ಕೋಮು ಸಾಮರಸ್ಯಕ್ಕೆ ದ್ವೇಷ ಭಾಷಣದ ಕಡಿವಾಣ ಅಗತ್ಯ; ಸುಪ್ರೀಂ ಕೋರ್ಟ್

Date:

ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡ ಪೀಠವು ದ್ವೇಷದ ಭಾಷಣಗಳ ವಿರುದ್ಧದ ಅರ್ಜಿಯ ವಿಚಾರಣೆ ವೇಳೆ ದ್ವೇಷ ಭಾಷಣದ ಬಗ್ಗೆ ಮೌಖಿಕ ಅವಲೋಕನ ನಡೆಸಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನಿಸಿದ ಪೀಠ, “ಎಫ್‌ಐಆರ್‌ಗಳನ್ನು ದಾಖಲಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಕೇಳಿತು ಮತ್ತು ಕೇವಲ ದೂರುಗಳನ್ನು ದಾಖಲಿಸುವುದರಿಂದ ದ್ವೇಷದ ಭಾಷಣದ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎಂದು ತಿಳಿಸಿತು.

“ದ್ವೇಷ ಭಾಷಣಗಳಿಗೆ ಸಂಬಂಧಿಸಿದಂತೆ 18 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ” ಎಂದು ಮೆಹ್ತಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳೊಂದಿಗೆ ಕಾಂಗ್ರೆಸ್ ಸಭೆ

ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಎಂ ನಟರಾಜ್ ಅವರ ಆಕ್ಷೇಪಣೆಗಳ ಹೊರತಾಗಿಯೂ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

ದ್ವೇಷ ಭಾಷಣಗಳ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಅಕ್ಟೋಬರ್‌ 21 ರಂದು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಪೊಲೀಸ್ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಲಿ ಎಂದು ಕಾಯುತ್ತಾ ಕೂರುವ ಬದಲು “ತಕ್ಷಣ”ವೇ ಸ್ವಯಂಪ್ರೇರಿತ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕೆಂದು ನಿರ್ದೇಶಿಸಿತ್ತು.

“ಅತ್ಯಂತ ಗಂಭೀರವೆನಿಸಿರುವ ಈ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಆಡಳಿತವು ವಿಳಂಬ ಧೋರಣೆ ಅನುಸರಿಸಿದರೆ ಅದನ್ನು ನ್ಯಾಯಾಲಯ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಹಜೀವನ ಸಂಗಾತಿಯನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ!

ವ್ಯಕ್ತಿಯೊಬ್ಬ ತನ್ನ ಸಹ ಜೀವನ ಸಂಗಾತಿ ಮಹಿಳೆಯನ್ನು ಕೊಂದು, ಮೃತದೇಹವನ್ನು ತುಂಡುತುಂಡಾಗಿ...

ಕೇಂದ್ರದ ಸುಗ್ರೀವಾಜ್ಞೆ | ಎಎಪಿಗೆ ಸಮಾಜವಾದಿ ಪಕ್ಷ ಬೆಂಬಲ

ಸಮಾಜವಾದಿ ಪಕ್ಷ ಏರ್ಪಡಿಸಿದ್ದ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿ ದೆಹಲಿ ಅಧಿಕಾರಿಗಳ ನೇಮಕಾತಿ...

ಆರ್‌ಬಿಐ ಹಣಕಾಸು ನೀತಿ ಸಭೆ ಮುಕ್ತಾಯ; ರೆಪೊ ದರ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ

ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ರೆಪೊ ದರದಲ್ಲಿ ಯಥಾಸ್ಥಿತಿ...

ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನ

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ಬುಧವಾರ...