ಪ್ರಾಕೃತಿಕ ವಿಕೋಪಕ್ಕೆ ಸಿಲುಕಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕದಿಂದ ನೆರವಿನ ಹಸ್ತ

Date:

Advertisements

ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ‘ಸಂಕಷ್ಟದ ಸಮಯದಲ್ಲಿ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲುವುದು ಮುಖ್ಯವಾಗಿದೆ. ಕರ್ನಾಟಕದ ಜನರು ಹಿಮಾಚಲ ಪ್ರದೇಶದ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾರೆ’ ಎಂದು ಹೇಳಿದ್ದಾರೆ.

Advertisements

ಪ್ರಾಕೃತಿಕ ವಿಕೋಪದ ಹಿನ್ನೆಲೆ ರಸ್ತೆ ಮತ್ತು ಸೇತುವೆಗಳ ದುರಸ್ತಿಗಾಗಿ ಕೇಂದ್ರ ಸರ್ಕಾರವು ಹಿಮಾಚಲ ಪ್ರದೇಶಕ್ಕೆ ಸುಮಾರು 2700 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿತ್ತು.

ಛತ್ತೀಸ್‌ಘಢ ಸರ್ಕಾರ ಕೂಡ ಹಿಮಾಚಲ ಪ್ರದೇಶಕ್ಕೆ ನೆರವು ನೀಡಿದ್ದು, ವಿಪತ್ತು ಸಂತ್ರಸ್ತರ ಪರಿಹಾರ ಮತ್ತು ಪುನವರ್ಸತಿಗಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು 11 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ. ಅದೇ ರೀತಿ ರಾಜಸ್ಥಾನ ಸರ್ಕಾರ ಕೂಡಾ 15 ಕೋಟಿ ರೂ. ಆರ್ಥಿಕ ನೆರವನ್ನು ಹಿಮಾಚಲ ಪ್ರದೇಶಕ್ಕೆ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ವಿಪರೀತ ಅನಾಹುತ ಉಂಟು ಮಾಡಿದೆ. ಧಾರಾಕಾರ ಮಳೆ, ಭೂಕುಸಿತ ಎಲ್ಲೆಡೆ ಅವಾಂತರ ಸೃಷ್ಟಿಸಿದೆ.

ಶಿಮ್ಲಾದಿಂದ ಧರ್ಮಶಾಲಾ, ಸೋಲನ್, ಕುಲು, ಬಿಲಾಸ್‌ಪುರ್‌ಗೆ ವ್ಯಾಪಕ ಹಾನಿಯಾಗಿದೆ. ರಸ್ತೆಗಳು, ಮನೆಗಳು, ವ್ಯಾಪಾರ ಸಂಸ್ಥೆಗಳು ಇತ್ಯಾದಿಗಳು ಹಾನಿಗೊಳಗಾಗಿವೆ. ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X