ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳಲಿರುವ ಬಿಪೊರ್‌ಜಾಯ್‌ | 3 ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ

Date:

  • ಬಿಪೊರ್‌ಜಾಯ್‌ ಚಂಡಮಾರುತ ಹಿನ್ನೆಲೆ ಕೇರಳದ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್
  • ಬಂಗಾಳಿ ಭಾಷೆಯಲ್ಲಿ ಬಿಪೊರ್‌ಜಾಯ್‌ ಎಂದರೆ ವಿಪತ್ತು ಎಂದು ಅರ್ಥ

ಬಿಪೊರ್‌ಜಾಯ್‌ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ (ಜೂನ್ 10) ಹೇಳಿದೆ.

ತೀವ್ರಗೊಳ್ಳುವ ಚಂಡಮಾರುತ ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಐಎಂಡಿ ತಿಳಿಸಿದೆ.

ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್ ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿರುವ ಬಿಪೊರ್‌ಚಾಯ್ ಚಂಡಮಾರುತ ಗಂಟೆಗೆ 145 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದರಿಂದ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಬಿಪೊರ್‌ಜಾಯ್‌ ಚಂಡಮಾರುತ ಹಿನ್ನೆಲೆ ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಕೇರಳದ ಎಂಟು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

“ಜೂನ್ 9ರಂದು ಸ್ಥಳೀಯ ಕಾಲಮಾನ ರಾತ್ರಿ 10.30ಕ್ಕೆ ಅತೀ ತೀವ್ರ ಸ್ವರೂಪದಲ್ಲಿ ಬಿಪೊರ್‌ಜಾಯ್ ಹೆಸರಿನ ಚಂಡಮಾರುತ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಬೀಸಿದೆ. ಇದು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಮತ್ತು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ” ಎಂದು ಐಎಂಡಿ ಟ್ವೀಟ್ ಮೂಲಕ ತಿಳಿಸಿದೆ.

ಬಿಪೊರ್‌ಜಾಯ್‌ ಚಂಡಮಾರುತ ಹಿನ್ನೆಲೆ ಹೆಚ್ಚಿನ ಅಲೆಗಳು ಮತ್ತು ಪ್ರಬಲವಾದ ಗಾಳಿಯಿಂದಾಗಿ ಅರೇಬಿಯನ್ ಸಮುದ್ರದ ಕರಾವಳಿಯಲ್ಲಿರುವ ಗುಜರಾತ್‌ನ ವಲ್ಸಾದ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣ ತಿಥಾಲ್ ಬೀಚ್ ಅನ್ನು ಜೂನ್ 14 ರವರೆಗೆ ಪ್ರವಾಸಿಗರಿಗೆ ಮುಚ್ಚಲಾಗಿದೆ.

ಚಂಡಮಾರುತ ಭಾನುವಾರ ಅಥವಾ ಸೋಮವಾರ ದಕ್ಷಿಣ ಗುಜರಾತ್ ತಲುಪಬಹುದು. ಪ್ರಸ್ತುತ ಅಲರ್ಟ್ ಸೂಚನೆಯಲ್ಲಿದ್ದೇವೆ. ಎಲ್ಲ ಅಧಿಕಾರಿಗಳು ಪ್ರಧಾನ ಕಚೇರಿಯಿಂದ ಹೊರಹೋಗದಂತೆ ಸೂಚಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು (ಎಸ್‌ಡಿಆರ್‌ಎಫ್) ಸ್ಟ್ಯಾಂಡ್ಬೈ ಮೋಡ್‌ನಲ್ಲಿ ಇರಿಸಲಾಗಿದ್ದು, ಕರಾವಳಿ ಗ್ರಾಮದ ಜನರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಸೂರತ್ನ ಜಿಲ್ಲಾಧಿಕಾರಿ ಬಿ.ಕೆ ವಾಸವ ತಿಳಿಸಿದ್ದಾರೆ.

ಚಂಡಮಾರುತಕ್ಕೆ ಬಾಂಗ್ಲಾದೇಶವು ಬಿಪೊರಜಾಯ್ ಎಂದು ಹೆಸರಿಸಿದೆ. ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂಬ ಅರ್ಥವಿದೆ.

ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸೇರಿದಂತೆ ಉತ್ತರ ಹಿಂದೂ ಮಹಾಸಾಗರದ ಮೇಲೆ ರೂಪುಗೊಳ್ಳುವ ಎಲ್ಲ ಉಷ್ಣವಲಯದ ಚಂಡಮಾರುತಗಳಿಗೆ ವಿಶ್ವ ಹವಾಮಾನ ಸಂಸ್ಥೆ (ಡಬ್ಲ್ಯುಎಂಒ) ಹೆಸರು ನೀಡುತ್ತದೆ.

ಈ ಸುದ್ದಿ ಓದಿದ್ದೀರಾ? ಅಭಿಷೇಕ್‌ ಬ್ಯಾನರ್ಜಿಗೆ ಇ.ಡಿ ಸಮನ್ಸ್‌ | ವಿಚಾರಣೆಗೆ ಹಾಜರಾಗುವುದಿಲ್ಲ ಎಂದ ಟಿಎಂಸಿ ನಾಯಕ

ಮುಂದಿನ 36 ಗಂಟೆಗಳಲ್ಲಿ ಬಿಪೊರ್‌ಜಾಯ್‌ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚಿಸಿದೆ.

ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಂದ್ರಯಾನ 3: ವಿಕ್ರಮ್, ಪ್ರಗ್ಯಾನ್‌ನಿಂದ ಇನ್ನೂ ಯಾವುದೇ ಸಿಗ್ನಲ್ ಬಂದಿಲ್ಲ ಎಂದ ಇಸ್ರೋ

ಚಂದ್ರನ ದಕ್ಷಿಣ ಧ್ರುವದಲ್ಲಿ ನಿಂತಿರುವ ಚಂದ್ರಯಾನ 3 ಯೋಜನೆಯ ಭಾಗವಾದ ವಿಕ್ರಮ್‌...

ಉದಯನಿಧಿ ಪೂರ್ವಜರು ಕೂಡ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರು: ನಟ ಕಮಲ್ ಹಾಸನ್

ಕೊಯಮತ್ತೂರಿನಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಹೇಳಿಕೆ ನೀಡಿದ ಸ್ಥಾಪಕ ಪೆರಿಯಾರ್...

ಬಿಜೆಪಿ ಸಂಸದನಿಂದ ಅವಹೇಳನ: ಸ್ಪೀಕರ್‌ ವಿರುದ್ಧ ಸಿಡಿದೆದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಮರ್ಯಾದಾ ಪುರುಷ ಸ್ಪೀಕರ್ ಅವರೇ ಏನು ಕ್ರಮ ಕೈಗೊಳ್ಳುತ್ತೀರಿ? ಬಹಿರಂಗವಾಗಿಯೇ ಪ್ರಶ್ನಿಸಿದ...

ಯುಪಿಯ ಸರ್ಕಾರ ಒಬಿಸಿ ಕೋಟಾ ಸೇರಿಸದಿರುವುದಕ್ಕೆ ವಿಷಾದವಿದೆ: ರಾಹುಲ್‌ ಗಾಂಧಿ

ಯುಪಿಎ ಸರ್ಕಾರ 2010ರಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಮಹಿಳೆಯರಿಗೆ...