ಜಮ್ಮು- ಕಾಶ್ಮೀರ | ಕಿಶ್ತ್ವಾರ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ತನಿಖೆಗೆ ಆದೇಶ

Date:

  • ಕಳೆದ ಎರಡು ತಿಂಗಳಲ್ಲಿ ಎಎಲ್ಎಚ್ ಧ್ರುವ ಸೇನೆಯ ಹೆಲಿಕಾಪ್ಟರ್ 3 ನೇ ಬಾರಿಗೆ ಪತನ
  • ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಘಟನೆ ವರದಿ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಗುರುವಾರ (ಮೇ 4) ಪತನಗೊಂಡಿದೆ.

ಭಾರತೀಯ ಸೇನೆಯ ಎಎಲ್ಎಚ್ ಧ್ರುವ ಹೆಲಿಕಾಪ್ಟರ್ ಪತನಗೊಂಡಿದೆ. ಇದರಲ್ಲಿದ್ದ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ಹೆಲಿಕಾಪ್ಟರ್ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೇನೆಯು ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹೆಲಿಕಾಪ್ಟರ್‌ನ ನಿಯಂತ್ರಣದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆ ಹೆಲಿಕಾಪ್ಟರ್‌ ಅನ್ನು ತುರ್ತು ಭೂಸ್ಪರ್ಶ ಮಾಡಲು ಮುಂದಾದಾಗ ಈ ಅವಘಡ ಸಂಭವಿಸಿದೆ. ಭೂಸ್ಪರ್ಶ ಮಾಡುವ ಪ್ರದೇಶದಲ್ಲಿ ತೊಂದರೆಯಿದ್ದ ಕಾರಣ ಹೀಗಾಗಿದೆ” ಎಂದು ಸೇನಾ ಪ್ರಕಟಣೆ ತಿಳಿಸಿದೆ.

“ಕಿಶ್ತ್ವಾರ್ ಜಿಲ್ಲೆಯ ಮರ್ವಾ ಪ್ರದೇಶದಲ್ಲಿ ಎಎಲ್ಎಚ್ ಧ್ರುವ ಹೆಲಿಕಾಪ್ಟರ್ ಪತನಗೊಂಡಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಪೈಲಟ್ ಮತ್ತು ಸಹ ಪೈಲಟ್‌ರನ್ನು ರಕ್ಷಿಸಲಾಗಿದೆ. ತಕ್ಷಣವೇ ರಕ್ಷಣಾ ತಂಡಗಳು ಅಪಘಾತದ ಸ್ಥಳಕ್ಕೆ ಧಾವಿಸಿವೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ” ಎಂದು ಕಿಶ್ತ್ವಾರ್ ಪೊಲೀಸ್‌ ಅಧಿಕಾರಿ ಖಲೀಲ್ ಪೋಸ್ವಾಲ್ ಹೇಳಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ಎಎಲ್ಎಚ್ ಧ್ರುವ ಹೆಲಿಕಾಪ್ಟರ್ ಅಪಘಾತವಾಗಿರುವ ಮೂರನೇ ಘಟನೆ ಇದಾಗಿದೆ.

ಸೇನೆಯ ಹೆಲಿಕಾಪ್ಟರ್ ಪತನಕ್ಕೆ ತಾಂತ್ರಿಕ ದೋಷ ಕಾರಣವಿರಬಹುದೇ ಅಥವಾ ಕಳಪೆ ಗೋಚರಂತೆಯಿಂದಾಗಿ ಈ ಅಪಘಾತ ಸಂಭವಿಸಿರಬಹುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಮಾರ್ಚ್ 16 ರಂದು ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿತ್ತು. ಅದರಲ್ಲಿದ್ದ ಇಬ್ಬರೂ ಪೈಲಟ್‌ಗಳು ಹುತಾತ್ಮರಾಗಿದ್ದರು.

ಈ ಸುದ್ದಿ ಓದಿದ್ದೀರಾ? ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ; 180 ದೇಶಗಳ ಪೈಕಿ ಭಾರತಕ್ಕೆ 161ನೇ ಸ್ಥಾನ!

ಮಾರ್ಚ್ 30 ರಂದು ಕೆಂಟುಕಿಯಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿದ್ದ ಅಮೆರಿಕ ಸೇನೆಯ 2 ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ಗಳು ಪತನವಾಗಿ ಒಂಬತ್ತು ಸೈನಿಕರು ಹುತಾತ್ಮರಾಗಿದ್ದರು.

ಫೆಬ್ರವರಿಯಲ್ಲಿ ಅಮೆರಿಕಾದಲ್ಲಿ ಸೇನಾ ಹೆಲಿಕಾಫ್ಟರ್ ಪತನಗೊಂಡು ಇಬ್ಬರು ಸಾವನ್ನಪ್ಪಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...