ತಮಿಳುನಾಡು | ಯುವ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತಿಕ್ಕಾಟ

Date:

  • ಬಿಜೆಪಿ ಕಚೇರಿ ಮುಂದೆ ಯುವ ಕಾಂಗ್ರೆಸ್‌ ಪ್ರತಿಭಟನೆ
  • ರಸ್ತೆ ತಡೆ ನಡೆಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ದ ಘೋಷಣೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿರುವ ವಿರುದ್ಧ ತಮಿಳುನಾಡಿನಲ್ಲಿ ಪ್ರತಿಭಟಿಸುತ್ತಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ನಡುವೆ ಮಂಗಳವಾರ (ಏಪ್ರಿಲ್‌ 4) ಘರ್ಷಣೆ ಉಂಟಾಗಿದೆ.

ರಾಹುಲ್‌ ಗಾಂಧಿ ಅವರ ಲೋಕಸಭೆ ಅನರ್ಹತೆ ಖಂಡಿಸಿ ಪ್ರದೇಶದಲ್ಲಿ ಕಾಂಗ್ರೆಸ್‌ನ ರಾಜ್ಯ ಯುವ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿದ ನಂತರ ದೇಶದೆಲ್ಲೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ವರದಿಯಾಗುತ್ತಿವೆ. ರಾಜ್ಯದ ಕನ್ಯಾಕುಮಾರಿಯ ನಾಗರಕೋಯಿಲ್‌ ಪ್ರದೇಶದಲ್ಲಿ ಯುವ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ಉಂಟಾಗಿದೆ.

“ನಗರಕೋಯಿಲ್‌ನಲ್ಲಿ ಬಿಜೆಪಿ ಕಚೇರಿಯ ಹೊರಗೆ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರು. ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಧರ್ಮರಾಜ್‌ ಮತ್ತು ಇತರರು ನಮ್ಮ ಮೇಲೆ ದಾಳಿ ಮಾಡಿದ್ದಾರೆ” ಎಂದು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ಬಿ ವಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

“ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಬಿಜೆಪಿಯ ಈ ಕೃತ್ಯವನ್ನು ನಾನು ಖಂಡಿಸುತ್ತೇನೆ. ಇಂತಹ ಬಿಜೆಪಿಯ ಗೂಂಡಾಗಳನ್ನು ನ್ಯಾಯದ ಮುಂದೆ ತರಲೇಬೇಕಿದೆ” ಎಂದು ಶ್ರೀನಿವಾಸ್‌ ಟ್ವೀಟ್‌ ಮಾಡಿದ್ದಾರೆ.

ಯುವ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿಯ ವಿಡಿಯೋವೊಂದನ್ನು ಶ್ರೀನಿವಾಸ್‌ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾಗರಕೋಯಿಲ್‌ನಲ್ಲಿ ಬಿಜೆಪಿ ಕಚೇರಿ ಮುಂದೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಅಲ್ಲದೆ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಘಟನೆಯ ನಂತರ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಯುವ ಕಾಂಗ್ರೆಸ್‌ ವಿರುದ್ಧ ಪ್ರತಿಭಟಿಸಿದರು.

ತಮಗೆ ಎರಡು ವರ್ಷ ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಸಲ್ಲಿಸಿದ ಮೇಲ್ಮನವಿಯನ್ನು ಸೋಮವಾರ (ಏಪ್ರಿಲ್‌ 3) ಆಲಿಸಿ ಸೆಷನ್ಸ್‌ ನ್ಯಾಯಾಲಯ ರಾಹುಲ್‌ ಅವರಿಗೆ ಜಾಮೀನು ಮಂಜೂರು ಮಾಡಿತು.

2019ರ ಮಾನಹಾನಿ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ಆದೇಶಕ್ಕೆ ತಡೆ ನೀಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಸೆಷನ್ಸ್‌ ನ್ಯಾಯಾಲಯ ಏಪ್ರಿಲ್‌ 13ಕ್ಕೆ ನಿಗದಿಪಡಿಸಿತು.

2019ರಲ್ಲಿ ಲೋಕಸಭೆ ಚುನಾವಣೆ ಸಂದರ್ಭ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ಸಮಾವೇಶದ ವೇಳೆ ರಾಹುಲ್‌ ಗಾಂಧಿ ಅವರು ಭಾಷಣದ ವೇಳೆ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿದ್ದರು.

ಇದನ್ನು ಖಂಡಿಸಿ ಪೂರ್ಣೇಶ್‌ ಮೋದಿ ಎಂಬುವವರು ಸೂರತ್‌ ಸೆಷನ್ಸ್‌ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕತ್ತೆ ಹಾಲಿನಿಂದ ತಯಾರಿಸಿದ ಸಾಬೂನಿನಿಂದ ಮಹಿಳೆಯರು ಸುಂದರ; ಮೇನಕಾ ಗಾಂಧಿ ಹೇಳಿಕೆ ವೈರಲ್

ಮಾರ್ಚ್‌ 23ರಂದು ವಿಚಾರಣೆ ನಡೆಸಿದ್ದ ಸೆಷನ್ಸ್‌ ನ್ಯಾಯಾಲಯ ರಾಹುಲ್‌ ಗಾಂಧಿ ಅವರನ್ನು ಅಪರಾಧಿ ಎಂದು ಘೋಷಿಸಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತು. ಮಾರ್ಚ್‌ 24 ರಂದು ರಾಹುಲ್‌ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅಮಾನತುಗೊಳಿಸಿ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀರು ತುಂಬಿ ತೊಂದರೆಗೀಡಾಗುವ ಪ್ರದೇಶಗಳನ್ನು ಶೀಘ್ರ ಗುರುತಿಸಿ : ಅಧಿಕಾರಿಗಳಿಗೆ ಡಿಸಿಎಂ ಸೂಚನೆ

ನಗರ ಪ್ರದಕ್ಷಿಣೆ ನಡೆಸಿ ಮಳೆ ತೊಂದರೆ ಪ್ರದೇಶ ವೀಕ್ಷಿಸಿದ ಡಿಸಿಎಂ ಅಧಿಕಾರಿಗಳ ಕಾರ್ಯ...

ರೈಲು ದುರಂತ | ಉದ್ಯಮಿ ಹರ್ಷ್‌ ಗೋಯೆಂಕಾಗೆ ರೈಲ್ವೆ ಸಚಿವರ ಮೇಲೆ ಯಾಕಿಷ್ಟು ಕಾಳಜಿ? ಏನಿದು ಕವಚದ ಕತೆ?

ಒಡಿಶಾದ ಬಾಲಾಸೋರ್‌ನಲ್ಲಿ ನಡೆದ ರೈಲು ದುರಂತ ಪ್ರಕರಣದ ತನಿಖೆ ಸಿಬಿಐ ಕೈಸೇರಿದೆ....

ಇಲ್ಲಿ ಕ್ರಿಮಿನಲ್‌ಗಳು, ಅಲ್ಲಿ ಉದ್ಯಮಿಗಳು: ಗುಜರಾತ್‌ನ ಸಂದೇಸರ ಸಹೋದರರ ಕಥೆ

ಸಂದೇಸರ ಸಹೋದರರನ್ನು 5,383 ಕೋಟಿ ರೂಪಾಯಿಗಳ ಆಂಧ್ರ ಬ್ಯಾಂಕ್ ವಂಚನೆಯ ಪ್ರಕರಣದ...

ಒಡಿಶಾ ರೈಲು ದುರಂತ: ಟಿವಿ ನೇರ ಪ್ರಸಾರ ನೋಡಿ ಪೋಷಕರ ಮಡಿಲು ಸೇರಿದ ಗಾಯಾಳು

ಒಡಿಶಾದ ಬಾಲೇಶ್ವರದ ತ್ರಿವಳಿ ರೈಲು ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಾಲಕನೊಬ್ಬ...