ಉತ್ತರಾಖಂಡದಲ್ಲಿ ‘ಕೋಮುವಾದಿ’ ಮಹಾಪಂಚಾಯತ್‌; ಅನುಮತಿ ನೀಡದಂತೆ ನಿವೃತ್ತ ಅಧಿಕಾರಿಗಳ ಒತ್ತಾಯ

Date:

ಉತ್ತರಾಖಂಡದ ಉತ್ತರಕಾಶಿ ಮತ್ತು ತೆಹ್ರಿ ಗರ್ವಾಲ್ ಜಿಲ್ಲೆಗಳಲ್ಲಿ ಮುಸ್ಲಿಮರ ವಿರುದ್ಧದ ಪ್ರತಿಭಟನೆಗಳು, ಹಿಂಸಾಚಾರಗಳು ಹೆಚ್ಚುತ್ತಿವೆ. ಹಿಂದುತ್ವವಾದಿ ಸಂಘಟನೆಗಳು ಮಹಾಪಂಚಾಯತ್ ನಡೆಸಲು ಮುಂದಾಗಿವೆ. ಈ ಸಂಘಟನೆಗಳು ನಡೆಸುವ ‘ಕೋಮುವಾದಿ’ ಮಹಾಪಂಚಾಯತ್‌ಗಳಿಗೆ ಅವಕಾಶ ನೀಡಬಾರದು ಎಂದು ಅಲ್ಲಿನ ರಾಜ್ಯ ಸರ್ಕಾರವನ್ನು ನಿವೃತ್ತ ಅಧಿಕಾರಿಗಳ ‘ಕಾನ್ಸ್ಟಿಸ್ಟ್ಯೂಷನ್ ಕಂಡಕ್ಟ್‌ ಗ್ರೂಪ್ (ಸಿಸಿಜಿ – ಸಾಂವಿಧಾನಿಕ ನಡವಳಿಕೆ ಗುಂಪು) ಒತ್ತಾಯಿಸಿದೆ. ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ಎಸ್‌.ಎಸ್ ಸಂಧು ಮತ್ತು ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಅವರಿಗೆ ಪತ್ರ ಬರೆದಿದೆ.

- Advertisement -

“ಉತ್ತರಾಖಂಡ ಉತ್ತರಕಾಶಿ ಮತ್ತು ತೆಹ್ರಿ ಗರ್ವಾಲ್ ಜಿಲ್ಲೆಗಳಲ್ಲಿ ಮುಸ್ಲಿಂ ವಿರೋಧಿ ದ್ವೇಷ ಭಾಷಣಗಳು ಹೆಚ್ಚುತ್ತಿವೆ. ಮುಸ್ಲಿಮರ ವಿರುದ್ಧ ಪ್ರಚೋದನಾಕಾರಿ ಘಟನೆಗಳು ನಡೆಯುತ್ತಿವೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ಆಂತಕ ಹೆಚ್ಚಾಗಿದೆ” ಎಂದು 52 ನಿವೃತ್ತ ಅಧಿಕಾರಿಗಳು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಜೂನ್ 15 ರಂದು ಪುರೋಲಾ ಪಟ್ಟಣದಲ್ಲಿ ಹಿಂದುತ್ವವಾದಿಗಳು ‘ಮಹಾಪಂಚಾಯತ್’ ನಡೆಸಲಿದ್ದಾರೆ. ಜೂನ್ 20 ರಂದು ತೆಹ್ರಿಯಲ್ಲಿ  ರ್‍ಯಾಲಿ ಮತ್ತು ಚಕ್ಕಾಜಾಮ್‌ ನಡೆಸಿದ್ದಾರೆ. ಈ ವೇಳೆ, ಮುಸ್ಲಿಮರನ್ನು ಜಿಲ್ಲೆಗಳಿಂದ ಹೊರಹಾಕುವಂತೆ ಪ್ರಚೋದನಾಕಾರಿ ಕರೆಗಳನ್ನು ಹಿಂದುತ್ವವಾದಿಗಳು ನೀಡಲು ಉದ್ದೇಶಿದ್ದಾರೆ” ಎಂದು ನಿವೃತ್ತ ಅಧಿಕಾರಿಗಳು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಇಂತಹ ‘ಕ್ರಿಮಿನಲ್, ಕೋಮುವಾದಿ ಅಥವಾ ಬೆದರಿಸುವ ಕಾರ್ಯಕ್ರಮಗಳನ್ನು’ ನಡೆಸಲು ಅನುಮತಿಸಬಾರದು. ಸಂವಿಧಾನ, ಕಾನೂನು ಮತ್ತು ಸುಪ್ರೀಂ ಕೋರ್ಟ್‌ನ ಬಹು ನಿರ್ದೇಶನಗಳ ಪ್ರಕಾರ, ದ್ವೇಷ ಭಾಷಣ ಮತ್ತು ಗುಂಪು ಹಿಂಸಾಚಾರಗಳ ವಿರುದ್ಧ ಪೋಲಿಸ್ ಮತ್ತು ಆಡಳಿತಾಂಗ ಕ್ರಮ ಕೈಗೊಳ್ಳಬೇಕು” ಎಂದು ಸಿಸಿಜಿ ಒತ್ತಾಯಿಸಿದೆ.

ಈ ಸುದ್ದಿ ಓದಿದ್ದೀರಾ?: ನನ್ನಂತಹ ಬಿಜೆಪಿ ಮುಖಂಡನಿಗೇ ರಕ್ಷಣೆ ಇಲ್ಲ, ಮತ್ತಾರು ಸುರಕ್ಷಿತರು: ಬಿಜೆಪಿಯ ಮುಸ್ಲಿಂ ನಾಯಕ

“ಈ ಎರಡೂ ಜಿಲ್ಲೆಗಳ 12ಕ್ಕೂ ಹೆಚ್ಚು ಪಟ್ಟಣಗಳಲ್ಲಿ ಹಿಂದುತ್ವವಾದಿ ಕೋಮು ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿವೆ. ಮುಸ್ಲಿಮರ ವಿರುದ್ಧ ರ್‍ಯಾಲಿಗಳು ನಡೆಯಲಿವೆ. ಇವು ಮುಸ್ಲಿಮರ ವಿರುದ್ಧ ದ್ವೇಷದ ಭಾಷಣವನ್ನು ಸೂಚಿಸುತ್ತದೆ. ಈಗಾಗಲೇ, ಮೇ 28 ರಂದು 42 ಮುಸ್ಲಿಂ ಕುಟುಂಬಗಳು ಪುರೋಲಾ ಪಟ್ಟಣವನ್ನು ತೊರೆದಿವೆ. ಅಂಗಡಿಗಳು ಭಾಗಶಃ ಮುಚ್ಚಿವೆ. ಇಂತಹ ಸಮಯದಲ್ಲಿ ಕೋಮು ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು” ಎಂದು ಆಗ್ರಹಿಸಿದೆ.

ಪುರೋಲ್‌ನಲ್ಲಿ ಇಬ್ಬರು ಯುವಕರು (ಒಬ್ಬ ಹಿಂದು, ಮತ್ತೊಬ್ಬ ಮುಸ್ಲಿಂ) ಬಾಲಕಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ್ದರು. ಆ ಘಟನೆಯನ್ನು ಹಿಂದುತ್ವವಾದಿಗಳು ಲವ್‌ ಜಿಹಾದ್‌ ಎಂದು ಬಿಂಬಿಸಿದರು. ಮೇ 26ರಂದು ಪುರೋಲ್‌ನಲ್ಲಿ ಹಿಂಸಾಚಾರ ಆರಂಭವಾಯಿತು. ಅಂದಿನಿಂದ ಹಲವಾರು ಮುಸ್ಲಿಂ ಕುಟುಂಬಗಳು ಪಟ್ಟಣವನ್ನು ತೊರೆಯುತ್ತಿವೆ. ಅಲ್ಲಿ ಹಿಂದುತ್ವವಾದಿಗಳ ಕೋಮುವಾದಿ ಹಿಂಸಾಚಾರ ಉದ್ವಿಗ್ನಗೊಂಡಿದೆ. ಮುಸ್ಲಿಂ ವ್ಯಾಪಾರಿಗಳು ಜೂನ್ 15 ರೊಳಗೆ ಅಂಗಡಿಗಳನ್ನು ಖಾಲಿ ಮಾಡಬೇಕೆಂಬ ಬೆದರಿಕೆಯ ಪೋಸ್ಟರ್‍‌ಗಳಲ್ಲಿ  ಅಲ್ಲಿಲ್ಲ ಕಾಣಿಸಿಕೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...