ಆಶ್ರಮಕ್ಕೆ ಬೆಂಕಿ ಪ್ರಕರಣ; ಆರ್‌ಎಸ್‌ಎಸ್‌ ಕಾರ್ಯಕರ್ತ, ಬಿಜೆಪಿ ನಾಯಕನ ಬಂಧನ

Date:

ಕೇರಳದ ರಾಜಧಾನಿ ತಿರುವನಂತಪುರಂನಲ್ಲಿರುವ ಸ್ವಾಮಿ ಸಂದೀಪಾನಂದಗಿರಿ ಆಶ್ರಮಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಕೌನ್ಸಿಲರ್‌ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

ತಿರುವನಂತಪುರ ಪಿಟಿಪಿ ನಗರ ವಾರ್ಡ್ ಕೌನ್ಸಿಲರ್ ವಿಜಿ ಗಿರಿಕುಮಾರ್ ಮತ್ತು ಕರುಮಾಂಕುಳಂ ಮೂಲದ ಆರ್‌ಎಸ್‌ಎಸ್ ಕಾರ್ಯಕರ್ತ ಶಬರಿ ಎಂಬಾತನನ್ನು ಕ್ರೈಂ ಬ್ರಾಂಚ್ ಪೊಲೀಸರು ಕಳೆದೆರಡು ದಿನಗಳ ಅಂತರದಲ್ಲಿ ಬಂಧಿಸಿದ್ದಾರೆ.

ತಿರುವಂನಂತಪುರಂನ ಕುಂದಮಂಕಡವು ಎಂಬಲ್ಲಿರುವ ಕರಮನಾ ನದಿಯ ದಡದಲ್ಲಿರುವ ಸ್ವಾಮಿ ಸಂದೀಪಾನಂದಗಿರಿ ಆಶ್ರಮಕ್ಕೆ ಅಕ್ಟೋಬರ್ 27, 2018ರ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಘಟನೆಯಲ್ಲಿ ಆಶ್ರಮದ ವಾಹನದ ಮುಂಭಾಗ ನಿಲ್ಲಿಸಿದ್ದ ವಾಹನಗಳು ಸುಟ್ಟು ಕರಕಲಾಗಿದ್ದವು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ನಾಲ್ವರು ಆರೋಪಿಗಳು ನೀಡಿದ ಹೇಳಿಕೆಗಳ ಆಧಾರದ ಮೇಲೆ ಗಿರಿಕುಮಾರ್‌ನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಬಿಜೆಪಿ ಕೌನ್ಸಿಲರ್‌ ಗಿರಿಕುಮಾರ್ ಸಂಚಿನಲ್ಲಿ ಭಾಗಿಯಾಗಿದ್ದಕ್ಕೆ ಸಾಕ್ಷ್ಯಾಧಾರಗಳಿವೆ ಎಂದು ಕ್ರೈಂ ಬ್ರಾಂಚ್ ಪೊಲೀಸರು ಹೇಳಿದ್ದಾರೆ. ವಿಚಾರಣೆಗಾಗಿ ಕರೆಸಿದ ನಂತರ ಮಂಗಳವಾರ ಬಂಧನವನ್ನು ದಾಖಲಿಸಲಾಗಿದೆ.

ಕರುಮಾಂಕುಳಂ ಮೂಲದ ಆರ್‌ಎಸ್‌ಎಸ್ ಕಾರ್ಯಕರ್ತ ಶಬರಿಯನ್ನು ಕ್ರೈಂ ಬ್ರಾಂಚ್ ಪೊಲೀಸರು ಸೋಮವಾರ ರಾತ್ರಿ ಆತನ ಮನೆಯಿಂದ ಬಂಧಿಸಿದ್ದಾರೆ. ಘಟನೆ ನಡೆದ ದಿನ ಶಬರಿ ಆಶ್ರಮಕ್ಕೆ ಭೇಟಿ ನೀಡಿರುವುದು ತನಿಖೆಯ ವೇಳೆ ಧೃಡಪಟ್ಟಿತ್ತು.

Kerala
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...