ಸೈಬರ್ ಕ್ರೈಮ್‌ಗೆ ಅಲಹಾಬಾದ್, ಸೂರತ್ ಹಾಟ್‌ಸ್ಪಾಟ್- ಗುಜರಾತ್ ಮಾಡೆಲ್ ಎಂದು ವ್ಯಂಗ್ಯವಾಡಿದ ನೆಟ್ಟಿಗರು

Date:

ಇದು ಡಿಜಿಟಲ್ ಯುಗ ಎಲ್ಲವೂ ಡಿಜಿಟಲ್‌ ವ್ಯವಹಾರಗಳಾಗಿ ಮಾರ್ಪಡುತ್ತಿವೆ. ಇದೇ ಹೊತ್ತಿನಲ್ಲಿ ಸೈಬರ್ ಕ್ರೈಮ್ ಕೂಡ ಹೆಚ್ಚಾಗುತ್ತಿದ್ದು, ಗುಜರಾತ್‌ನ ಅಹಮದಾಬಾದ್ ಮತ್ತು ಸೂರತ್ ನಗರಗಳು ದೇಶದ ಸೈಬರ್ ಕ್ರೈಮ್ ಹಾಟ್‌ಸ್ಪಾಟ್‌ಗಳಾಗಿ ಗುರುತಿಸಿಕೊಂಡಿವೆ. ಈ ಎರಡು ನಗರಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗಿವೆ ಎಂದು ಐಐಟಿ ವರದಿ ನೀಡಿದೆ.

- Advertisement -

ಉತ್ತರ ಪ್ರದೇಶದ ಕಾನ್ಪುರ ಮೂಲದ ಫ್ಯೂಚರ್ ಕ್ರೈಮ್ ರಿಸರ್ಚ್ ಫೌಂಡೇಶನ್ (ಎಫ್‌ಸಿಆರ್‌ಎಫ್‌) ಹೊಸ ಅಧ್ಯಯನ ನಡೆಸಿ, ಈ ಮಾಹಿತಿಯನ್ನು ಖಚಿತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಂಸ್ಥೆ ಬಿಡುಗಡೆ ಮಾಡಿರುವ ವರದಿಯು 2020ರ ಜನವರಿ ಮತ್ತು 2023ರ ಜೂನ್ ನಡುವೆ ರಾಷ್ಟ್ರವ್ಯಾಪಿ ವರದಿಯಾದ ಸೈಬರ್ ಅಪರಾಧ ಘಟನೆಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದೆ. 18 ರಾಜ್ಯಗಳಲ್ಲಿ 83 ಸಣ್ಣ ಪಟ್ಟಣಗಳು ಮತ್ತು ನಗರಗಳನ್ನು ತ್ವರಿತವಾಗಿ ಸೈಬರ್ ಕ್ರೈಮ್ ಹಬ್‌ಗಳಾಗಿವೆ ಎಂದು ವರದಿ ಹೇಳಿದೆ.

ಆನ್‌ಲೈನ್ ಹಣಕಾಸು ವಂಚನೆ, ಹ್ಯಾಕಿಂಗ್ ಒಳಗೊಂಡಂತೆ ಅಧ್ಯಯನದಲ್ಲಿ ಗುರುತಿಸಲಾದ ಪ್ರಮುಖ ಸೈಬರ್‌ ಕ್ರೈಮ್‌ಗಳಾಗಿವೆ. ಗುಜರಾತ್‌ನಲ್ಲಿ ಟಾಸ್ಕ್ ಆಧಾರಿತ ಮತ್ತು ಮೊಬೈಲ್ ಆಧಾರಿತ ಹೂಡಿಕೆ ವಂಚನೆಗಳು ಹೆಚ್ಚುತ್ತಿವೆ ಎಂದು ಇಲ್ಲಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಡುವೆ, ಕಳಪೆ ಕೆವೈಸಿ ನಿಯಮಗಳು ಅಪರಾಧಿಗಳನ್ನು ಹುಟ್ಟುಹಾಕುತ್ತಿವೆ ಎಂದು ವರದಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಮರ್ಯಾದೆಗೇಡು ಹತ್ಯೆ | ಪ್ರೀತಿಸಿದಕ್ಕೆ ಮಗಳನ್ನೇ ಕೊಂದ ತಂದೆ

“ಕಳೆದ 16 ತಿಂಗಳುಗಳಲ್ಲಿ, ಕಾರ್ಯ ಆಧಾರಿತ ಮತ್ತು ಮೊಬೈಲ್ ಅಪ್ಲಿಕೇಶನ್ ಆಧಾರಿತ ಹೂಡಿಕೆಗಳಲ್ಲಿ ಏರಿಕೆ ಕಂಡುಬಂದಿದೆ. ಅಹಮದಾಬಾದ್ ಪೊಲೀಸರು ಮೋಸದ ಜಾಲದಲ್ಲಿ ತೊಡಗಿರುವ ಗುಂಪುಗಳನ್ನು ಗುರುತಿಸಿದ್ದಾರೆ. ಈ ಗುಂಪುಗಳು ಸಂತ್ರಸ್ತರಿಗೆ ಗಣನೀಯ ನಷ್ಟವನ್ನು ಉಂಟುಮಾಡಿವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ.

ಈ ವರ್ಷದ ಜುಲೈನಲ್ಲಿ ಮುಂಬೈ, ಅಹಮದಾಬಾದ್ ಮತ್ತು ಹೈದರಾಬಾದ್‌ನಲ್ಲಿ ಸೈಬರ್ ಅಪರಾಧಗಳ ವಿರುದ್ಧ ಕಾರ್ಯಾಚರಣೆಗಳು ನಡೆದಿವೆ. ಹೈದರಾಬಾದ್ ಪೊಲೀಸರು ನೂರಾರು ಕೋಟಿ ರೂಪಾಯಿ ಮೊತ್ತದ ಹೂಡಿಕೆ ವಂಚನೆಯ ಜಾಲವನ್ನು ಬಹಿರಂಗಪಡಿಸಿದ್ದಾರೆ. ಮೂರು ನಗರಗಳಿಂದ ಒಂಬತ್ತು ಜನರನ್ನು ಬಂಧಿಸಲಾಗಿದೆ. ಈ ಗುಂಪುಗಳ ಬಲೆಗೆ ಬಿದ್ದು ಹಲವಾರು ಸಂತ್ರಸ್ತರು ದೊಡ್ಡ ಆರ್ಥಿಕ ನಷ್ಟವನ್ನು ಅನುಭವಿಸಿದ್ದಾರೆ.

ವರದಿ ಪಟ್ಟಿ ಮಾಡಿರುವ ಸೈಬರ್ ಕ್ರೈಮ್ ಹಾಟ್‌ಸ್ಪಾಟ್‌ಗಳ ಪೈಕಿ, ಪಶ್ಚಿಮ ಬಂಗಾಳವು ಅತಿ ಹೆಚ್ಚು ಅಂದರೆ 14 ಪಟ್ಟಣಗಳು ಮತ್ತು ನಗರಗಳನ್ನು ಹೊಂದಿದೆ. ಉತ್ತರ ಪ್ರದೇಶವು 11 ಪಟ್ಟಣಗಳನ್ನು ಹೊಂದಿದೆ. ದೆಹಲಿ, ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ನಗರಗಳೂ ಕಳವಳಕಾರಿಯಾಗಿ ಹಾಟ್‌ಸ್ಪಾಟ್‌ಗಳಾಗುತ್ತಿವೆ. “ಈ ಹಾಟ್‌ಸ್ಪಾಟ್‌ಗಳು ಡಿಜಿಟಲ್ ಕ್ರಿಮಿನಲ್ ಚಟುವಟಿಕೆಗಳು ಹೆಚ್ಚುತ್ತಿರುವ ಪ್ರದೇಶಗಳನ್ನು ಪ್ರತಿನಿಧಿಸುತ್ತವೆ. ಕಾನೂನು ಜಾರಿ ಏಜೆನ್ಸಿಗಳು ಮತ್ತು ಸಾರ್ವಜನಿಕರನ್ನು ರಕ್ಷಿಸುತ್ತವೆ” ಎಂದು ಎಫ್‌ಸಿಆರ್‌ಎಫ್ ವರದಿ ನೀಡಿದೆ.

ಬಿಜೆಪಿ ‘ಗುಜರಾತ್ ಮಾಡೆಲ್’ ಮುಂದಿಟ್ಟು ಪ್ರಚಾರ ಮಾಡಿತ್ತು. ಚುನಾವಣೆಗಳಲ್ಲಿ ಮತ ಗಳಿಸಿತ್ತು, ಕೇಂದ್ರದಲ್ಲಿ ಅಧಿಕಾರಕ್ಕೇರಿತ್ತು. ದಿನ ಕಳೆದಂತೆ, ಗುಜರಾತ್ ಯಾವುದಕ್ಕೆ ಮಾಡೆಲ್ ಎನ್ನುವುದು ಒಂದೊಂದಾಗಿ ಬಿಚ್ಚಿಕೊಳ್ಳತೊಡಗಿದೆ, ಇದು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ವ್ಯಂಗ್ಯಕ್ಕೆ ಗುರಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...