ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ(ಎನ್‌ಎಸ್‌ಯುಐ) ಎಐಸಿಸಿ ಉಸ್ತುವಾರಿಯನ್ನಾಗಿ ಕನ್ನಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ನೇಮಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಯ್ಯ ಕುಮಾರ್ ಅವರನ್ನು ಎನ್‌ಎಸ್‌ಯುಐದ ಎಐಸಿಸಿ ಉಸ್ತುವಾರಿಯನ್ನಾಗಿ ತಕ್ಷಣದಿಂದಲೇ ಅನ್ವಯವಾಗುವಂತೆ ನೇಮಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀರಜ್ ಕುಂದನ್ ಅವರು ಎನ್‌ಎಸ್‌ಯುಐನ ಅಧ್ಯಕ್ಷರಾಗಿದ್ದಾರೆ.
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ದಾರ್ಥಿ ಒಕ್ಕೂಟದ ಅಧ್ಯಕ್ಷರಾಗಿದ್ದ ಕನ್ನಯ್ಯ ಅವರು 2021ರಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷದಿಂದ ಕಾಂಗ್ರೆಸ್ ಸೇರಿದ್ದರು.
ಈ ಸುದ್ದಿ ಓದಿದ್ದೀರಾ? ಪುಣೆ | ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರಾಂಶುಪಾಲರ ಮೇಲೆ ಹಲ್ಲೆ
ಪಕ್ಷಕ್ಕೆ ಸೇರ್ಪಡೆಯಾದ ನಂತರ ಅವರು, “ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಏಕೆಂದರೆ ಅದು ಕೇವಲ ಪಕ್ಷವಲ್ಲ, ಇದು ಒಂದು ಕಲ್ಪನೆ. ಇದು ದೇಶದ ಅತ್ಯಂತ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷವಾಗಿದೆ, ಮತ್ತು ನಾನು ‘ಪ್ರಜಾಪ್ರಭುತ್ವ’ಕ್ಕೆ ಒತ್ತು ನೀಡುತ್ತಿದ್ದೇನೆ . ಕಾಂಗ್ರೆಸ್ ಇಲ್ಲದೆ ದೇಶ ಉಳಿಯುವುದಿಲ್ಲ ಎಂದು ನಾನು ಮಾತ್ರವಲ್ಲದೆ ಅನೇಕರು ಭಾವಿಸುತ್ತಾರೆ” ಎಂದು ತಿಳಿಸಿದ್ದರು.
ಇತ್ತೀಚೆಗೆ ನಡೆದ ‘ಭಾರತ್ ಜೋಡೊ ಯಾತ್ರೆ’ಯಲ್ಲಿ ಭಾಗವಹಿಸಿದ್ದ ಕನ್ನಯ್ಯ , ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕಿದ್ದರು.