ಕೇರಳ | 22 ಜನರ ಸಾವಿಗೆ ಕಾರಣವಾದ ಬೋಟ್‌ ಮಾಲೀಕನ ಬಂಧನ

Date:

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಸಂಜೆ ದುರಂತಕ್ಕೀಡಾದ ಬೋಟ್‌ನ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ತಾನೂರಿನ ತೂವಲ್ ತೀರಂ ಎಂಬಲ್ಲಿ 40 ಪ್ರಯಾಣಕರನ್ನು ಹೊತ್ತು ಸಾಗುತ್ತಿದ್ದ ಬೋಟ್‌  ‘ಅಟ್ಲಾಂಟಿಕ್’ ಮುಳುಗಡೆಯಾದ ಪರಿಣಾಮ 7 ಮಕ್ಕಳು ಸೇರಿದಂತೆ 22 ಮಂದಿ ಮೃತಪಟ್ಟಿದ್ದರು.

ಘಟನೆಯ ಬಳಿಕ ‘ಅಟ್ಲಾಂಟಿಕ್’ ಬೋಟ್‌  ಮಾಲೀಕ ನಾಸರ್  ತಲೆಮರೆಸಿಕೊಂಡಿದ್ದ. ಆದರೆ ಆತನ ಮೊಬೈಲ್ ನೆಟ್‌ವರ್ಕ್‌ನ ಟವರ್ ಲೊಕೇಶನ್ ಅನ್ನು ಟ್ರ್ಯಾಕ್ ಮಾಡಿದ್ದ ಪೊಲೀಸರು, ಕೋಝಿಕ್ಕೋಡ್‌ನ ಏಲಾತ್ತೂರ್ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕೇರಳ | ಬೋಟ್‌ ದುರಂತ; 18 ಮಂದಿ ಸಾವು

ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ

ಭಾನುವಾರದ ಬೋಟ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.

ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್, ಡಿಜಿಪಿ ಬಿ.ಸಂಧ್ಯಾ, ಎಡಿಜಿಪಿ ಎಂ.ಆರ್.ಅನಿಲಕುಮಾರ್ ಸೋಮವಾರ ತಾನೂರಿಗೆ ಆಗಮಿಸಿ ವಿಶೇಷ ತನಿಖಾ ತಂಡದ ಜೊತೆ ಸಮಾಲೋಚನೆ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ಮತ್ತೆ ಚುನಾವಣಾ ಬಾಂಡ್: ‘ಬಿಜೆಪಿಗೆ ಚಿನ್ನದ ಫಸಲು’ ಎಂದ ಪಿ ಚಿದಂಬರಂ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ವಿತರಣೆ...

ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಸಂಸದ ಸತೀಶ್ ಗೌತಮ್

ಉತ್ತರ ಪ್ರದೇಶದ ಬಿಜೆಪಿ ಸಂಸದ ಸತೀಶ್ ಗೌತಮ್ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲೇ...

ದೆಹಲಿ | ಆಝಾದ್‌ಪುರ ಮಂಡಿಯಲ್ಲಿ ಭೀಕರ ಬೆಂಕಿ ಅವಘಡ

ಟೊಮ್ಯಾಟೋ ಬೆಲೆ ಏರಿಕೆ ಸಂದರ್ಭದಲ್ಲಿ ತರಕಾರಿ ಕೊಂಡುಕೊಳ್ಳಲಾಗದೆ ವ್ಯಾಪಾರಿ ರಾಮೇಶ್ವರ್‌ ಅವರ...

ಪಿಟಿಐ ಅಧ್ಯಕ್ಷರಾಗಿ ‘ಪ್ರಜಾವಾಣಿ’ಯ ನಿರ್ದೇಶಕ ಕೆ ಎನ್ ಶಾಂತಕುಮಾರ್ ಆಯ್ಕೆ

ದೇಶದ ಖ್ಯಾತ ಸುದ್ದಿ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ(ಪಿಟಿಐ)ದ...