ಒಡಿಶಾ ರೈಲು ದುರಂತ | ಪೋಷಕರ ಕಳೆದುಕೊಂಡ ಮಕ್ಕಳಿಗೆ ಸೆಹ್ವಾಗ್, ಗೌತಮ್‌ ಅದಾನಿ ಸಹಾಯಹಸ್ತ; ಉಚಿತ ಶಿಕ್ಷಣ 

Date:

ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 275 ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಭಾರತ ತಂಡದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮತ್ತು ಉದ್ಯಮಿ ಗೌತಮ್ ಅದಾನಿ ಘೋಷಿಸಿದ್ದಾರೆ.

ದುರಂತದ ಚಿತ್ರಗಳು ಕಾಡುತ್ತಿದೆ; ಸೆಹ್ವಾಗ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʻಒಡಿಶಾ ರೈಲು ದುರಂತದ ಫೋಟೋ ಹಾಗೂ ಘಟನಾ ಸ್ಥಳದ ದೃಶ್ಯಗಳು ತೀವ್ರ ನೋವು ತರುತ್ತಿದೆ. ಅಪಘಾತವಾದ ದಿನದಿಂದ ಈ ಚಿತ್ರಗಳು ಕಾಡುತ್ತಿದೆ. ಈ ನೋವಿನ ಸಂದರ್ಭದಲ್ಲಿ ನನ್ನ ಕೈಲಾದ ಸಹಾಯ ಮಾಡಲು ಬಯಸುತ್ತೇನೆ. ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಉಚಿತ ವ್ಯವಸ್ಥೆ ಕಲ್ಪಿಸುತ್ತೇನೆ. ಈ ಮಕ್ಕಳಿಗೆ ಸೆಹ್ವಾಗ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಉಚಿತ ಶಿಕ್ಷಣ ಹಾಗೂ ವಸತಿ ನೀಡಲಾಗುವುದುʼ ಎಂದು ಸೆಹ್ವಾಗ್ ಟ್ವೀಟ್‌ ಮಾಡಿದ್ದಾರೆ.‌

ʻದುರಂತ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎಲ್ಲರಿಗೂ, ಸಿಬ್ಬಂದಿ ವರ್ಗದವರಿಗೆ ನನ್ನ ಸಲ್ಯೂಟ್. ವೈದ್ಯಕೀಯ ತಂಡ, ಸ್ವಯಂ ಸೇವಕರ ಗುಂಪು, ರಕ್ತ ದಾನ ಮಾಡಿದ ಮಹನಿಯರಿಗೆ ನನ್ನ ನಮಗಳು ಎಂದುʼ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ʼಅನಾಥ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿ ನಮ್ಮದುʼ; ಅದಾನಿ

‘ಒಡಿಶಾ ರೈಲು ದುರಂತ ಘಟನೆಯು ನಮಗೆಲ್ಲಾ ಬಹಳ ನೋವು ತಂದಿದೆ. ಈ ಅಪಘಾತದಲ್ಲಿ ತಮ್ಮ ಪೋಷಕರನ್ನು ಕಳೆದುಕೊಂಡ ಮುಗ್ಧ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಸಮೂಹ ಸಂಸ್ಥೆಯು ವಹಿಸಿಕೊಳ್ಳುತ್ತದೆ. ಸಂತ್ರಸ್ತರು ಮತ್ತವರ ಕುಟುಂಬಗಳಿಗೆ ನೆರವು ಒದಗಿಸುವುದು ಮತ್ತು ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ’ ಎಂದು ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಿಯ ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್’ ಎಂದು ಬರೆದ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಹೆಚ್ಚು ಅಂಕ

ಅಂಕಗಳನ್ನು ವಿದ್ಯಾರ್ಥಿ ಬರೆದ ಗುಣಮಟ್ಟದ ಉತ್ತರದ ಆಧಾರದ ಮೇಲೆ ನೀಡಲಾಗುತ್ತದೆ. ಆದರೆ...

ಪಾಟ್ನಾ| ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಆರು ಮಂದಿ ಸಾವು

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು...

ಮೋದಿ ದ್ವೇಷ ಭಾಷಣ: ಭಯ, ಹತಾಶೆಯ ಅಸಹ್ಯಕರ ಪ್ರತಿರೂಪ

ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಮುಸ್ಲಿಮರ...

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...