ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬಂಧನಕ್ಕೆ ಜೂನ್ 9ರ ಗಡುವು

Date:

Advertisements
  • ದೇಶಾದ್ಯಂತ ಪ್ರತಿಭಟನೆಯ ಎಚ್ಚರಿಕೆ
  • ಜಂತರ್‌ ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆ

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು, ಕ್ರೀಡಾಪಟುಗಳು ಈಗಾಗಲೇ ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಕುಸ್ತಿಪಟುಗಳ ಪರ ನಿಂತಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಸಂಘಟನೆ, ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಕೇಂದ್ರ ಸರ್ಕಾರಕ್ಕೆ ಜೂನ್ 9ರ ಗಡುವು ನೀಡಿದೆ.  

ʻಆರೋಪಿ ಸ್ಥಾನದಲ್ಲಿರುವ ಬ್ರಿಜ್ ಭೂಷಣ್ ಸಿಂಗ್ ಬಂಧನವಾಗದ ಹೊರತು ಈ ಸಮಸ್ಯೆಗೆ ಪರಿಹಾರ ಸಾಧ್ಯವಿಲ್ಲʼ ಎಂದಿರುವ ರೈತ ಸಂಘಟನೆಗಳು, ಜೂನ್ 9ರೊಳಗೆ ಸಿಂಗ್ ಬಂಧಿಸದಿದ್ದರೆ, ಖಾಪ್ ಪಂಚಾಯತ್ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಘೋಷಿಸಿದೆ.

ಜೂನ್ 9ರಿಂದ ರೈತ ಸಂಘಟನೆಗಳನ್ನು ಒಗ್ಗೂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಈ ಚಳವಳಿ ದೇಶಾದ್ಯಂತ ನಡೆಯಲಿದೆ ಎಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಎಚ್ಚರಿಕೆ ನೀಡಿದ್ದಾರೆ. ದೇಶಾದ್ಯಂತ ಖಾಪ್ ಪಂಚಾಯತ್ ಹೋರಾಟದ ರೂಪುರೇಶೆ ಸಿದ್ದಪಡಿಸಲು ರೈತ ಸಂಘಟನೆ ಕೆಲ ಸಮಿತಿಗಳನ್ನು ರಚಿಸಿವೆ.

ʻನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ದಾಖಲಾಗಿರುವ ಎಲ್ಲಾ ದೂರುಗಳನ್ನು ತಕ್ಷಣವೇ ಕೈ ಬಿಡಬೇಕುʼ ಎಂದು ಟಿಕಾಯತ್‌ ಒತ್ತಾಯಿಸಿದ್ದಾರೆ.   

ಗಂಗಾ ನದಿಗೆ ಪದಕ ಎಸೆಯಲು ನಿರ್ಧರಿಸಿದ್ದ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಕಿಸಾನ್ ಯೂನಿಯನ್ ಸಂಘಟನೆಯ ನರೇಶ್‌ ಟಿಕಾಯತ್‌, ಪದಕಗಳನ್ನು ತಮ್ಮ ವಶಕ್ಕೆ ಪಡೆದು, ಸಮಸ್ಯೆ ಪರಿಹಾರಕ್ಕೆ ʻಐದು ದಿನಗಳ ಸಮಯವನ್ನು ಕೊಡಿʼ ಎಂದು ಕುಸ್ತಿಪಟುಗಳಲ್ಲಿ ಮನವಿ ಮಾಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು...

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

Download Eedina App Android / iOS

X