ರಷ್ಯಾದಲ್ಲಿ ತುರ್ತು ಭೂಸ್ಪರ್ಶ ನಂತರ ಮತ್ತೆ ಸ್ಯಾನ್‌ ಫ್ರಾನ್ಸಿಸ್ಕೊದತ್ತ ಏರ್‌ ಇಂಡಿಯಾ ವಿಮಾನ

Date:

  • 216 ಪ್ರಯಾಣಿಕರು, 16 ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ
  • ತಾಂತ್ರಿಕ ದೋಷದಿಂದ ರಷ್ಯಾದ ಮಗದನ್‌ನಲ್ಲಿ ಬೋಯಿಂಗ್‌ 777 ತುರ್ತು ಭೂಸ್ಪರ್ಶ

ಏರ್‌ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ ಈಗ ಎಂಜಿನ್‌ ದೋಷ ಸರಿಪಡಿಸಿಕೊಂಡು ಗುರುವಾರ (ಜೂನ್ 8) ಮತ್ತೆ ಸ್ಯಾನ್‌ ಫ್ರಾನ್ಸಿಸ್ಕೊಗೆ ತನ್ನ ಪಯಣ ಆರಂಭಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊ ನಗರಕ್ಕೆ ತೆರಳುತ್ತಿದ್ದ ವಿಮಾನ ರಷ್ಯಾದ ಮಗದನ್ ಎಂಬಲ್ಲಿ ಎಂಜಿನ್‌ನಲ್ಲಿಯ ತಾಂತ್ರಿಕ ದೋಷದಿಂದ ವಿಮಾನ ಇಳಿದಿತ್ತು. 232 ಪ್ರಯಾಣಿಕರೊಂದಿಗೆ ವಿಮಾನ ಮತ್ತೆ ತನ್ನ ಪಯಣ ಆರಂಭಿಸಿದೆ.

ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ಹೊರಟಿದ್ದ ಎಐ173 ವಿಮಾನವು ಎಂಜಿನ್ ದೋಷದಿಂದಾಗಿ ಮಂಗಳವಾರ ರಷ್ಯಾದ ಮಗದನ್ ಎಂಬಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು ಎಂದು ಏರ್ ಇಂಡಿಯಾ ಒಡೆತನದ ಟಾಟಾ ಗ್ರೂಪ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏರ್‌ ಇಂಡಿಯಾದ ಸಂಸ್ಥೆಯು ಈ ಬಗ್ಗೆ ಟ್ವೀಟ್‌ ಮಾಡಿದೆ.

216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತ ಬೋಯಿಂಗ್ 777-200 ಎಲ್‌ಆರ್ ವಿಮಾನವು ಸುರಕ್ಷಿತವಾಗಿ ಇಳಿದಿತ್ತು. ಇದೀಗ ರಷ್ಯಾದ ಮಗದನ್‌ನಿಂದ ವಿಮಾನ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಸ್ಯಾನ್ ಫ್ರಾನ್ಸಿಸ್ಕೊಗೆ ಹೊರಡಲಿದೆ ಎಂದು ಗುರುವಾರ ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಎಲ್ಲ ಪ್ರಯಾಣಿಕರು ಸ್ಯಾನ್ ಫ್ರಾನ್ಸಿಸ್ಕೊಗೆ ತಲುಪಿದ ನಂತರ ಎಲ್ಲ ರೀತಿಯ ಔಪಚಾರಿಕತೆಗಳನ್ನು ಕೈಗೊಳ್ಳಲು ಏರ್ ಇಂಡಿಯಾ ಸ್ಯಾನ್ ಫ್ರಾನ್ಸಿಸ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಕಾರ್ಯಪಡೆ ಸಜ್ಜುಗೊಳಿಸಿದೆ.

ಸ್ಯಾನ್ ಫ್ರಾನ್ಸಿಸ್ಕೊನಲ್ಲಿನ ತಂಡವು ಪ್ರಯಾಣಿಕರಿಗೆ ವೈದ್ಯಕೀಯ ಸೇವೆ ಮಾತ್ರವಲ್ಲದೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸಿದ್ಧವಾಗಿದೆ ಎಂದು ಏರ್ ಇಂಡಿಯಾದ ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನ

ದೆಹಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೊಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವೊಂದು ತನ್ನ ಎಂಜಿನವೊಂದರಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ರಷ್ಯಾದ ಮಗದನ್‌ ಎಂಬಲ್ಲಿ ಮಂಗಳವಾರ (ಜೂನ್ 6) ತುರ್ತು ಭೂಸ್ಪರ್ಶ ಮಾಡಿತ್ತು.

ಬೋಯಿಂಗ್‌ 777 ಹೆಸರಿನ ವಿಮಾನ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ರಷ್ಯಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಬಹಳ ತೊಂದರೆ ಅನುಭವಿಸಿದರು ಎಂದು ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ...