋಣೆಯಲ್ಲಿ ಬಿದ್ದು ಬೆನ್ನುಮೂಳೆ ಗಾಯವಾಗಿರುವ ಕಾರಣ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಪರೀಕ್ಷಿಸಲಾಯಿತು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ₹20,000 ಕೋಟಿಯ ನೂತನ ಸಂಸತ್ ಭವನ; ಭಾರತದಲ್ಲಿ ಚರಿತ್ರೆ ಸೃಷ್ಟಿಯಾಗುತ್ತಿದೆ!

ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಎಎಪಿ ನಾಯಕನನ್ನು ಬಂಧಿಸಿದಾಗಿನಿಂದ ತಿಹಾರ್ ಜೈಲಿನಲ್ಲಿದ್ದಾರೆ.

ಸತ್ಯೇಂದ್ರ ಜೈನ್ ಅವರು ಶೆಲ್ ಕಂಪನಿಗಳ ಮೂಲಕ ಹಣ ಸಂಪಾದಿಸಿದ್ದಾರೆ ಮತ್ತು ಅಕ್ರಮ ಹಣದಿಂದ ಭೂಮಿ ಖರೀದಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಆದರೆ ದೆಹಲಿಯ ಮಾಜಿ ಸಚಿವರು ತನಿಖಾ ಸಂಸ್ಥೆಯ ಆರೋಪಗಳನ್ನು ನಿರಾಕರಿಸಿದ್ದು, ಇದನ್ನು ರಾಜಕೀಯ ಪ್ರೇರಿತ ಆರೋಪ ಎಂದು ಹೇಳಿದ್ದಾರೆ.

ಸತ್ಯೇಂದ್ರ ಜೈನ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಸಂಪುಟದಲ್ಲಿ ಆರೋಗ್ಯ, ಗೃಹ ಮತ್ತು ನಗರಾಭಿವೃದ್ಧಿ ಸೇರಿದಂತೆ ಹಲವಾರು ಖಾತೆಗಳನ್ನು ಹೊಂದಿದ್ದರು. ಜೈಲಿನಲ್ಲಿರುವಾಗಲೇ ಈ ವರ್ಷದ ಜನವರಿಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

"ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...

ನೇಹಾ ಕೊಲೆ ಪ್ರಕರಣ | ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು: ಪ್ರಲ್ಹಾದ್‌ ಜೋಶಿ ಆಗ್ರಹ

"ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾಗಿರುವ ನೇಹಾ ಹಿರೇಮಠ ಅವರನ್ನು ಮತಾಂತರ ಮಾಡಲು ಕೊಲೆ...