ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಎಫ್‌ಸಿಆರ್‌ಎ ಅಡಿ ಸಿಬಿಐ ಪ್ರಕರಣ

Date:

Advertisements
  • ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಕೇಂದ್ರ ತನಿಖೆಗೆ ಆದೇಶ
  • ಎಫ್‌ಸಿಆರ್‌ಎ ಅಡಿ ಆಕ್ಸ್‌ಫಾಮ್‌ ವಿರುದ್ಧ ಪ್ರಕರಣ ದಾಖಲು

ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿದೆ ಎಂದು ವರದಿಯಾಗಿದೆ.

ಸರ್ಕಾರೇತರ ಸಂಸ್ಥೆಗಳಿಗೆ (ಎನ್‌ಜಿಒ) ಕಾನೂನುಬಾಹಿರ ಹಣ ವರ್ಗಾವಣೆ ಮತ್ತು ವಿದೇಶಿ ಸರ್ಕಾರಗಳು ಹಾಗೂ ಸಂಸ್ಥೆಗಳನ್ನು ಬಳಸಿಕೊಂಡು ವಿದೇಶಿ ದೇಣಿಗೆ ಪರವಾನಗಿ ನವೀಕರಣಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ ಆರೋಪ ಎದುರಿಸುತ್ತಿದೆ.

ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದ 12 ದಿನಗಳ ನಂತರ ಸಿಬಿಐ ಪ್ರಕರಣ ದಾಖಲಿಸಿದೆ.

Advertisements

ಈ ಸಂಬಂಧ ಗೃಹ ಸಚಿವಾಲಯದ ನಿರ್ದೇಶಕ ಜಿತೇಂದರ್ ಚಡ್ಡಾ ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ–2010ರ (ಎಫ್‌ಸಿಆರ್‌ಎ) ಅಡಿ ಆಕ್ಸ್‌ಫಾಮ್‌ ಇಂಡಿಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಕೇಂದ್ರ ಸರ್ಕಾರ ಕಂಪನಿಯ ಐದು ನಿಯಮಗಳ ಉಲ್ಲಂಘನೆ ಪರಿಗಣಿಸಿತ್ತು. ವಿದೇಶಿ ದೇಣಿಗೆ ಸಂಗ್ರಹಿಸುವ ಪರವಾನಗಿ ನವೀಕರಿಸಿರಲಿಲ್ಲ. ಇದರ ಪರಿಣಾಮ ಆಕ್ಸ್‌ಫಾಮ್‌ ಕಂಪನಿ ದೇಶದ 16 ರಾಜ್ಯಗಳಲ್ಲಿ ಕೈಗೊಂಡಿರುವ ಕೋವಿಡ್ ಸಂಬಂಧಿತ ಮತ್ತು ಇತರೆ ಸಾಮಾಜಿಕ ಕಾರ್ಯಗಳಿಗೆ ಅಡಚಣೆ ಉಂಟಾಗಿತ್ತು.

ಆಕ್ಸ್‌ಫಾಮ್‌ ಕಂಪನಿಯು ಕಾನೂನು ಮಾರ್ಗವನ್ನು ಹೊರತುಪಡಿಸಿ ಬೇರೆ ಮಾರ್ಗಗಳ ಮೂಲಕ ಹಣವನ್ನು ಸಂಪಾದಿಸುವ ಮೂಲಕ ಎಫ್‌ಸಿಆರ್‌ಎ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಕಂಪನಿಯು ಲಾಭ ತಂದುಕೊಡುವಂತಹ ಮಾರ್ಗಗಳನ್ನು ಬಳಸಿ, ಕೆಲ ಸಂಸ್ಥೆಗಳಿಗೆ ಹಣ ವರ್ಗಾವಣೆ ಮಾಡುತ್ತಿತ್ತು. ಇಂಥ ವಹಿವಾಟಿನ ಮೂಲಕ ಎಫ್‌ಸಿಆರ್‌ಎ ನಿಯಮಗಳಿಂದ ತಪ್ಪಿಸಿಕೊಳ್ಳಲು ಸಂಚು ರೂಪಿಸಿತ್ತು. ಇದು ಆದಾಯ ತೆರಿಗೆ ಇಲಾಖೆ ನಡೆಸಿದ ತನಿಖೆಯಿಂದ ತಿಳಿದು ಬಂದಿದೆ ಎಂದು ಗೃಹ ಸಚಿವಾಲಯ ದಾಖಲಿಸಿದ ದೂರಿನಲ್ಲಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಮೀಸಲಾತಿ; ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

ಆಕ್ಸ್‌ಫಾಮ್‌ ಇಂಡಿಯಾ ವಿದೇಶಿ ಸಂಸ್ಥೆಗಳ ಸಾಧನವಾಗಿರುವ ಸಾಧ್ಯತೆ ಇದೆ ಎಂಬುದು ಪರಿಶೀಲನೆಯಲ್ಲಿ ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಲವು ವರ್ಷಗಳಿಂದ ಸಂಸ್ಥೆಗೆ ಉದಾರವಾಗಿ ದೇಣಿಗೆ ಹರಿದು ಬಂದಿದೆ ಎಂದು ತಿಳಿದು ಬಂದಿದೆ ಎಂದು ಸಚಿವಾಲಯ ಹೇಳಿದೆ.

ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಲು ನೋಂದಾಯಿಸಿಕೊಂಡಿರುವ ಆಕ್ಸ್‌ಫಾಮ್‌ ಕಂಪನಿಯು ತನ್ನ ಸಹವರ್ತಿಗಳು ಮತ್ತು ಉದ್ಯೋಗಿಗಳ ಮೂಲಕ ನೀತಿ ಸಂಶೋಧನಾ ಕೇಂದ್ರಕ್ಕೆ (ಸಿಪಿಆರ್) ಲಂಚದ ರೂಪದಲ್ಲಿ ಹಣವನ್ನು ರವಾನಿಸಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X